ಮೃತ ಕಮಲೇಶ್ ಕುಟುಂಬಕ್ಕೆ ನೆರವು ಕಲ್ಪಿಸಲು ಒತ್ತಾಯ
ಬೀರೂರು: ಇಲ್ಲಿಗೆ ಸಮೀಪದ ದೇವರಹಳ್ಳಿಯಲ್ಲಿ ತೋಟದಲ್ಲಿ ಕೂಲಿ ಕಾರ್ಮಿಕನಾಗಿದ್ದ ಕಮಲೇಶ್ ರಾತ್ರಿ ಕೆಲಸದಲ್ಲಿ ನಿರತನಾಗಿದ್ದ ಸಂದರ್ಭ ಜೆಸಿಬಿ ಗುದ್ದಿದ ಪರಿಣಾಮ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಸೂಕ್ತ ನ್ಯಾಯ ಒದಗಿಸಬೇಕೆಂದು ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.
ಭದ್ರಾವತಿ ಮೂಲದ ಕಮಲೇಶ್ ಹಾಗೂ ರತ್ನಮ್ಮ ದಂಪತಿ ಕಳೆದ 6 ವರ್ಷಗಳಿಂದ ತೋಟದಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು. ಇವರ ವಾಸ್ತವಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸದೇ ಗುಡಿಸಿಲಿನಲ್ಲೇ ವಾಸವಾಗಿದ್ದರು. ಕಮಲೇಶ್ ಸಾವಿನಿಂದ ಹೆಂಡತಿ ಮಕ್ಕಳು ಅನಾಥರಾಗಿದ್ದಾರೆ. ಇವರಿಗೆ ಸೂಕ್ತ ನ್ಯಾಯ ಒದಗಿಸಬೇಕೆಂದು ದಸಂಸ ಜಿಲ್ಲಾ ಸಂಚಾಲಕ ವೆಂಕಟೇಶ್ ಆಗ್ರಹಿಸಿದ್ದಾರೆ.
ದೇವರಹಳ್ಳಿ ಜಗದೀಶ್ ಎಂಬವರ ತೋಟದಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಪೈಪ್ ಅಳವಡಿಸಲು ಜೆಸಿಬಿ ನೆರವಿನಿಂದ ಗುಂಡಿ ತೆಗೆಯಲಾಗುತ್ತಿತ್ತು. ಯಂತ್ರ ಸಮೀಪದಲ್ಲೆ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಕಮಲೇಶ್ಗೆ ಜೆಸಿಬಿ ಗುದ್ದಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅಂದೆ ಅವರು ಮೃತಪಟ್ಟಿದ್ದರು. ಮೃತನ ಪತ್ನಿ ರತ್ನಮ್ಮ ನೀಡಿದ ದೂರಿನ ಅನ್ವಯ ಬೀರೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ಸಂಭವಿಸಿದ ಸ್ಥಳಕ್ಕೆ ತಾಲೂಕು ದಂಡಾಧಿಕಾರಿ ಮತ್ತೀತರ ಅಧಿಕಾರಿಗಳು ಭೇಟಿ ನೀಡಿ ಕಾರ್ಮಿಕ ಕಾನೂನು ಮತ್ತು ಕಾರ್ಮಿಕ ಇಲಾಖೆ ವರದಿಯಂತೆ ಕ್ರಮ ಕೈಗೊಂಡು ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವ ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

