ಚಿಕ್ಕಮಗಳೂರು

ಸ್ತ್ರೀಯರು ಆರೋಗ್ಯ ಕಾಳಜಿ ವಹಿಸಲಿ: ಡಾ. ಕಲ್ಪನಾ

Published On :

ಬಾಳೆಹೊನ್ನೂರು: ಎಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲೂ ಕುಟುಂಬವನ್ನು ನಿರ್ವಹಿಸುವ ಮಹಿಳೆಯರು ತಮ್ಮ ಆರೋಗ್ಯದ ಕುರಿತು ಅಗತ್ಯವಾಗಿ ಕಾಳಜಿ ವಹಿಸಬೇಕು ಎಂದು ಬೆಂಗಳೂರಿನ ಸೆಂಟ್ ಜಾನ್ಸ್ ಮೆಡಿಕಲ್ ಕಾಲೇಜಿನ ವೈದ್ಯೆ ಡಾ. ಕಲ್ಪನಾ ಹೇಳಿದರು.
ಇಲ್ಲಿನ ಇನ್ನರ್‌ವ್ಹೀಲ್ ಕ್ಲಬ್ ಸ್ಥಳೀಯ ರೋಟರಿ ಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಶನಿವಾರ ಆಯೋಜಿಸಿದ್ದ ಸ್ತನ ಕ್ಯಾನ್ಸರ್ ಮತ್ತು ಸ್ತ್ರೀ ರೋಗಗಳ ತಪಾಸಣಾ ಉಚಿತ ಶಿಬಿರದಲ್ಲಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಗರ್ಭಕೋಶ, ಸ್ತನ ಕ್ಯಾನ್ಸರ್ ಮತ್ತಿತರ ಮಾರಕ ಕಾಯಿಲೆಗಳು ಕಂಡುಬರುತ್ತಿದ್ದು, ಅವುಗಳ ಕುರಿತು ಸೂಕ್ತ ಮಾಹಿತಿ ಇಲ್ಲದೆ ಸರಿಯಾದ ಚಿಕಿತ್ಸೆ ಪಡೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮಹಿಳೆಯರು ಇದನ್ನು ಪ್ರಥಮ ಹಂತದಲ್ಲೇ ತಡೆಗಟ್ಟಲು ಸೂಕ್ತ ಮಾಹಿತಿ ಪಡೆದಿರಬೇಕು ಎಂದು ತಿಳಿಸಿದರು.
ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷೆ ವೈಶಾಲಿ ವಿ.ಕುಡ್ವ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತೀರ್ಥಹಳ್ಳಿ ಜೆಸಿ ಆಸ್ಪತ್ರೆಯ ವೈದ್ಯೆ ಡಾ. ಕೆ.ಎಂ. ಸುಮಾ, ಇನ್ನರ್‌ವ್ಹೀಲ್ ಕ್ಲಬ್ ಕಾರ್ಯದರ್ಶಿ ವಿದ್ಯಾ ಆರ್. ಪೈ, ಸದಸ್ಯರಾದ ಬಿ.ಸಿ. ಗೀತಾ, ಪ್ರಸನ್ನಾ ಜಿ.ಭಟ್, ವಿದ್ಯಾ ಎ.ಶೆಟ್ಟಿ, ನಿವೇದಿತಾ ಗಜೇಂದ್ರ, ಕೌಶಲ್ಯ ನಾಗೇಶ್, ಸೀಮಾ, ಸವಿತಾ ಕೃಷ್ಣಮೂರ್ತಿ, ನಿಶ್ಚಿತಾ ಶ್ರೀಹರ್ಷ, ನಯನಾ, ಸಮತಾ ಮಿಸ್ಕಿತ್, ನಾಗವೇಣಿ ಉಪಸ್ಥಿತರಿದ್ದರು.
ಶಿಬಿರದಲ್ಲಿ ಸುಮಾರು 90ಕ್ಕೂ ಅಧಿಕ ಮಹಿಳೆಯರು ತಪಾಸಣೆಗೆ ಒಳಪಟ್ಟರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.