'ಮಲೆನಾಡ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ'
ನರಸಿಂಹರಾಜಪುರ: ಮಲೆನಾಡಿನ ಸಮಸ್ಯೆಯಾದ ಒತ್ತುವರಿ ಸಮಸ್ಯೆ, ಕಸ್ತೂರಿ ರಂಗನ್ ವರದಿ, ಹುಲಿ ಯೋಜನೆಗಳು ಬಿಜೆಪಿ ಸರ್ಕಾರದ ತಪ್ಪು ನೀತಿಗಳಿಂದಾಗಿ ಗೊಂದಲ ಉಂಟಾಗಿದ್ದು, ಕಾಂಗ್ರೆಸ್ ಸರ್ಕಾರ ಈ ಎಲ್ಲಾ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎಂದು ಜಿಪಂ ಮಾಜಿ ಸದಸ್ಯ ಟಿ.ಡಿ. ರಾಜೇಗೌಡ ತಿಳಿಸಿದರು.
ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2002 ರಲ್ಲಿ ವಾಜಪೇಯಿ ಪ್ರಧಾನಿಯಾಗಿದ್ದಾಗ ಕಸ್ತೂರಿ ರಂಗನ್ ವರದಿಗೆ ಚಾಲನೆ ನೀಡಲಾಯಿತು. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಹುಲಿ ಯೋಜನೆ ಜಾರಿಗೆ ಒಪ್ಪಿಗೆ ನೀಡಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಒತ್ತುವರಿ ಜಮೀನು ಖುಲ್ಲಾ ಮಾಡಿಸುತ್ತೇವೆ ಎಂದು ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದ್ದರು. ಈಗ ಕಾಂಗ್ರೆಸ್ನವರ ಮೇಲೆ ಸುಳ್ಳು ಆರೋಪ ಹೊರಿಸುತ್ತಿದ್ದಾರೆ ಎಂದರು.
ಪ್ರಾಮಾಣಿಕ ಸಮಸ್ಯೆ: ಕಾಂಗ್ರೆಸ್ ಸರ್ಕಾರ ಗ್ರಾಮ ಅರಣ್ಯ ಹಕ್ಕು ಸಮಿತಿ ರಚನೆ ಮಾಡಿದ್ದು, ಬಡ ಒತ್ತುವರಿದಾರರಿಗೆ ಹಕ್ಕುಪತ್ರ ಕೊಡಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಒತ್ತುವರಿ ಸಮಸ್ಯೆ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿದ್ದು, ಬಡ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲು ಖಾಸಗಿ ಶಾಲೆಗಳಲ್ಲಿ ಶೇ. 25 ಸೀಟು ಮೀಸಲಿಡಲಾಗಿದೆ ಎಂದವರು ಹೇಳಿದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

