ತರೀಕೆರೆ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಕ.ಪ್ರ.ವಾರ್ತೆ ತರೀಕೆರೆ ಮಾ. 14
ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಟಿ.ಆರ್. ಸುನೀಲ್ ದತ್, ಉಪಾಧ್ಯಕ್ಷರಾಗಿ ಪುಟ್ಟಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಂತರ ಪುರಸಭಾ ಸಭಾಂಗಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಶಾಸಕ ಜಿ.ಎಚ್. ಶ್ರೀನಿವಾಸ್ ಅವರು ಮಾತನಾಡಿ, ಪುರಸಭೆಯ ಎಲ್ಲ ಸದಸ್ಯರ ಸಹಕಾರದಿಂದ ಅವಿರೋಧ ಆಯ್ಕೆಯಾಗಿರುವುದು ಎಲ್ಲರಿಗೂ ಸಂತೋಷ ತಂದಿದೆ. ಪಟ್ಟಣದ ಮುಖ್ಯ ಮತ್ತು ಎಲ್ಲ ರಸ್ತೆಗಳ ಅಭಿವೃದ್ಧಿ ಮತ್ತು ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ತಾವು ಸಂಪೂರ್ಣ ಸಹಕಾರ ಕೊಡುವುದಾಗಿ ತಿಳಿಸಿದರು.
ನೂತನ ಅಧ್ಯಕ್ಷ ಟಿ.ಆರ್. ಸುನೀಲ್ ದತ್ ಮಾತನಾಡಿ, ಶಾಸಕರ ಮತ್ತು ಪುರಸಭೆಯ ಎಲ್ಲ ಸದಸ್ಯರ ಸಹಕಾರದಿಂದ ಪಟ್ಟಣದ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ತಿಳಿಸಿದ ಅವರು, ಅಧ್ಯಕ್ಷರಾಗಿ ಆಯ್ಕೆಯಾಗಲು ಸಹಕರಿಸಿದ ಎಲ್ಲರಿಗೂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಕೃತಜ್ಞತೆ ಸಲ್ಲಿಸಿದರು.
ಪುರಸಭೆ ಸದಸ್ಯರು, ಎನ್. ರಾಜು, ಎಂ. ನರೇಂದ್ರ, ಟಿ.ಕೆ. ಪ್ರಕಾಶ್, ಮೋಹನ್ಕುಮಾರ್, ಪುರಸಭೆ ಮುಖ್ಯಾಧಿಕಾರಿ ಮುನಿಸ್ವಾಮಿ ಮತ್ತಿತರರು ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

