ಚಿಕ್ಕಮಗಳೂರು

ವೈಭವಯುತ ದುರ್ಗಾಂಬಾ ರಥೋತ್ಸವ

Published On :

ಶೃಂಗೇರಿ: ತಾಲೂಕಿನ ವಿದ್ಯಾರಣ್ಯಪುರ ಪಂಚಾಯಿತಿ ವ್ಯಾಪ್ತಿಯ ದುರ್ಗಾ ದೇವಸ್ಥಾನದಲ್ಲಿರುವ ಶೃಂಗೇರಿ ಶಾರದಾ ಪೀಠದ 4 ಪ್ರಮುಖ ರಕ್ಷಣಾ ದೇವತೆಗಳಲ್ಲಿ ಒಂದಾಗಿರುವ ಹರಾವರಿ ದುರ್ಗಾಂಬಾ ಮಹಾರಥೋತ್ಸವ ಭಾನುವಾರ ವೈಭವಯುತವಾಗಿ ನಡೆಯಿತು. ಬೆಳಗ್ಗೆ ಜಗದ್ಗುರು ಭಾರತೀ ತೀರ್ಥ ಮಹಾಸ್ವಾಮಿಗಳವರು ದುರ್ಗಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು. ಮಹಾಮಂಗಳಾರತಿಯ ನಂತರ ಭಾರತೀ ತೀರ್ಥರ ಸಾನ್ನಿಧ್ಯದಲ್ಲಿ ವೇದಘೋಷದೊಂದಿಗೆ ಮಹಾರಥೋತ್ಸವ ನಡೆಯಿತು. ರಥೋತ್ಸವಾಂಗ ವಿಶೇಷ ಪೂಜೆ, ಹೋಮಹವಢ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದು, ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರು ದುರ್ಗಾಂಬೆ ಸನ್ನಿಧಿಯಲ್ಲಿ ದುರ್ಗಾಸಪ್ತಶತಿ ಪಾರಾಯಣ, ತುಲಾಭಾರ ಸೇವೆ, ಕುಂಕುಮಾರ್ಚನೆ ಸೇವೆ, ಹರಕೆ ಸೇವೆ ಸಲ್ಲಿಸಿದರು. ದಧ್ಯನ್ಯ ಹಾಗೂ ಪಾಯಸಾನ್ನ ಇಲ್ಲಿಯ ವಿಶಿಷ್ಟ ಸೇವೆ. ಸುಡು ಬಿಸಿಲನ್ನು ಲೆಕ್ಕಿಸದೇ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಮಹಾರಥೋತ್ಸವದಲ್ಲಿ ಪಾಲ್ಗೊಂಡು ದುರ್ಗಾಂಬೆಯ ದರ್ಶನ ಪಡೆದರು. ಸೋಮವಾರ ದುರ್ಗಾಂಬೆಗೆ ಅವಭೃತ ನಡೆಯಲಿದ್ದು, ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.
'ಚುನಾವಣಾಧಿಕಾರಿಕೈಗೊಂಬೆಯಾಗದಿರಲಿ'
ಮೂಡಿಗೆರೆ: ಲೋಕಸಭಾ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾಗಿದ್ದರೂ, ಚುನಾವಣಾ ಅಧಿಕಾರಿಗಳು ವಿವಿಧ ಪಕ್ಷಗಳ ಕೈಗೊಂಬೆಯಾಗಿ ಕರ್ತವ್ಯ ಮರೆತಿರುವುದು ಕಂಡು ಬರುತ್ತಿದ್ದು, ಅಕ್ರಮ ಚುನಾವಣೆ ನಡೆಯುವ ಸಾಧ್ಯತೆ ಬಹುತೇಕ ನಿಚ್ಚಳವಾಗಿದೆ ಎಂದು ಎಸ್‌ಡಿಪಿಐ ಮುಖಂಡ ಕೆ.ಎಚ್. ಮುಹಮ್ಮದ್ ಮುಸ್ಲಿಯಾರ್ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಶನಿವಾರ ಹೇಳಿಕೆ ನೀಡಿರುವ ಅವರು, ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಚುನಾವಣಾ ಆಯೋಗದ ಕಾನೂನು ಕಟ್ಟಳೆಗಳನ್ನು ಯಥಾವತ್ತಾಗಿ ಪಾಲಿಸಬೇಕು. ಆದರೆ ಪ್ರತಿ ಚುನಾವಣೆಗಳಲ್ಲಿ ವಿವಿಧ ಪಕ್ಷಗಳ ಪರ ಪ್ರಚಾರಕರಂತೆ ಕೆಲವು ಆಯಕಟ್ಟಿನ ಸ್ಥಳಗಳಲ್ಲಿರುವ ಅಧಿಕಾರಿಗಳು ವರ್ತಿಸುವುದು ಮಾಮೂಲಿನಂತೆ ನಡೆಯುತ್ತದೆ. ಆದ್ದರಿಂದ ಲೋಕಸಭಾ ವ್ಯಾಪ್ತಿಯೊಳಗೆ ಹುಟ್ಟಿನಿಂದ ಇರುವ ಮತ್ತು ಸರ್ಕಾರಿ ಅಧಿಕಾರದಲ್ಲಿರುವವರನ್ನು ತಕ್ಷಣ ಬೇರೆ ಲೋಕಸಭಾ ಕ್ಷೇತ್ರಕ್ಕೆ ಕಳುಹಿಸಬೇಕು ಎಂದು ಆಗ್ರಹಿಸಿದ್ದಾರೆ.
12ರಂದು ಪ್ರತಿಭಟನೆ
ಭದ್ರಾವತಿ: ಭದ್ರಾವತಿ ತಾಲೂಕು ಕಚೇರಿಯಲ್ಲಿನ ಭ್ರಷ್ಟಾಚಾರ ವಿರೋಧಿಸಿ, ಪಿಎಲ್‌ಡಿ ಬ್ಯಾಂಕಿನವರು ರೈತರಿಗೆ ಕೊಡುತ್ತಿರುವ ಕಿರುಕುಳ ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆಯು ಮಾ. 12ರಂದು ಬೆಳಗ್ಗೆ 11 ಗಂಟೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.