ಜನಪರ ಆಡಳಿತ ನೀಡುವಲ್ಲಿ ಕಾಂಗ್ರೆಸ್ ಯಶಸ್ವಿ: ಪಾಟೀಲ್
ಬಾಳೆಹೊನ್ನೂರು: ಕೇಂದ್ರದ ಯುಪಿಎ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರವು ಜನಪರ ಆಡಳಿತವನ್ನು ನೀಡುವಲ್ಲಿ ಯಶಸ್ವಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.
ಇಲ್ಲಿನ ರಂಭಾಪುರಿ ಪೀಠದಲ್ಲಿ ಶುಕ್ರವಾರ ನಡೆದ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಜನರ ಮೂಲ ಸಮಸ್ಯೆಗಳ ಬಗೆಹರಿಸಲು ಸರ್ಕಾರವು ಸತತ ಪ್ರಯತ್ನ ಮಾಡುತ್ತಿದ್ದು, ಅದರಲ್ಲಿ ಯಶಸ್ವಿಯಾಗಿದೆ. ಗ್ರಾಮೀಣಾಭಿವೃದ್ಧಿಗೆ ಪುನರ್ ವ್ಯಾಖ್ಯಾನ ನೀಡಿದ್ದು, ಗುಣಾತ್ಮಕ ಬದಲಾವಣೆ ತರುವ ಪ್ರಯತ್ನ ಮಾಡಲಾಗಿದೆ ಎಂದರು.
ಹಳ್ಳಿಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಿ ಶುದ್ಧ ಕುಡಿಯುವ ನೀರು, ಶೌಚಾಲಯ, ಸ್ನಾನಗೃಹ, ರುದ್ರಭೂಮಿ, ಆಟದ ಮೈದಾನ ಹಾಗೂ ರೈತರಿಗೆ ಪ್ರಮುಖವಾಗಿ ಕಣ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಕೃಷಿ ಚಟುವಟಿಕೆಗೆ ಒತ್ತು ನೀಡಲು ಕೃಷಿ ಜಮೀನಿನಲ್ಲಿ ಕೆರೆ, ಬದು ನಿರ್ಮಾಣ, ಮಡಿ ತಯಾರಿಗೆ 1 ಲಕ್ಷ ಮೌಲ್ಯದ ಆಸ್ತಿ ಸೃಷ್ಟಿ ಮಾಡಲು ಒಂದು ಕುಟುಂಬಕ್ಕೆ ಅವಕಾಶ ಕಲ್ಪಿಸಲಾಗಿದೆ.
ರಾಜ್ಯದ 16 ಸಾವಿರ ಅಂಗನವಾಡಿಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲವಾಗಿದ್ದು, ಇದಕ್ಕೆ ಕ್ರಮ ಕೈಗೊಳ್ಳಲಾಗಿದೆ. ರಾಜೀಜ್ಗಾಂಧಿ ಯುವ ಚೈತನ್ಯ ಯೋಜನೆಯನ್ನು ಜಾರಿಗೆ ತಂದು ಪ್ರತಿ ಗ್ರಾಮದಲ್ಲಿ 50 ಜನರಂತೆ ರಾಜ್ಯದಲ್ಲಿ ಒಟ್ಟು 2 ಲಕ್ಷ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸುವ ಮಹತ್ತರ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದರು.
ಕೆಲವು ಗ್ರಾಮ ಪಂಚಾಯಿತಿಗಳು ಪ್ರಶಸ್ತಿ ಹಾಗೂ ಹಣದ ಆಸೆಗಾಗಿ ಸುಳ್ಳು ದಾಖಲೆಗಳನ್ನು ನೀಡಿ ಸ್ವಚ್ಛ ಗ್ರಾಮ ಪ್ರಶಸ್ತಿಯನ್ನು ಪಡೆಯುತ್ತಿದ್ದು, ಸರ್ಕಾರವನ್ನು ವಂಚಿಸಲಾಗುತ್ತಿದೆ. ಇಂತಹ ಭ್ರಷ್ಟಾಚಾರವನ್ನು ಜನರೇ ಖಂಡಿಸಬೇಕಿದ್ದು, ಸಂಬಂಧಪಟ್ಟವರಿಗೆ ಮಾಹಿತಿ ನೀಡಿದರೆ ಈ ಕಾರ್ಯ ಮಾಡಿದ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುವ ಕೆಲಸ ಮಾಡಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

