'ಸಂಪ್ರದಾಯ ಸಂಸ್ಕೃತಿ ಜೀವನಾಡಿ'
ಬಾಳೆಹೊನ್ನೂರು: ಸಂಪ್ರದಾಯಗಳು ಭಾರತೀಯ ಸಂಸ್ಕೃತಿಯ ಜೀವನಾಡಿ ಎಂದು ಕೊಪ್ಪ ಜ್ಞಾನವಾಹಿನಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ವೆಂಕಟೇಶಮೂರ್ತಿ ಹೇಳಿದ್ದಾರೆ.
ಸಮೀಪದ ಹುಯಿಗೆರೆ ಶ್ರೀ ಈಶ್ವರ ಯುವ ಕಾರ್ಯಕರ್ತರ ಬಳಗ ಇತ್ತೀಚೆಗೆ ಹಮ್ಮಿಕೊಂಡಿದ್ದ 11ನೇ ವರ್ಷದ ಮಹಾಶಿವರಾತ್ರಿ ಜಾಗರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿವಿಧತೆಯಲ್ಲಿ ಏಕತೆಯನ್ನು ಕಂಡ ಭಾರತದಲ್ಲಿ ವಿವಿಧ ಧರ್ಮಗಳಿದ್ದು, ಆಯಾ ಧರ್ಮಕ್ಕನುಗುಣವಾಗಿ ಹಬ್ಬಗಳನ್ನು ಆಚರಿಸಲಾಗುತ್ತಿದೆ. ಈಗಿನ ಆಧುನಿಕತೆಯ ಭರಾಟೆಯಲ್ಲಿಯೂ ಗ್ರಾಮೀಣ ಪ್ರದೇಶದಲ್ಲಿ ಸಂಪ್ರದಾಯಗಳನ್ನು ಆಚರಿಸಿಕೊಂಡು ಬರುತ್ತಿರುವುದು ಶ್ಲಾಘನೀಯ. ಜಾತಿ ಮತ ಭೇದವಿಲ್ಲದೆ ಜಾಗರಣೆಯಲ್ಲಿ ತೊಡಗಿಸಿಕೊಂಡು ಗ್ರಾಮಸ್ಥರು ಸಾಮರಸ್ಯ ಸಾರಿದ್ದಾರೆಂದು ತಿಳಿಸಿದರು.
ಬಿಜೆಪಿ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಎಚ್.ಟಿ. ವಾಸು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುವಶಕ್ತಿಯು ಸಂಘಟನೆ ಮತ್ತು ಆಧ್ಯಾತ್ಮ ಚಿಂತನೆಯಲ್ಲಿ ತೊಡಗಿಸಿಕೊಳ್ಳುವಲ್ಲಿ ಕಾರ್ಯಕರ್ತರ ಬಳಗ ಯಶಸ್ಸು ಸಾಧಿಸಿದೆ. ಗ್ರಾಮಸ್ಥರ ಬೇಡಿಕೆಯಂತೆ ರಂಗಮಂದಿರವನ್ನು ಸರ್ಕಾರದ ವತಿಯಿಂದ ನಿರ್ಮಿಸಿಕೊಡಲಾಗಿದ್ದು, ಗ್ರಾಮಸ್ಥರ ಒಗ್ಗಟ್ಟಿನ ಫಲವಾಗಿ ಕಾರ್ಯಕ್ರಮ ಸಫಲತೆ ಕಂಡಿದೆ ಎಂದರು.
ಸಂಘದ ಅಧ್ಯಕ್ಷ ಎಚ್.ಆರ್. ಶಿವಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಅಧ್ಯಕ್ಷೆ ಸುನಂದಾಕೃಷ್ಣ, ಪಿ.ಸಿ.ಎಲ್.ಡಿ. ಬ್ಯಾಂಕ್ ಮಾಜಿ ಅಧ್ಯಕ್ಷ ಎಚ್.ಎಲ್. ಮಂಜುನಾಥಗೌಡ, ಎಪಿಎಂಸಿ ನಿರ್ದೇಶಕ ಬಿ.ಎಚ್. ಶಂಕರೇಗೌಡ, ಖಾಂಡ್ಯ ಹೋಬಳಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಚನ್ ಹುಯಿಗೆರೆ, ರಕ್ಷಿತಾ, ಜೆ.ಎಸ್. ಉಮೇಶ್, ಸತೀಶ್, ಎಚ್.ಎಸ್. ವೆಂಕಟೇಶ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

