ನಾಳೆ ದುರ್ಗಾಂಬಾ ಮಹಾ ರಥೋತ್ಸವ
ಶೃಂಗೇರಿ: ಶಾರದಾ ಪೀಠದ ಪ್ರಮುಖ ರಕ್ಷಣಾ ದೇವತೆಗಳಲ್ಲಿ ಒಂದಾಗಿರುವ ದುರ್ಗಾ ದೇವಸ್ಥಾನದಲ್ಲಿರುವ ಹರಾವರಿ ದುರ್ಬಾಂಬಾ ಮಹಾರಥೋತ್ಸವ ಮಾ. 9 ರ ಭಾನುವಾರ ನಡೆಯಲಿದೆ. ರಥೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದು, ಭಾನುವಾರ ಜಗದ್ಗುರು ಭಾರತೀ ತೀರ್ಥರ ಸಾನ್ನಿಧ್ಯದಲ್ಲಿ ಮಹಾರಥೋತ್ಸವ ನಡೆಯಲಿದೆ. ಅಂದು ದೇವಿಗೆ ವಿಶೇಷ ಪೂಜೆ ನೆರವೇರಲಿದ್ದು, ಭಕ್ತರಿಂದ ತುಲಾಭಾರ, ಕುಂಕುಮಾರ್ಚನೆ ಸೇವೆ ಇತ್ಯಾದಿ ಹರಕೆ ನೆರವೇರಲಿದೆ.
ಇಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಚಿಕ್ಕಮಗಳೂರು: ನಗರ ಉಪ ವಿಭಾಗ ವ್ಯಾಪ್ತಿಯ ಹುಡ್ಕೋ ಫೀಡರ್ ಮಾರ್ಗದಲ್ಲಿ ಸುಧಾರಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಶನಿವಾರ ಮಧ್ಯಾಹ್ನ 1 ರಿಂದ ಸಂಜೆ 5 ಗಂಟೆಯವರೆಗೆ ಚಿಕ್ಕಮಗಳೂರು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೊಮ್ಮುವ ಹುಡ್ಕೋ ಫೀಡರ್ ನ ಎ.ಐ.ಟಿ. ಕಾಲೇಜ್, ಎ.ಐ.ಟಿ ಸರ್ಕಲ್, ಕೆ.ಹೆಚ್.ಬಿ, ಜಿಲ್ಲಾ ಪಂಚಾಯತ್, ಗೇಟ್ ವೇ ಹೋಟೆಲ್, ಇಂಡಸ್ಟ್ರಿಯಲ್ ಏರಿಯಾ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ
ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಇಲಾಖೆಯ ವೆಬ್ಸ್ಸೈಟ್ ಢಿಢಿಢಿ.ಝ್ಛ್ಟ್ಟಟಜಜ್ಡ್ಛಛಡ್ಝ್ಟಿಟಿ.್ಞಛ್ಠ.ಟ್ಝ್ಛಿ.್ಝಟಿ ನಲ್ಲಿ ಪ್ರಕಟಿಸಲಾಗಿದೆ. ಬಾಧಿತ ಶಿಕ್ಷಕರು ಜೇಷ್ಠತಾ ಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಮಾ.10 ಕೊನೆಯ ದಿನವಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಆಯಾ ಬ್ಲಾಕ್ಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅಥವಾ ಚಿಕ್ಕಮಗಳೂರು ಉಪ ನಿರ್ದೇಶಕರು ಅವರ ಕಚೇರಿಯಲ್ಲಿ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ ಎಂದು ಡಿಡಿಪಿಐ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಸತಿ ಸೌಲಭ್ಯ ತಾತ್ಕಾಲಿಕ ಸ್ಥಗಿತ
ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಅರಣ್ಯ ಸಂರಕ್ಷಣೆ ಮತ್ತು ವನ್ಯಜೀವಿಗಳ ಸಂರಕ್ಷಣೆಯ ಹಿತದೃಷ್ಟಿಯಿಂದ ಭದ್ರಾ ಹುಲಿ ಸಂರಕ್ಷಿತ, ಚಿಕ್ಕಮಗಳೂರು ವ್ಯಾಪ್ತಿಯ ಮುತ್ತೋಡಿ ಮತ್ತು ಲಕ್ಕವಳ್ಳಿ ವನ್ಯಜೀವಿ ವಲಯಗಳಲ್ಲಿನ ವಸತಿ ಮತ್ತು ಸಫಾರಿ ಸೌಲಭ್ಯಗಳನ್ನು ಫೆ.1ರಿಂದ ಸಾರ್ವಜನಿಕರಿಗೆ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಭದ್ರಾ ಹುಲಿ ಸಂರಕ್ಷಿತ, ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

