ಚಿಕ್ಕಮಗಳೂರು

ಸಾಹಿತ್ಯ ಸಮ್ಮೇಳನ ಮುಂದಕ್ಕೆ

Published On :

ತರೀಕೆರೆ: ತಾಲೂಕು ಕಸಾಪ ವತಿಯಿಂದ ಪಟ್ಟಣದ ಆನ್ನಪೂರ್ಣ ಭವನದಲ್ಲಿ ಮಾ. 12 ರಂದು ಏರ್ಪಡಿಸಲಾಗಿದ್ದ 12ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಚುನಾವಣಾ ನೀತಿ ಸಂಹಿತೆ ಕಾರಣದಿಂದಾಗಿ ಮುಂದೂಡಲಾಗಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಜಿ.ಸುಬ್ರಹ್ಮಣ್ಯ ತಿಳಿಸಿದ್ದಾರೆ.
ಸಮ್ಮೇಳನದ ಸಿದ್ಧತೆಯಲ್ಲ್ಲಿ ಸಹಕರಿಸಿದ ಪರಿಷತ್ತು ಪದಾಧಿಕಾರಿಗಳು, ಸದಸ್ಯರಿಗೆ, ಸಾರ್ವಜನಿಕರಿಗೆ ಮತ್ತು ಸಂಘ ಸಂಸ್ಥೆಗಳಿಗೆ ಕೃತಜ್ಞತೆ ಅರ್ಪಿಸಿದ್ದು, ಸಮ್ಮೇಳನ ನಡೆಯುವ ದಿನಾಂಕವನ್ನು ಮುಂದೆ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.


ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಲಿ
ಮೂಡಿಗೆರೆ: ತಾಲೂಕಿನಾದ್ಯಂತ ಜನರು ಕಾಫಿಯನ್ನೆ ಅವಲಂಬಿಸಿಕೊಂಡಿದ್ದಾರೆ. ಆದರೆ, ಕಾಫಿಗೆ ಬೆಲೆ ಇದೆ ಬೆಳೆ ಇಲ್ಲದಂತ ಪರಿಸ್ಥಿತಿ ಎದುರಾಗಿದೆ. ಬೆಳೆಗಾರರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ ಎಂದು ಶಾಸಕ ಬಿ.ಬಿ. ನಿಂಗಯ್ಯ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಇದೇ ವೇಳೆ ಪಕ್ಷದ ಕ್ಷೇತ್ರಾಧ್ಯಕ್ಷರಾಗಿ 10 ವರ್ಷ ಉತ್ತಮ ಸೇವೆ ಸಲ್ಲಿಸಿದ ಡಿ.ಆರ್. ಉಮಾಪತಿ ಅವರನ್ನು ಅಭಿನಂದಿಸಿದರು. ನೂತನ ಕ್ಷೇತ್ರಾಧ್ಯಕ್ಷರಾಗಿ ಆಯ್ಕೆಯಾದ ಗಬ್ಬಳ್ಳಿ ಚಂದ್ರೇಗೌಡರನ್ನು ಸ್ವಾಗತಿಸಿದರು.  ವಿಜೇಂದ್ರ, ಪ್ರಕಾಶ್, ಶಾಹೀರ್ ಹುಸೇನ್, ಲಕ್ಷ್ಮಣ್‌ಗೌಡ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.