ಚಿಕ್ಕಮಗಳೂರು

17ರಿಂದ ಶಾಸನ ಅಧ್ಯಯನ ತರಬೇತಿ

Published On :

ಚಿಕ್ಕಮಗಳೂರು: ಕನ್ನಡ ವಿಶ್ವವಿದ್ಯಾನಿಲಯದ ಶಾಸನಶಾಸ್ತ್ರ ವಿಭಾಗದ ಆಶ್ರಯದಲ್ಲಿ ನಗರದ ಮಲೆನಾಡು ವಿದ್ಯಾಸಂಸ್ಥೆಯಲ್ಲಿ ಮಾ. 17ರಿಂದ ಮೂರು ದಿನಗಳ ಕಾಲ ಶಾಸನ ಅಧ್ಯಯನ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಮಾ. 17ರಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಹಿರಿಯ ಸಂಶೋಧಕ ಡಾ. ಷ. ಶೆಟ್ಟರ್ ಅವರು ಶಿಬಿರ ಉದ್ಘಾಟಿಸಲಿದ್ದಾರೆ. ಕನ್ನಡ ವಿಶ್ವವಿದ್ಯಾನಿಲಯ ಕುಲಪತಿ ಡಾ. ಹಿ.ಚಿ. ಬೋರಲಿಂಗಯ್ಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಎಂಇಎಸ್ ಗೌರವ ಕಾರ್ಯದರ್ಶಿ ಡಾ. ಡಿ.ಎಲ್. ವಿಜಯಕುಮಾರ್, ಉಪಾಧ್ಯಕ್ಷ ಡಾ. ಜೆ.ಪಿ. ಕೃಷ್ಣೇಗೌಡ, ಖಜಾಂಚಿ ಡಿ.ಎಚ್. ನಟರಾಜ್, ರಾಜ್ಯಪಾಲರ ಆಪ್ತ ಶಾಖೆಯ ವ್ಯವಸ್ಥಾಪಕ ಎ.ಎಂ. ಬಡಿಗೇರ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಸಂವಾದದಲ್ಲಿ ಹಳಗನ್ನಡ ಲಿಪಿ, ಲಿಪಿಕಾರ ಮತ್ತು ಲಿಪಿ ವ್ಯವಸಾಯ ಕುರಿತು ಡಾ. ಷ. ಶೆಟ್ಟರ್ ಅವರು ಮಾತನಾಡಲಿದ್ದಾರೆ. ಮಾ. 19 ರಂದು ಮಧ್ಯಾಹ್ನ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಬೆಂಗಳೂರು ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ. ಬಸವರಾಜ ಕಲ್ಗುಡಿ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ.
ಎಂಇಎಸ್‌ನ ಉಪಾಧ್ಯಕ್ಷ ಕೇಶವಮೂರ್ತಿ ಅಧ್ಯಕ್ಷತೆ ವಹಿಸಲಿದ್ದು, ಸಹ ಕಾರ್ಯದರ್ಶಿ ಶಂಕರನಾರಾಯಣ ಭಟ್, ಉಪಾಧ್ಯಕ್ಷೆ ರಾಧಾ ಸುಂದರೇಶ್ ಹಾಗೂ ಕಚೇರಿ ವ್ಯವಸ್ಥಾಪಕಿ ಎಸ್. ಶಾಂತಕುಮಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.