ಆಲ್ದೂರು ಬಂದ್: 4 ಬಂಧನ, ಬಿಗಿ ಬಂದೋಬಸ್ತ್
ಚಿಕ್ಕಮಗಳೂರು: ಧ್ವಜಕಟ್ಟೆ ತೆರವುಗೊಳಿಸಿದ ಕ್ರಮ ಖಂಡಿಸಿ ಹಿಂದು ಸಂಘಟನೆಗಳು ಬುಧವಾರ ಕರೆ ನೀಡಿದ್ದ ಆಲ್ದೂರು ಬಂದ್ ಯಶಸ್ವಿಯಾಯಿತು.
ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹೊರತುಪಡಿಸಿದರೆ, ಅಂಗಡಿ ಮುಂಗಟ್ಟು ಸ್ವಯಂ ಪ್ರೇರಣೆಯಿಂದ ಬಂದ್ಗೊಳಿಸಲಾಗಿತ್ತು. ಸೋಮವಾರ ರಾತ್ರಿ ಧ್ವಜಕಟ್ಟೆ ತೆರವು ಖಂಡಿಸಿ ಮಂಗಳವಾರ ಬನ್ನೂರು, ಚಿಕ್ಕಮಗಳೂರು ತಾಲೂಕಿನ ಮಾಗಡಿ ಬಳಿ ಕೆಎಸ್ಆರ್ಟಿಸಿ ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು.
ಬಂಧನ: ಮಾಗಡಿ ಗ್ರಾಮದ ಬಳಿ ಬಸ್ಸಿಗೆ ಕಲ್ಲು ತೂರಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಬಜರಂಗದಳ ತಾಲೂಕು ಸಂಚಾಲಕ ತುಡುಕೂರು ಮಂಜುನಾಥ್, ಎಬಿವಿಪಿ ಜಿಲ್ಲಾ ಸಂಚಾಲಕ ಸಂತೋಷ್ ಕೋಟ್ಯಾನ್, ಕಾರ್ಯಕರ್ತ ಸ್ವರೂಪ್ ಹಾಗೂ ಶ್ರೀರಾಮ ಸೇನೆ ಕಾರ್ಯಕರ್ತ ಸುಪ್ರಿತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಸಂಚಾರ ವಿರಳ: ಧ್ವಜಕಟ್ಟೆ ತೆರವು ಖಂಡಿಸಿ ಹಿಂದು ಸಂಘಟನೆಗಳ ಕರೆ ನೀಡಿದ್ದ ಆಲ್ದೂರು ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಆಟೋ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಬಸ್ಗಳ ಸಂಚಾರ ವಿರಳವಾಗಿತ್ತು. ಪೆಟ್ರೋಲ್ ಬಂಕ್ ಸಹ ಬಂದ್ ಆಗಿತ್ತು. ಅಂಗಡಿ -ಮುಂಗಟ್ಟುಗಳು ಬಂದ್ ಆಗಿದ್ದು, ಜನರ ಓಡಾಟ ವಿರಳವಾಗಿದ್ದರಿಂದ ಪಟ್ಟಣದ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಅಂಗಡಿಗಳು ಬಂದ್ ಆಗಿದ್ದರಿಂದ ಬೇರೆ ಊರುಗಳಿಂದ ಪೇಟೆಗೆ ಬಂದಿದ್ದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಯಿತು. ಪಟ್ಟಣದಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

