ಚಿಕ್ಕಮಗಳೂರು

ಅಡಕೆ ವಿಷಯದಲ್ಲಿ ರಾಜಕಾರಣ ಸಲ್ಲ: ಶಾಸಕ ಜೀವರಾಜ್

Published On :

ಚಿಕ್ಕಮಗಳೂರು:  ಅಡಕೆ ವಿಷಯದಲ್ಲಿ ಓಟಿನ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಶಾಸಕ ಡಿ.ಎನ್. ಜೀವರಾಜ್ ಹೇಳಿದರು.
ಅಡಕೆಯಲ್ಲಿ ವಿಷಕಾರಕ ಅಂಶಗಳು ಇದೆ ಎಂದು ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಯಾವುದೇ ಪ್ರಮಾಣ ಪತ್ರ ಸಲ್ಲಿಸಿಲ್ಲ ಎಂದು ಕಾಂಗ್ರೆಸ್ ಮುಖಂಡರು ಹೇಳಿಕೆ ನೀಡುತ್ತಿದ್ದಾರೆ. ಅಡಕೆ ವಿಷಯದಲ್ಲಿ  ಓಟಿನ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.
ರೈತರ ಮೇಲೆ ಪ್ರಹಾರ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈತರ ಮೇಲೆ ಪ್ರಹಾರ ನಡೆಯುತ್ತಿವೆ. ಸರ್ಕಾರ ನಡೆಸುವವರಿಗೆ ಬಡವರ ಬಗ್ಗೆ ಇಚ್ಚಾಶಕ್ತಿಯನ್ನು ಪ್ರದರ್ಶಿಸುವುದು ಅಗತ್ಯವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಪರ ನಿರ್ಧಾರ ಕೈಗೊಳ್ಳಲು ಮುಂದಾಬೇಕೆಂದು ಆಗ್ರಹಿಸಿದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಒತ್ತುವರಿ ಮತ್ತು ಅಡಕೆ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಲಾಗುವುದು ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹೇಳಿದ್ದಾರೆ. ಅಡಕೆ ಬೆಳೆಗಾರರಿಗೆ ರು. 1344 ಕೋಟಿ ಪ್ಯಾಕೇಜ್ ನೀಡುವುದಾಗಿ ಹೇಳಿದ್ದ ಸಚಿವರು ಹಣ ನೀಡದೆ ಅಡಕೆ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದ್ದಾರೆ ಎಂದು  ಆರೋಪಿಸಿದರು.
ಪೂರ್ಣ ಅನ್ಯಾಯ: ಬಜೆಟ್ ನಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಪೂರ್ಣ ಪ್ರಮಾಣದ ಅನ್ಯಾಯ ಮಾಡಲಾಗಿದೆ. ಶೃಂಗೇರಿ ತಾಲೂಕಿನ ಕೆರೆಕಟ್ಟೆಯಲ್ಲಿ ಈಗಾಗಲೇ ಹಗ್ಗ ನೇಯುವ ಘಟಕ ಆರಂಭಗೊಂಡಿದ್ದು, ಇಲ್ಲಿಗೆ ತೆಂಗಿನನಾರು ಉತ್ಪಾದನಾ ಘಟಕ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಹೇಳಿದರು.
ವಿಧಾನಸಭೆಯಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡುವ ಮನಸ್ಥಿತಿ ಮುಖ್ಯಮಂತ್ರಿಗಳಿಗೆ ಇರಲಿಲ್ಲ.  ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸರ್ಕಾರ ಪಾಲಿಟೆಕ್ನಿಕ್,  ಕೌಶಲ್ಯ ಅಭಿವೃದ್ಧಿ ಕೇಂದ್ರ, ವಾಜಪೇಯಿ ಶಾಲೆಗೆ ಹುದ್ದೆ ಸಮೇತ ಆದೇಶವಾಗಿತ್ತು. ಆದರೆ, ಇವುಗಳನ್ನು ಸರ್ಕಾರ ಹಿಂದಕ್ಕೆ ಪಡೆದುಕೊಂಡಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ವರಸಿದ್ದಿ ವೇಣುಗೋಪಾಲ್, ಪುಷ್ಪರಾಜ್, ವೆಂಕಟೇಶ್, ಎಂ.ಎಸ್. ನಿರಂಜನ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.