ಚಿಕ್ಕಮಗಳೂರು

'ಕೂಲಿ ಕಾರ್ಮಿಕರು, ರೈತರ ಸಂಕಷ್ಟಕ್ಕೆ ಹಿರೇಮಠ ಕಾರಣ'

Published On :

ಚಿಕ್ಕಮಗಳೂರು: ರೈತರು, ಕೂಲಿ ಕಾರ್ಮಿಕರ ಸಂಕಷ್ಟಕ್ಕೆ ಸಮಾಜ ಪರಿವರ್ತನಾ ಸಮುದಾಯದ ಮುಖಂಡ ಎಸ್.ಆರ್.ಹಿರೇಮಠ ಕಾರಣಕರ್ತರು ಎಂದು ಕೆಪಿಸಿಸಿ ಕಿಸಾನ್ ಖೇತ್ ಮಜ್ದೂರ್ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಸಚಿನ್ ಮೀಗಾ ಆರೋಪಿಸಿದ್ದಾರೆ.
ಎಸ್.ಆರ್. ಹಿರೇಮಠ ಅವರು ಬಡ ರೈತರು ಹಾಗೂ ಕೂಲಿ ಕಾರ್ಮಿಕರನ್ನು ದಾರಿ ತಪ್ಪಿಸುತ್ತಾ, ಸಣ್ಣ ಒತ್ತುವರಿಯನ್ನು ರಕ್ಷಿಸಲಾಗುವುದು, ದೊಡ್ಡ ಒತ್ತುವರಿದಾರರು ಮಾಡಿರುವ ಒತ್ತುವರಿಯನ್ನು ತೆರವುಗೊಳಿಸುವಂತೆ  ನ್ಯಾಯಾಲಯಕ್ಕೆ ಮನವಿ ಮಾಡಿರುವುದಾಗಿ ತಿಳಿಸುತ್ತಿದ್ದಾರೆಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಹೇಳಿದರು.
ಶೃಂಗೇರಿ ತಾಲೂಕಿನ ಕಿಗ್ಗಾ ಹೋಬಳಿ ಯಡದಾಳು ಗ್ರಾಮದ ಚಂದ್ರಶೇಖರಯ್ಯ 14 ಗುಂಟೆ ಜಮೀನನ್ನು ಒತ್ತುವರಿ ಮಾಡಿದ್ದು, ತೆರವು ಗೊಳಿಸುವಂತೆ ಈಗಾಗಲೇ ನೋಟಿಸ್ ಜಾರಿಗೊಳಿಸಲಾಗಿದೆ. ಈಗಾಗಲೇ ತಾಲೂಕಿನಲ್ಲಿ 1400 ಬಡ ರೈತರು ಮತ್ತು ಕೂಲಿ ಕಾರ್ಮಿಕರನ್ನು ಒಕ್ಕಲೆಬ್ಬಿಸುವ ಸಿದ್ಧತೆ ನಡೆಯುತ್ತಿದೆ ಎಂದರು.
ಅರ್ಜಿ ನೋಡಿದರೆ ಬಣ್ಣ ಬಯಲು: ಬಡ ರೈತರು ಜೀವನ ನಿರ್ವಹಣೆಗೆ ಮಾಡಿರುವ ಒತ್ತುವರಿ ತೆರವುಗೊಳಿಸಲು ನೀಡಿರುವ ನೋಟಿಸ್‌ನಲ್ಲಿ ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಸಿರುವ ಸಾರ್ವ್ವಜನಿಕ ಹಿತಾರಕ್ಷಣಾ ಅರ್ಜಿ ನಂಬರನ್ನು ನಮೂದಿಸಿದ್ದು, ಇದನ್ನು ಗಮನಿಸಿದರೆ ಸಮಾಜ ಪರಿವರ್ತನಾ ಸಮುದಾಯದ ಮುಖಂಡರ ಬಣ್ಣ ಬಯಲಾಗಿದೆ ಎಂದು ಆರೋಪಿಸಿದ್ದಾರೆ.
ನಗರಸಭಾ ಸದಸ್ಯ ಜಬ್ಬೀರ್, ಮುಖಂಡರುಗಳಾದ ಹಿರೇಮಗಳೂರು ರಾಮಚಂದ್ರ, ಪ್ರಸಾದ್ ಅಮೀನ್, ಪ್ರಕಾಶ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.