ಗ್ರಾಮೀಣ ಸಂಸ್ಕೃತಿ ನಗರ ಪ್ರದೇಶಕ್ಕೂ ಹಬ್ಬಲಿ
ಕ.ಪ್ರ.ವಾರ್ತೆ ್ಣ ಚಿಕ್ಕಮಗಳೂರು ್ಣ ಮಾ. 4
ಗ್ರಾಮೀಣ ಕ್ರೀಡೆ ಮತ್ತು ಸಂಸ್ಕೃತಿ ಕೇವಲ ಗ್ರಾಮಿಣ ಪ್ರದೇಶಕ್ಕೆ ಸೀಮಿತವಾಗದೆ ನಗರ ಪ್ರದೇಶಗಳಲ್ಲೂ ವ್ಯಾಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಬಿ.ಕರುಣಾಕರ್ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಬಾಲ ವಿಕಾಸ ಅಕಾಡೆಮಿ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಗರದ ಕುವೆಂಪು ಕಲಾ ಮಂದಿರದಲ್ಲಿ ಮಂಗಳವಾರ ನಡೆದ ಮಕ್ಕಳ ಹಬ್ಬ-2014 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಕ್ರೀಡೆ ಮತ್ತು ಸಂಸ್ಕೃತಿ ನಗರ ಪ್ರದೇಶದಲ್ಲಿ ಹಬ್ಬಿದಾಗ ನಗರ ಪ್ರದೇಶದ ಮಕ್ಕಳಿಗೂ ಅವುಗಳ ಬಗ್ಗೆ ತಿಳಿದುಕೊಳ್ಳಲು ಅನುಕೂಲ. ಅಂತಹ ಕ್ರೀಡೆ ಮತ್ತು ಕಲೆಗಳು ಮತ್ತಷ್ಟು ವಿಸ್ತಾರಗೊಳ್ಳಲು ಸಹಕಾರಿ ಎಂದರು.
ಎಚ್ಚರ: ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಬಿ.ಎಸ್.ಶೇಖರಪ್ಪ, ಗ್ರಾಮೀಣ ಪ್ರದೇಶದ ಕಲೆ ಮತ್ತು ಸಂಸ್ಕೃತಿಯನ್ನು ಪ್ರಚಾರಪಡಿಸುವ ಉದ್ದೇಶದಿಂದ ಸರ್ಕಾರ ಮಕ್ಕಳ ಹಬ್ಬ ಹಮ್ಮಿಕೊಂಡಿದ್ದು, ಶಿಕ್ಷಣದ ಜೊತೆ ಜೊತೆಗೆ ಮಕ್ಕಳು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದರು.
ಈ ಬಾರಿ ಸರ್ಕಾರಿ ಶಾಲೆಗಳ ಪಾಲ್ಗೊಳ್ಳುವಿಕೆ ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಈ ಕುರಿತು ಶಿಕ್ಷಣಾಧಿಕಾರಿಗಳು ಎಚ್ಚರ ವಹಿಸಬೇಕೆಂದರು.
ವಂಚಿತರಾಗಬಾರದು: ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಸಿ.ಟಿ.ರವಿ ಮಾತನಾಡಿ, ಮಕ್ಕಳು ಬಾಲ್ಯದಲ್ಲಿ ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಹೆಚ್ಚು ಸಂಭ್ರಮಿಸುವುದು ಸಹಜ, ಆದರೆ, ಇಂತಹ ವೇದಿಕೆಗಳನ್ನು ಬಳಸಿಕೊಂಡು ಮಕ್ಕಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದಾಗ ಸಮಾಜ ಅವರನ್ನು ಗುರುತಿಸುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚಂದ್ರಶೇಖರಯ್ಯ ಸ್ವಾಗತಿಸಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಬಸವರಾಜ್ ವಂದಿಸಿ, ಶೋಭಾ ಮಾಳಿ ಕಾರ್ಯಕ್ರಮ ನಿರೂಪಿಸಿದರು.
ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಮಂಗಳವಾರ ನಡೆದ ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಶೇಖರಪ್ಪ ಉದ್ಘಾಟಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

