ಮಾರುಕಟ್ಟೆ ರಸ್ತೆ ಅಭಿವೃದ್ಧಿಗೆ ಚಾಲನೆ
ಚಿಕ್ಕಮಗಳೂರು: ನಗರದ ಮಾರ್ಕೆಟ್ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಸಿ.ಟಿ. ರವಿ ಅವರು ಮಂಗಳವಾರ ವೀಕ್ಷಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಮಾರ್ಕೆಟ್ ರಸ್ತೆ ಹಾಗೂ ಎಂಜಿ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ ಒಟ್ಟು 20 ಕೋಟಿ ಬಿಡುಗಡೆ ಮಾಡಿದೆ ಎಂದು ಹೇಳಿದರು.
ಈ ಎರಡು ರಸ್ತೆಗಳಲ್ಲಿ ಮಳೆ ನೀರಿನ ಚರಂಡಿ, ಕಾಂಕ್ರೀಕರಣ, ಫುಟ್ಪಾತ್ ಸೇರಿದಂತೆ ಹಲವು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಸದ್ಯ ಮಾರ್ಕೆಟ್ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಈ ಕಾಮಗಾರಿ ಮುಗಿಸಲು 9 ತಿಂಗಳು ಕಾಲಾವಕಾಶ ನೀಡಲಾಗಿದ್ದು, ಇನ್ನು 6 ತಿಂಗಳು ಮಾತ್ರ ಬಾಕಿ ಇದೆ. ಈ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಗಿಸಲು ಗುತ್ತಿಗೆದಾರರಿಗೆ ಹಾಗೂ ನಗರಸಭಾ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದರು.
ರಸ್ತೆ ಕಾಮಗಾರಿ: ನಗರದಲ್ಲಿ ನಗರೋತ್ಥಾನ, ಕೆಎಂಆರ್ಪಿ, ಸಿಎಂಎಸ್ ಟಿಡಿಪಿ ಯೋಜನೆಗಳಡಿಯಲ್ಲಿ ರಸ್ತೆಗಳ ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದು, ಮಾರ್ಕೆಟ್ ರಸ್ತೆಯ ಕಾಮಗಾರಿ ಮುಗಿಯುತ್ತಿದ್ದಂತೆ ಎಂಜಿ ರಸ್ತೆಯ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಸುವರ್ಣ ಗ್ರಾಮ ಯೋಜನೆಯಡಿ ಹಲವು ಗ್ರಾಮಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ಈ ಯೋಜನೆಯಡಿಯಲ್ಲಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಅತಿ ಹೆಚ್ಚು ಅನುದಾನ ತರಲಾಗಿದೆ. ಇಷ್ಟೆಲ್ಲಾ ಅಭಿವೃದ್ಧಿ ಕೆಲಸ ಮಾಡಿದರೂ ಕಾಂಗ್ರೆಸ್ ಮುಖಂಡರು ಟೀಕೆ ಮಾಡುವ ಮೂಲಕ ಭಂಡತನ ತೋರಿದ್ದಾರೆ. ಗಿಮಿಕ್ ರಾಜಕಾರಣ ಮಾಡುವುದು ಸರಿಯಲ್ಲ ಎಂದರು.
ನಗರಸಭೆ ಆಯುಕ್ತ ನಾಗಭೂಷಣ್, ನಗರಸಭಾ ಸದಸ್ಯ ಮುತ್ತಯ್ಯ, ನಗರ ಬಿಜೆಪಿ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

