ಚಿಕ್ಕಮಗಳೂರು

ಸರ್ಕಾರದ ಸಾಧನೆ ಜನರಿಗೆ ತಿಳಿಸಿ

Published On :

ಕ.ಪ್ರ.ವಾರ್ತೆ  ತರೀಕೆರೆ  ಮಾ.12
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಸಾಧನೆಗಳನ್ನು ಪಕ್ಷದ ಕಾರ್ಯಕರ್ತರು ಜನರಿಗೆ ತಿಳಿಸಬೇಕೆಂದು ಸಂಸದ ಜಯಪ್ರಕಾಶ್ ಹೆಗ್ಡೆ ಹೇಳಿದರು.
 ಅವರು, ತರೀಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಚಿಕ್ಕಮಗಳೂರು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಬುಧವಾರ ಪಟ್ಟಣದ ಎಂ.ಜಿ.ಹಾಲ್‌ನಲ್ಲಿ ಏರ್ಪಾಡಾಗಿದ್ದ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ, ಮಹಿಳಾ ದಿನಾಚರಣೆ, ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಿದ್ದರು.
ಶಾಲೆಯಲ್ಲೇ ಆರ್ಹತಾ ಪತ್ರ: ಮಹಿಳೆಯರಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಅನೇಕ ಕಾಯಕ್ರಮಗಳ ಉಪಯೋಗವನ್ನು ಮಹಿಳೆಯರು ಹೆಚ್ಚಾಗಿ ಪಡೆದುಕೊಳ್ಳಬೇಕು, 6 ರಿಂದ 14 ವರ್ಷ ವಯಸ್ಸಿನ ಮಕ್ಕಳಿಗೆ ಶಿಕ್ಷಣ, ಶಾಲೆಗಳಲ್ಲಿ ಕ್ಷೀರಭಾಗ್ಯ, ಅನ್ನಭಾಗ್ಯ, ಜಾತಿ ಸರ್ಟಿಫಿಕೇಟಿಗಾಗಿ ತಹಶೀಲ್ದಾರ್ ಕಚೇರಿಗೆ ಅಲೆಯಬೇಕಾದ್ದಿಲ್ಲ, ಬದಲಿಗೆ ಶಾಲೆಯಲ್ಲಿ ಶಿಕ್ಷಕರೇ ಜಾತಿಸರ್ಟಿಫಿಕೇಟನ್ನು ಕೊಡುವ ವ್ಯವಸ್ಥೆ ಮಾಡಲಾಗಿದೆ ಎಂದರು.
 ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಜಾರಿಯಲ್ಲಿ ದೇಶದ ಐದು ರಾಜ್ಯಗಳಲ್ಲಿ ಕರ್ನಾಟಕವು ಒಂದು, 77.5 ಕೋಟಿ ರು.ಗಳಲ್ಲಿ ರಸ್ತೆ ಅಭಿವೃದ್ದಿ ಪಡಿಸಲಾಗಿದೆ, ಕಾಫಿ ಬೆಳೆಗಾರರಿಗೆ ಸಾಲ ಮನ್ನಾ ಮಾಡಲಾಗಿದೆ. ಅಡಿಕೆ ಬೆಳೆಗಾರರ ಸಮಸ್ಯೆ ಕೂಡ ಪರಿಹಾರವಾಗಿದೆ. ಗೋರಕ್ ಸಿಂಗ್ ವರದಿಯನ್ನು ಯಾರು ವಿರೋಧಿಸಿದ್ದರೋ ಅವರೇ ಇಂದು ಅದನ್ನು ಒಪ್ಪಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ ಅವರು, ಲೋಕಸಭಾ ಕ್ಷೇತ್ರದಲ್ಲಿ ಗ್ರಾಮ ಮಟ್ಟದಲ್ಲಿ ತೆರಳಿ ಕಾರ್ಯ ನಿರ್ವಹಿಸುವ ಆಶಯವನ್ನು ಹೊಂದಿದ್ದೇನೆ, ತಮ್ಮನ್ನು ಆಶೀರ್ವದಿಸಿ ಗೆಲ್ಲಿಸಬೇಕೆಂದು ಅವರು  ಮನವಿಮಾಡಿದರು.   
ಮಹಿಳೆಗೆ ಸಮಾನತೆ ಬೇಕು: ವಿಧಾನ ಪರಿಷತ್ ಸದಸ್ಯೆ ಡಾ.ಮೋಟಮ್ಮ ಅವರು ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತನಾಡಿ, ಮಹಿಳೆಯರಿಗೆ ಹೆಚ್ಚಿನ ಸ್ಥಾನಮಾನ ದೊರಕಬೇಕು.  ನೂರನೇ ವರ್ಷದ ಮಹಿಳಾ ದಿನಾಚರಣೆಯತ್ತ ಹೋಗುತ್ತಿದ್ದೇವೆ, ಮಹಿಳೆಯರಿಗೆ ಸಮಾನತೆ ದೊರಕೇಬೇಕು ಎಂದ ಅವರು, ನರೇಂದ್ರ ಮೋದಿಯವರೇ ಹಸಿವು ತಡೆಗಟ್ಟಲು ನಿಮ್ಮ ಯೋಜನೆಗಳೇನು ಎಂದು ಪ್ರಶ್ನಿಸಿದರು.
ಶಾಸಕ ಜಿ.ಎಚ್.ಶ್ರೀನಿವಾಸ್ ಅವರು ಮಾತನಾಡಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರು ಜನರಿಗೆ ಸ್ಪಂದಿಸುತ್ತಿದ್ದಾರೆ. ಒಂದು ದಿನವೂ ಮನೆಯಲ್ಲಿ ಕೂತವರಲ್ಲ, ತಾಲೂಕಿಗೆ ಕುಡಿಯುವ ನೀರು ಸರಬರಾಜಿಗಾಗಿ 12 ಕೋಟಿ ರು ಕೇಂದ್ರ ಸರ್ಕಾರ ಕೊಟ್ಟಿದೆ. ಹೆಗ್ಡೆ ಬಗ್ಗೆ ಎಲ್ಲ ಹಳ್ಳಿಗಳಲ್ಲೂ ಜನರ ಒಲುವು ಇದೆ, ಯುದ್ದೋಪಾದಿಯಲ್ಲಿ ಎಲ್ಲರೂ ದುಡಿಯೋಣ ಎಂದು
ತಿಳಿಸಿದರು.
 ಜಿಲ್ಲಾ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ವನಮಾಲ ಮೃತ್ಯುಂಜಯ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
 ಕೇಂದ್ರ ಮಹಿಳಾ ಕಾರ್ಯದರ್ಶಿ ಬಿ.ಸಿ.ಗೀತಾ ಮತ್ತಿತರರು ಮಾತನಾಡಿದರು.
ಜಿಲ್ಲಾ ಕಾಂಗ್ರೆಸ್ಸ್‌ಮಿತಿ ಅಧ್ಯಕ್ಷ ಡಾ.ವಿಜಯಕುಮಾರ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ದುಲ್ ಘನಿ ಅನ್ವರ್, ತಾ.ಪಂ.ಅಧ್ಯಕ್ಷೆ ಶಕುಂತಲ ನಾಗರಾಜ್, ಜಿ.ಪಂ.ಸದಸ್ಯ ಕೆ.ಪಿ.
ಕುಮಾರ್, ಬಿ.ಎಸ್.ಆರ್.ಮಂಜುನಾಥ್, ಕೆ.ಜಿ.ಮಹೇಶ್ವರಪ್ಪ, ಅಲ್ಪಸಂಖ್ಯಾತರ ಸಮಿತಿ ಅಧ್ಯಕ್ಷ ಸಮೀವುಲ್ಲಾ ಷರೀಫ್, ಹೆಮಲತಾ ರೇವಣ್ಣ, ಕೆ.ಆರ್.ದೃವಕುಮಾರ್, ಹೋಬಳಿ ಸಮಿತಿ ಅಧ್ಯಕ್ಷರು, ಕಾರ್ಯಕರ್ತರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.