ಚಿಕ್ಕಮಗಳೂರು

ಮಾರ್ಕಂಡೇಶ್ವರ ರಥೋತ್ಸವ

Published On :

ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಪುರಾಣ ಪ್ರಸಿದ್ಧ ಕ್ಷೇತ್ರ, ದಕ್ಷಿಣ ಕಾಶಿ ಖಾಂಡ್ಯದಲ್ಲಿ ತ್ರಯಂಬಕ ಮೃತ್ಯುಂಜಯ ಮಾರ್ಕಂಡೇಶ್ವರ ಸ್ವಾಮಿಯ ಮಹಾರಥೋತ್ಸವ ಸೋಮವಾರ ನಡೆಯಿತು.
ಮಹಾರಥೋತ್ಸವದ ಅಂಗವಾಗಿ ಕಳೆದ ಒಂದು ವಾರದಿಂದಲೇ ಶ್ರೀಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ನೆರವೇರಿದ್ದು, ಗುರು, ಗಣಪತಿ ಪೂಜೆ, ಪುಣ್ಯಾಹ, ದೇವನಾಂದಿ, ಗಣಪತಿ ಹೋಮಗಳು, ಗಂಗೆಗಿರಿ ಪಂಚಮುಖಿ ಕ್ಷೇತ್ರದಲ್ಲಿ ಪೂಜೆ ಸೇರಿದಂತೆ ಹಲವು ಧಾರ್ಮಿಕ ಕಾರ್ಯ ನಡೆಯಿತು.
ಸೋಮವಾರ ಮಧ್ಯಾಹ್ನ ಆರಿದ್ರಾ ನಕ್ಷತ್ರದಲ್ಲಿ ಮಾರ್ಕಂಡೇಶ್ವರ ಸ್ವಾಮಿಯ ಮಹಾರಥೋತ್ಸವ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ವಿಧಿವತ್ತಾಗಿ ವಿಜೃಂಭಣೆಯಿಂದ ನಡೆದಿದ್ದು, ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರು ಭಾಗವಹಿಸಿದ್ದರು.
ರಥೋತ್ಸವದ ಸಂದರ್ಭದಲ್ಲಿ ಭಕ್ತರು ಬೆಳೆದ ಬತ್ತ, ಅಡಕೆ, ಕಾಫಿ, ಏಲಕ್ಕಿ, ಕಾಳುಮೆಣಸು ಸೇರಿದಂತೆ ಹಲವು ದವಸ, ಧಾನ್ಯಗಳನ್ನು ಮಹಾರಥದೆಡೆಗೆ ಎರಚಿ ಭಕ್ತಿ ಸಮರ್ಪಿಸಿದರು. ಮಹೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.


ಪರಮಶಿವಯ್ಯ ನಿಧನ: ಶ್ರದ್ಧಾಂಜಲಿ



ತರೀಕೆರೆ: ರಾಜ್ಯದ ನೀರಾವರಿ ತಜ್ಞ ಪರಮಶಿವಯ್ಯ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಭೆ ನಡೆಸಿ, ಸಂತಾಪ ಸೂಚಿಸಲಾಯಿತು.
ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಟಿ.ಎಲ್.ರಮೇಶ್ ಮಾತನಾಡಿ, ಪರಮಶಿವಯ್ಯ ಅವರು ಇಡೀ ರಾಜ್ಯದ ನೀರಾವರಿ ಕುರಿತಾಗಿ ಆಳವಾದ ಅಧ್ಯಯನ ಮಾಡಿದ್ದರು. ನೀರಿನ ಸಮರ್ಥ ಉಪಯೋಗದ ಬಗ್ಗೆ ಅವರು ಹೆಚ್ಚು ಕಾಳಜಿ ವಹಿಸಿದ್ದರು. ಭದ್ರಾ ಮೇಲ್ದಂಡೆ ಯೋಜನೆ ಆಗುಹೋಗುಗಳ ಬಗ್ಗೆ ಸಮರ್ಥ ನಿಲುವನ್ನು ಅವರು ಹೊಂದಿದ್ದರು ಎಂದು ತಿಳಿಸಿದರು.
ಹಿರಿಯ ಚಿಂತಕ ಆರ್.ದೇವಾನಂದ್ ಮಾತನಾಡಿ, ನೀರಿನ ಬಗ್ಗೆ ಪರಮಶಿವಯ್ಯ ಉಪಯುಕ್ತ ಮಾಹಿತಿ, ವಾಸ್ತವ ಚಿತ್ರಣ ನೀಡತ್ತಿದ್ದರು. ನೀರಾವರಿ ಬಗ್ಗೆ ಅವರಿಗೆ ವಿಶೇಷವಾದ ಕೌಶಲ್ಯ, ಜಾಣ್ಮೆ ಪಡೆದಿದ್ದರು ಎಂದು ತಿಳಿಸಿದರು.
ಎನ್.ವೆಂಕಟೇಶ್ ಅವರು ಮಾತನಾಡಿದರು. ಲಾರಿ ಮಾಲಿಕರ ಸಂಘದ ಅಧ್ಯಕ್ಷ ಜಯ್ಯಣ್ಣ, ಮಂಜುನಾಥ್ ಪ್ರಸಾದ್, ಯುವ ಕವಿ ದಾದಪೀರ್, ಪುರಸಭೆ ಮಾಜಿ ಸದಸ್ಯ ಗೋವಿಂದರಾಜ್, ಬಾಲರಾಜ್, ಬಿ.ಕೃಷ್ಣಾನಾಯ್ಕ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
ದಿವಂಗತರ ಸ್ಮರಣಾರ್ಥ ಎರಡು ನಿಮಿಶ ಮೌನ ಆಚರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.