ಹಿರೇಮಗಳೂರಲ್ಲಿ ಅದ್ಧೂರಿ ಬ್ರಹ್ಮರಥೋತ್ಸವ
ಕ.ಪ್ರ.ವಾರ್ತೆ ಚಿಕ್ಕಮಗಳೂರು ಮಾ. 11 ನಗರ ಹೊರವಲಯದ ಹಿರೇಮಗಳೂರಿನಲ್ಲಿ ಇತಿಹಾಸ ಪ್ರಸಿದ್ದ ಶ್ರೀ ಕೋದಂಡರಾಮಚಂದ್ರ ಸ್ವಾಮಿಯ ವಾರ್ಷಿಕ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತರ ನಡುವೆ ಮಂಗಳವಾರ ವೈಭವದಿಂದ ಜರುಗಿತು.
ರಥೋತ್ಸವದ ಅಂಗವಾಗಿ ಬೆಳಿಗ್ಗೆ ಕೋದಂಡರಾಮಚಂದ್ರ ಸ್ವಾಮಿಗೆ ಅಭಿಷೇಕ, ವಿಶೇಷ ಪೂಜೆ, ಕೃಷ್ಣಗಂಧೋತ್ಸವ, ವಸಂತಸೇವೆ ಮತ್ತು ಪುಷ್ಪಾಂಲಕಾರ ಸೇವೆ ನೆರವೇರಿಸಲಾಯಿತು.
ಮೆರವಣಿಗೆ: ಮಧ್ಯಾಹ್ನ 12 ಗಂಟೆಗೆ ಶ್ರೀ ಕೋದಂಡರಾಮಚಂದ್ರ ಸ್ವಾಮಿಯ ಉತ್ಸವಮೂರ್ತಿಯನ್ನು ದೇವಾಲಯದಿಂದ ಹೊರತಂದು ನಾದಸ್ವರ, ಗ್ರಾಮೀಣ ವಾದ್ಯ, ಮಹಿಳಾ ತಂಡಗಳ ಸಾಮೂಹಿಕ ಭಜನೆ ನಡುವೆ ಗ್ರಾಮದಲ್ಲಿ ಮೆರವಣಿಗೆ ಮಾಡಲಾಯಿತು.
ಮೆರವಣಿಗೆ ನಂತರ ದೇವಾಲಯದ ಮುಂಭಾಗದಲ್ಲಿ ಸಾಲಂಕೃತಗೊಂಡು ಸಜ್ಜಾಗಿ ನಿಂತಿದ್ದ ಬ್ರಹ್ಮರಥದಲ್ಲಿ ಉತ್ಸವಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಿಸಲಾಯಿತು.
ಉತ್ಸವಮೂರ್ತಿಯನ್ನು ಬ್ರಹ್ಮರಥದಲ್ಲಿ ಪ್ರತಿಷ್ಠಾಪಿಸುತ್ತಿದ್ದಂತೆ ನೆರೆದಿದ್ದ ಭಕ್ತರಿಂದ ಭಜನೆ, ಜಯಘೋಷ ಮುಗಿಲುಮುಟ್ಟಿತು. ಈ ಸಂದರ್ಭದಲ್ಲಿ ರಥಕ್ಕೆ ಹಣ್ಣನ್ನು ತೂರಿ ಭಕ್ತರು ಸಂಭ್ರಮಿಸಿದರು.
ಅನ್ನಸಂತರ್ಪಣೆ: ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಮುಗಿದ ನಂತರ ಸಹಸ್ರಾರು ಭಕ್ತರು ವೇದಘೋಷ, ಭಜನೆ, ಜಯ ಘೋಷದ ನಡುವೆ ಬ್ರಹ್ಮರಥವನ್ನು ಎಳೆಯಲಾಯಿತು. ರಥೋತ್ಸವದ ಪ್ರಯುಕ್ತ ಗ್ರಾಮದ ಮನೆ ಮನೆಗಳಲ್ಲಿ ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಲಾಯಿತು. ಸಾರ್ವಜನಿಕ ಅನ್ನಸಂತರ್ಪಣೆ ಜರುಗಿತು. ಸ್ಥಳೀಯ ನಗರಸಭಾ ಸದಸ್ಯ ಎಚ್.ಎಸ್. ಪುಟ್ಟಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಡಿ. ತಮ್ಮಯ್ಯ, ಹೆಚ್.ಎಂ. ನಾರಾಯಣ್, ಶ್ರೀದೇವಿ ಮೋಹನ್, ಕೆ.ಆರ್. ವಿಜಯನ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

