17ರಿಂದ ಐಡಿ ಪೀಠದಲ್ಲಿ ಉರುಸ್: ಸಕಲ ಸೌಲಭ್ಯಕ್ಕೆ ಡಿಸಿ ಸೂಚನೆ
ಚಿಕ್ಕಮಗಳೂರು: ಐ.ಡಿ. ಪೀಠದಲ್ಲಿ ಮಾ.17 ರಿಂದ 19 ರವರೆಗೆ ನಡೆಯಲಿರುವ ಉರುಸ್ಗೆ ಆಗಮಿಸುವ ಭಕ್ತರಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಡಿಸಿ ಕಚೇರಿ ಸಭಾಂಗಣದಲ್ಲಿ ಉರುಸ್ ಸಂಬಂಧ ಅಗತ್ಯ ವ್ಯವಸ್ಥೆಗಳ ಬಗ್ಗೆ ಚರ್ಚಿಸಲು ಸೋಮವಾರ ನಡೆದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಐ.ಡಿ. ಪೀಠದ ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಮಾ.17 ರಿಂದ 19 ರವರೆಗೆ ನಡೆಯಲಿರುವ ಉರುಸ್ಗೆ ಆಗಮಿಸಲಿರುವ ಭಕ್ತರಿಗೆ ಕುಡಿಯುವ ನೀರು, ತಾತ್ಕಾಲಿಕ ಆಸ್ಪತ್ರೆ ಮತ್ತಿತರ ಮೂಲಭೂತ ಸೌಕರ್ಯ ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಿಂದ ಐ.ಡಿ. ಪೀಠಕ್ಕೆ ಹೋಗುವ ರಸ್ತೆಯ ವಾಹನ ಸಂಚಾರಕ್ಕೆ ಯೋಗ್ಯ ರೀತಿಯಲ್ಲಿರುವಂತೆ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಬೇಕು. ರಸ್ತೆ ತಿರುವುಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು. ಉರುಸ್ ನಡೆಯುವ ದಿನಗಳಲ್ಲಿ ನಿರಂತರ ವಿದ್ಯುತ್ ಸರಬರಾಜು ಮಾಡುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಭಕ್ತರು ಐ.ಡಿ. ಪೀಠಕ್ಕೆ ತೆರಳಲು ಅನುಕೂಲವಾಗುವಂತೆ ಹೆಚ್ಚುವರಿ ಬಸ್ ಸೌಲಭ್ಯವನ್ನು ಒದಗಿಸಬೇಕೆಂದು ತಿಳಿಸಿದ ಅವರು, ಶಾಂತಿಯುತವಾಗಿ ಉರುಸ್ ಕಾರ್ಯಕ್ರಮವನ್ನು ನಡೆಸಬೇಕೆಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಚೇತನ್, ಅಪರ ಜಿಲ್ಲಾಧಿಕಾರಿ ಕೆ.ಪಿ.ಹೊನಕೇರಿ, ಜಿಪಂ ಸಿಇಒ ಕರುಣಾಕರ್, ಉಪ ವಿಭಾಗಾಧಿಕಾರಿ ಚನ್ನಬಸಪ್ಪ ಉಪಸ್ಥಿತರಿದ್ದರು.
ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಶೇಖರಪ್ಪ ಅಧ್ಯಕ್ಷತೆಯಲ್ಲಿ ಉರುಸ್ ಪೂರ್ವಬಾವಿ ಸಭೆ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

