ಪಕ್ಷೇತರರಾಗಿ ಮುತ್ತಪ್ಪ ಸ್ಪರ್ಧೆ
ಚಿಕ್ಕಮಗಳೂರು: ಮೂಡಿಗೆರೆ ಲ್ಯಾಂಪ್ಸ್ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹಾಗೂ ರಾಜ್ಯ ಆದಿವಾಸಿ ರಕ್ಷಣಾ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಮುತ್ತಪ್ಪ ಮೂಡಿಗೆರೆ ಅವರು ಈ ಬಾರಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದಾರೆ.
ಸಂಘ ಸಂಸ್ಥೆಗಳ, ಸಂಘಟನೆಗಳ ಮುಖಂಡರ ಒಮ್ಮತದಿಂದ ಸ್ಪರ್ಧೆ ಮಾಡುತ್ತಿರುವುದಾಗಿ ಮುತ್ತಪ್ಪ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳನ್ನು ನಿರ್ಮಿಸಲು ಹಾಗೂ ಸಂಪೂರ್ಣ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗುವುದು. ರಾಜ್ಯಾದ್ಯಂತ ಗಿರಿಜನರು, ದಲಿತ ವರ್ಗದವರು ಹೀನಾಯ ಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದು, ಅವರ ಅಭ್ಯುದಯಕ್ಕಾಗಿ ಹಾಗೂ ಅಲ್ಪಸಂಖ್ಯಾತರು, ಹಿಂದುಳಿದ ಜನಾಂಗದವರ ಧ್ವನಿಯಾಗಿ ಲೋಕಸಭೆಯಲ್ಲಿ ಪ್ರತಿಧ್ವನಿಸಲಾಗುವುದು. ಉಡುಪಿ- ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಡಕೆ ಬೆಳೆಗಾರರಿಗೆ ಉನ್ನತವಾದ ಮಾರುಕಟ್ಟೆ ಸ್ಥಾಪಿಸಿ ಅಡಿಕೆ ಬೆಳೆಗಾರರ ಸಮಸ್ಯೆಯನ್ನು ಲೋಕಸಭೆಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಸುಂದರ್ಕುಮಾರ್, ವಿಜೇಂದ್ರ, ಆನಂದ, ವಾಸು ಹಾಗೂ ನೀಲಯ್ಯ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

