ಚಿಕ್ಕಮಗಳೂರು

ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆ

Published On :

ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಭಾನುವಾರ ಸಂಜೆ ಗುಡುಗು ಸಹಿತ ಸಾಧಾರಣ ಮಳೆ ಬಂದಿತು.
ಕೆಲವು ದಿನಗಳಿಂದ ಸಂಜೆಯ ವೇಳೆಗೆ ಮೋಡ ಕವಿದ ವಾತಾವರಣ ಇದ್ದರೂ ಮಳೆ ಬರುತ್ತಿರಲಿಲ್ಲ. ಭಾನುವಾರವೂ ಇದೇ ವಾತಾವರಣ ಇತ್ತು. ಮಧ್ಯಾಹ್ನ 3 ಗಂಟೆಯ ನಂತರದಲ್ಲಿ ಜಿಲ್ಲೆಯ ಮಲೆನಾಡಿನ ಹಲವೆಡೆ ಚದುರಿದಂತೆ ಸಾಧಾರಣ ಮಳೆ ಬಂದಿತು.
ತರೀಕೆರೆ ಹಾಗೂ ಕಡೂರು ತಾಲೂಕಿನಲ್ಲಿ ಸಂಜೆಯ ವೇಳೆಗೆ ಮೋಡ ಕವಿದ ವಾತಾವರಣ ಇತ್ತು. ಇನ್ನುಳಿದಂತೆ ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್. ಪುರ ತಾಲೂಕಿನಲ್ಲಿ ಕೆಲ ಸಮಯದವರೆಗೆ ಮಳೆ ಬಂದಿತು. ಬಾಳೆಹೊನ್ನೂರಿನಲ್ಲಿ ಸಂಜೆ 4 ಗಂಟೆಗೆ ಮಳೆ ಆರಂಭವಾಗಿದ್ದರಿಂದ ಸಂತೆಗೆ ಬಂದಿದ್ದ ಜನರಿಗೆ ಹಾಗೂ ವ್ಯಾಪಾರಸ್ಥರಿಗೆ ಅನಾನುಕೂಲವಾಯಿತು.
ಎನ್.ಆರ್.ಪುರದಲ್ಲಿ ಮಳೆ
ನರಸಿಂಹರಾಜಪುರ:  ಪಟ್ಟಣದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆ ಹೊತ್ತಿಗೆ ಶುರುವಾದ ಗುಡುಗು ಸಹಿತ ಮಳೆಯು ಸಂಜೆಯವರೆಗೂ ಸುರಿಯಿತು.
ಶನಿವಾರ 1 ತಾಸು ಸುರಿದ ಮಳೆದಿತ್ತು. ಭಾನುವಾರ ಸಹ ಸುರಿದ ಮಳೆಯಿಂದಾಗಿ ಭೂಮಿಯನ್ನೂ ತಂಪಾಗಿಸಿತು. ತುಂತುರು ಹನಿಯೊಂದಿಗೆ ಸುಮಾರು 3 ಗಂಟೆಗೂ ಹೆಚ್ಚು ಕಾಲ  ಮಳೆ ಸುರಿಯಿತು ಇದರಿಂದ ತೋಟಗಳಿಗೆ ಅನುಕೂಲವಾದಂತಾಯಿತು.
ಹಸಿರು ಮೇವು ಚಿಗುರಿ ಜಾನುವಾರುಗಳಿಗೂ ಅನುಕೂಲವಾಗಲಿದೆ. ಬೇಸಿಗೆಯ ದಿನಗಳಲ್ಲಿ ಕಾಡ್ಗಿಚ್ಚು ಹಬ್ಬುವುದು, ಒಣಗಿದ ಬಿದಿರುಗಳಿಗೆ ಬೆಂಕಿ ಬೀಳುವುದು ಸಾಮಾನ್ಯವಾಗಿದ್ದು, ಮಳೆ ಆಗಮನದಿಂದ ಕಾಡಿನ ಬೆಂಕಿಯ ಭೀತಿ ಕಡಿಮೆಯಾಗಿದೆ. ಭಾನುವಾರ ತಾಲೂಕಿನ ಎಲ್ಲಾ ಕಡೆ ಉತ್ತಮ ಮಳೆಯಾಗಿದೆ.
ಮಳೆಗೆ ಕುಸಿದ ವೇದಿಕೆ
ಮೂಡಿಗೆರೆ: ತಾಲೂಕಿನಾದ್ಯಂತ ಭಾನುವಾರ ಸಂಜೆ ಪ್ರಾರಂಭವಾದ ಮಳೆ, ಬಿಸಿಲಿನಿಂದ ಧಗಧಗಿಸುತ್ತಿದ್ದ ಭೂಮಿಯನ್ನು ತಂಪೆರೆಯಿತು.
ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಠಾತ್ ಮಳೆಯ ಆಗಮನದಿಂದ ಕಾರ್ಯಕ್ರಮಕ್ಕೆ ಆಗಮಿಸಿದ ಸಾರ್ವಜನಿಕರು ಮಳೆಯಿಂದ ರಕ್ಷಿಸಿಕೊಳ್ಳಲು ಪರದಾಡಬೇಕಾಯಿತು.
ಮಳೆಯ ರಭಸಕ್ಕೆ ವೇದಿಕೆಯು ಕುಸಿಯಿತು. ಮಳೆರಾಯನ ಆರ್ಭಟದಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಸ್ಥಗಿತಗೊಂಡಿತು. ಪಟ್ಟಣದಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.