ನಾಳೆ ಮತ ಕೇಂದ್ರಗಳಲ್ಲಿ ವಿಶೇಷ ಶಿಬಿರ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಮಾ.7
ಜಿಲ್ಲೆಯ ಪ್ರತಿ ಮತದಾನ ಕೇಂದ್ರಗಳಲ್ಲಿ ಮಾ.9ರಂದು ವಿಶೇಷ ಶಿಬಿರಗಳು ನಡೆಯಲಿವೆ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾವಣಿ ಆಗಿದೆಯೇ, ಇಲ್ಲವೇ ಎಂಬುದನ್ನು ಮತದಾರರು ಪರಿಶೀಲಿಸಿ ಖಾತ್ರಿ ಪಡಿಸಿಕೊಳ್ಳಬಹುದಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಬಿ. ಕರುಣಾಕರ್ ಹೇಳಿದ್ದಾರೆ.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ ವ್ಯವಸ್ಥಿತ ಮತದಾರರ ಶಿಕ್ಷಣ ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಸಂಬಂಧ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಏ.17ರಂದು ಲೋಕಸಭಾ ಚುನಾವಣೆ ನಡೆಯಲಿದೆ. ಮತದಾರ ಪಟ್ಟಿಯಲ್ಲಿ ಪ್ರತಿಯೊಬ್ಬ ನಾಗರೀಕರನೂ ಹೆಸರು ನೋಂದಾಯಿಸಬೇಕು. ನಿಮ್ಮ ಗ್ರಾಮ ಅಥವಾ ನಗರ ಪ್ರದೇಶದಲ್ಲಿ ಹೆಸರು ನೋಂದಾವಣೆ ಆಗಿದೆಯೇ ಇಲ್ಲವೇ ಎಂಬುದು ಮಾ.9ರಂದು ಪ್ರತಿ ಮತದಾನ ಕೇಂದ್ರಗಳಲ್ಲಿ ನಡೆಯಲಿರುವ ವಿಶೇಷ ಶಿಬಿರಗಳಲ್ಲಿ ಪರಿಶೀಲಿಸಬಹುದು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅಗತ್ಯ ಅರ್ಜಿಗಳು ಶಿಬಿರದಲ್ಲಿ ದೊರೆಯಲಿವೆ. ಪಟ್ಟಿಯಲ್ಲಿ ಹೆಸರು ಇಲ್ಲದವರು ತಮ್ಮ ಹೆಸರುಗಳನ್ನು ನೋಂದಾಯಿಸಬಹುದಾಗಿದೆ ಎಂದರು.
ಮಾ.16ರವರೆಗೆ ಅವಕಾಶ: ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಹೆಸರು, ತಂದೆಯ ಹೆಸರು, ವಾಸಸ್ಥಳ, ಜನ್ಮ ದಿನಾಂಕ, ವಯಸ್ಸು, ಲಿಂಗ ಮತ್ತಿತರ ದೋಷದ ತಿದ್ದುಪಡಿಗೆ ಹಾಗೂ ಆಕಸ್ಮಿಕವಾಗಿ ಕಾರಣವಿಲ್ಲದೆ ಹೆಸರು ಬಿಟ್ಟುಹೋಗಿದಲ್ಲಿ ಬೂತ್ ಮಟ್ಟದ ಅಧಿಕಾರಿಗಳಿಗೆ ಅಥವಾ ತಾಲೂಕು ಕಚೇರಿಯಲ್ಲಿ ನಿಗದಿತ ನಮೂನೆಯಲ್ಲಿ ಫಾರಂ ನಂ.6 ಅನ್ನು ಭರ್ತಿ ಮಾಡಿ ಮಾ.16 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಿದರು.
ಮತದಾರರ ಗುರುತಿನ ಚೀಟಿ ಇದ್ದು, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಇಲ್ಲದಿದ್ದಲ್ಲಿ ಅಂತಹವರು ಮತದಾನ ಮಾಡಲು ಅವಕಾಶವಿರುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರು ಮತದಾರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಪರಿಶೀಲಿಸಬೇಕೆಂದು ಅವರು ಕರೆ ನೀಡಿದರು.
ಗೊಂದಲ ನಿವಾರಣೆಯಾಗಲಿ: 6 ತಿಂಗಳ ಕಾಲಾವಧಿಯಲ್ಲಿ ಸಾಮಾನ್ಯವಾಗಿ ಒಂದೆಡೆ ವಾಸಿಸುತ್ತಿರುವವರು ಅಗತ್ಯ ದಾಖಲೆಗಳಾದ ರೇಷನ್ ಕಾರ್ಡ್, ಆಧಾರ್ ಅಥವಾ ವಿಳಾಸ ದೃಢೀಕರಣ ಹಾಗೂ ವಯಸ್ಸಿನ ದೃಢೀಕರಣದೊಂದಿಗೆ ಮತದಾರರ ಪಟ್ಟಿ ನೋಂದಣಿಗೆ ಅರ್ಜಿ ಸಲ್ಲಿಸಬಹುದು. ಚುನಾವಣಾ ಆಯೋಗ, ರಾಜಕೀಯ ಪಕ್ಷದ ಬೂತ್ಮಟ್ಟದ ಏಜೆಂಟ್ ಹಾಗೂ ಬೂತ್ಮಟ್ಟದ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವುದರಿಂದ ಮತದಾರರ ಪಟ್ಟಿಯಲ್ಲಾಗುವ ಗೊಂದಲಗಳನ್ನು ನಿರ್ಮೂಲನೆ ಮಾಡಬಹುದೆಂದರು.
ಪ್ರತಿಯೊಬ್ಬ ಸಾರ್ವಜನಿಕರು ತಪ್ಪದೇ ಮತದಾನ ಮಾಡುವುದರ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು. ಮತದಾನ ಪ್ರಕ್ರಿಯೆ ಬಗ್ಗೆ ಅರಿವು ಮೂಡಿಸಲು ಬೀದಿನಾಟಕ, ಮಾನವ ಸರಪಳಿ, ಜಾಗೃತಿ ಜಾಥಾ ಹಾಗೂ ಮತ್ತಿತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಂದ್ರಶೇಖರಯ್ಯ, ಸಾ.ಶಿ. ಇಲಾಖೆಯ ಉಪನಿರ್ದೇಶಕ ರಾಜಪ್ಪ, ನಗರಸಭಾ ಆಯುಕ್ತ ನಾಗಭೂಷಣ್,
ಸಮಾಜ ಕಲ್ಯಾಣಾಧಿಕಾರಿ ಮಂಜುನಾಥ್, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಹಾಗೂ ತಾಪಂ ಕಾರ್ಯನಿರ್ವಹಣಾಧಿಕಾರಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

