ಚಿಕ್ಕಮಗಳೂರು

ಅಂಗನವಾಡಿ ಹುದ್ದೆಗೆ ಅರ್ಜಿ

Published On :

ಚಿಕ್ಕಮಗಳೂರು: ತಾಲೂಕಿನ ಅಂಗನವಾಡಿಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿಆಹ್ವಾನಿಸಲಾಗಿದೆ. ತಿರುಗುಣ, ನಗರ ವಾರ್ಡ್, ಹಲಸಬಾಳು, ಕೆ.ಬಿ. ಹಾಳ್, ಶಿವಪುರ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯರ ಹುದ್ದೆಗೆ ಮತ್ತು ಕೆಸವಿನಮನೆ (ಮೂಗ್ತಿಹಳ್ಳಿ ಗ್ರಾ.ಪಂ.), ಹುಲುವಲ್ಲೆ, ಪಂಡರವಳ್ಳಿ, ಕರಗಣೆ, ಹಳೇ ಲಕ್ಯಾ, ತಿರುಗುಣ, ದಾಸರಹಳ್ಳಿ, ಅಂಗನವಾಡಿಗಳಲ್ಲಿ ಸಹಾಯಕಿಯರ ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಮಾ.24 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ತಿಳಿಸಿದೆ.
ಅರ್ಜಿ ಆಹ್ವಾನ
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಮಾಜಿ ಸೈನಿಕರಿಗೆ ಪ್ರವಾಸಿ ಟ್ಯಾಕ್ಸಿಯನ್ನು ಖರೀದಿಸಲು ಸಹಾಯಧನಕ್ಕೆ ಅರ್ಹಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಾಜಿ ಸೈನಿಕರು ತಮ್ಮ ಅರ್ಜಿಗಳನ್ನು ಡಿಸ್‌ಚಾರ್ಜ್ ಪುಸ್ತಕ, ಗುರುತಿನ ಚೀಟಿ, ಡ್ರೈವಿಂಗ್ ಲೈಸೆನ್ಸ್ ಹಾಗೂ ಜಾತಿ ಪ್ರಮಾಣ ಪತ್ರದೊಂದಿಗೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ-ಪುನರ್ವಸತಿ ಇಲಾಖೆ, ಹಾಸನ, ಇವರಿಗೆ ಮಾ.15ರೊಳಗೆ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ಉಪ ನಿರ್ದೇಶಕರು, ಸೈನಿಕ ಕಲ್ಯಾಣ-ಪುನರ್ವಸತಿ ಇಲಾಖೆ, ಹಾಸನ ಇಲ್ಲಿಗೆ ಸಂಪರ್ಕಿಸಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.