ಶಾಲೆಯಲ್ಲಿ ಅಗ್ನಿ ಆಕಸ್ಮಿಕ
ಕ.ಪ್ರ.ವಾರ್ತೆ ಟಿ ಕಡೂರು, ಮಾ.12
ಪಟ್ಟಣದ ಹಳೇ ಪೊಲೀಸ್ ಸ್ಟೇಷನ್ ಎದುರು ಇರುವ ಬಾಲಕರ ಶಾಲೆಯಲ್ಲಿ ಆಕಸ್ಮಿಕ ಅಗ್ನಿ ದುರಂತದಿಂದ ಕೊಠಡಿಯಲ್ಲಿದ್ದ ಪೀಠೋಪಕರಣಗಳು ಸೇರಿದಂತೆ ಸುಮಾರು ರು. 3 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.
ಮಂಗಳವಾರ ಬೆಳಗ್ಗೆಯಿಂದ ಸಂಜೆಯವರೆಗೆ ಎಂದಿನಂತೆ ತರಗತಿಗಳು ನಡೆದಿದ್ದು, ಸಂಜೆ ಸುಮಾರು 6.45ರ ಹೊತ್ತಿಗೆ ಶಾಲೆಯ ಹಿಂಭಾಗದ 4ನೇ ತರಗತಿ ನಡೆಯತ್ತಿದ್ದ ಕೊಠಡಿಯಲ್ಲಿ ಹೊಗೆ ಕಾಣಿಸಿಕೊಂಡಿದೆ. ನಂತರ ಬೆಂಕಿಯಿಂದಾಗಿ ಶಾಲೆಯ ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿ ಬೆಂಕಿಯ ಕೆನ್ನಾಲಿಗೆಯು ರೂಫಿಂಗ್ ಮೂಲಕ ಶಾಲೆಯ ಮೇಲ್ಭಾಗದಲ್ಲಿ ಕಾಣಿಸಿಕೊಂಡಾಗ ಸಾರ್ವಜನಿಕರು ಗಮನಿಸಿ ಅಗ್ನಿಶಾಮಕ ಠಾಣೆಗೆ ತಿಳಿಸಿದ್ದಾರೆ.
ಪರಿಶೀಲನೆ: ವಿಷಯ ತಿಳಿದ ತಹಸೀಲ್ದಾರ್ ತಿಮ್ಮಾಭೋವಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ರಂಗನಾಥ್ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು. ಬೆಂಕಿಯನ್ನು ನಂದಿಸಿದ ಮೇಲೆ ಬೆಂಕಿಗೆ ಆಹುತಿಯಾಗಿದ್ದ ಕೊಠಡಿ ಪರಿಶೀಲಿಸಿದಾಗ ಕೊಠಡಿಯಲ್ಲಿದ್ದ 10 ಡೆಸ್ಕುಗಳು, ಗ್ರೀನ್ ಬೋರ್ಡ್, ಅಲ್ಮೆರಾ, ರೂಫಿಂಗಿನ ಮುಟ್ಟಗಳು ಬೆಂಕಿಗೆ ಆಹುತಿಯಾಗಿರುವುದು ಕಂಡು ಬಂದಿತು.
ಈ ಬಗ್ಗೆ ಮುಖ್ಯ ಶಿಕ್ಷಕ ನಾಗರಾಜು ಸುಮಾರು ರು. 3 ಲಕ್ಷ ಮೌಲ್ಯದ ಪೀಠೋಪಕರಣ ಸೇರಿದಂತೆ ಕೊಠಡಿಯು ಬೆಂಕಿಗೆ ಆಹುತಿಯಾಗಿದೆ ಎಂದು ದೂರು ಸಲ್ಲಿಸಿದ್ದಾರೆ. ಘಟನಾ ಸ್ಥಳಕ್ಕೆ ಸಬ್ ಇನ್ಸ್‌ಪೆಕ್ಟರ್ ಸಂತೋಷ್ ಶೆಟ್ಟಿ, ಭೇಟಿ ನೀಡಿ ಪರೀಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಳೆದ ಎರಡು ತಿಂಗಳ ಹಿಂದೆ ಇದೇ ಶಾಲೆಯ ಹಿಂಭಾಗದ 5 ನೇ ತರಗತಿಯ ಕೊಠಡಿಯ ಹೆಂಚು ತೆಗೆದು ಬೀಡಿ ಸಿಗರೇಟು ಸೇದಿ ಬಿಸಾಡಿರುವ ದೃಶ್ಯ ಕಂಡು ಬಂದಿತ್ತು ಎನ್ನಲಾಗಿದ್ದು, ಈ ಬಗ್ಗೆ ಪೊಲೀಸರು ಗಮನಹರಿಸಬೇಕು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

