ಅರ್ಜಿ ಆಹ್ವಾನ
ಚಿಕ್ಕಮಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜೀವನ ಪರ್ಯಂತ ಸಾಧನೆ ಮಾಡಿದ ಹಾಗೂ ಅತ್ಯುತ್ತಮ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಕೇಂದ್ರ ಸರ್ಕಾರದಿಂದ ನೀಡುವ ಅರ್ಜುನ ಪ್ರಶಸ್ತಿ, ಧ್ಯಾನ್ ಚಂದ್ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಅರ್ಹ ಕ್ರೀಡಾಪಟುಗಳು ಹಾಗೂ ತರಬೇತುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಏಪ್ರಿಲ್ 5 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಢಿಢಿಢಿ.ಣಛಡ.ಟ್ಝ್ಛಿ.್ಝಟಿ ಅಥವಾ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ, ಜ್ಯೋತಿನಗರ, ಚಿಕ್ಕಮಗಳೂರು ದೂರವಾಣಿ ಸಂಖ್ಯೆ 08262-220324 ಇವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
ಇಂದು ಚುನಾವಣೆ
ಕೊಪ್ಪ: ಪಟ್ಟಣ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಮಧ್ಯಾಹ್ನ ಚುನಾವಣೆ ನಡೆಯಲಿದೆ. ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದೆ.
ಪಂಚಾಯಿತಿಯ ಏಕೈಕ ಪರಿಶಿಷ್ಟ ಜಾತಿ ಮಹಿಳಾ ಸದಸ್ಯೆ ಕಾಂಗ್ರೆಸ್ ಪಕ್ಷದ ಮಾಲತಿ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಉಪಾಧ್ಯಕ್ಷ ಸ್ಥಾನ ಹಿಂದುಳಿಗ ವರ್ಗ “G’Væ ಮೀಸಲಾಗಿದೆ. ಈಗಾಗಲೇ ಬಿಜೆಪಿ ಸದಸ್ಯೆ ಅನಸೂಯ ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದ್ದಾರೆ. ಪ.ಪಂ.ನಲ್ಲಿ ಬಿಜೆಪಿ 6, ಕಾಂಗ್ರೆಸ್ 4 ಹಾಗೂ ಜೆಡಿಎಸ್ 1 ಸ್ಥಾನ ಹೊಂದಿದ್ದು, ಸಂಸದರು ಮತ್ತು ಶಾಸಕರು ಮತದಾನ ಮಾಡುವ ಅವಕಾಶ ಹೊಂದಿದ್ದಾರೆ. ಚುನಾವಣೆ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ಮಧ್ಯಾಹ್ನ 11 ಗಂಟೆಯೊಳಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಚುನಾವಣಾಧಿಕಾರಿ ತಹಸೀಲ್ದಾರ್ ಶ್ರೀಧರ್ಮೂರ್ತಿ ಎಸ್. ಪಂಡಿತ್ ತಿಳಿಸಿದ್ದಾರೆ.
ವೀರಶೈವ ಘಟಕದ ಪದಾಧಿಕಾರಿಗಳು
ಬಾಳೆಹೊನ್ನೂರು: ವೀರಶೈವ ಸಮಾಜದ ಬಾಳೆಹೊನ್ನೂರು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಭೆ ಹಾಗೂ ಕ್ಷೇತ್ರಮಟ್ಟದ ವೀರಶೈವ ಸಭೆ ಮಂಗಳವಾರ ಇಲ್ಲಿನ ರಂಭಾಪುರಿ ಪೀಠದಲ್ಲಿ ನಡೆಯಿತು. ಹೋಬಳಿ ಅಧ್ಯಕ್ಷರಾಗಿ ಕಡ್ಲೇಮಕ್ಕಿಯ ಎಂ.ಜೆ. ಹರ್ಷ, ಗೌರವಾಧ್ಯಕ್ಷರಾಗಿ ರಂಭಾಪುರಿ ಪೀಠದ ಬಿ.ರೇಣುಕ ಆಯ್ಕೆಯಾಗಿದ್ದಾರೆ. ಬನ್ನೂರು ನಾಗರಾಜ್ (ಪ್ರಧಾನ ಕಾರ್ಯದರ್ಶಿ), ಕಲ್ಮುರುಡಪ್ಪ (ಸಹ ಕಾರ್ಯದರ್ಶಿ), ಸೋಮಶೇಖರ್ ಖಜಾಂಚಿ), ಕಟ್ಟೇಗೌಡ, ಎ.ಸಿ. ಜಯಕುಮಾರ್ (ಉಪಾಧ್ಯಕ್ಷ), ರೇವಣಸಿದ್ದಪ್ಪ (ಕಾರ್ಯಧ್ಯಕ್ಷ) ಕುಮಾರ್, ಮಲ್ಲಿಕಾರ್ಜುನ (ಸಲಹೆಗಾರರು) ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

