ಕಾಫಿ ನಾಡಲ್ಲಿ ಚುನಾವಣಾ ಬಿಸಿ
ಕಾಂಗ್ರೆಸ್‌ನಿಂದ ಭಾರತ್ ನಿರ್ಮಾಣ ಯಾತ್ರೆ ಟಿ ಮಠ- ದೇವಾಲಯಗಳಿಗೆ ಬಿಜೆಪಿ ಅಭ್ಯರ್ಥಿ ಭೇಟಿ
ಕ.ಪ್ರ.ವಾರ್ತೆ ಟಿ ಚಿಕ್ಕಮಗಳೂರು ಟಿ ಮಾ.17
ಕಾಫಿಯ ನಾಡಲ್ಲಿ ಚುನಾವಣೆಯ ಗಾಳಿ ಬೀಸುತ್ತಿದೆ.
ಕಾಂಗ್ರೆಸ್‌ನ ಮುಖಂಡರು ಹಾಗೂ ಕಾರ್ಯಕರ್ತರು ಚಿಕ್ಕಮಗಳೂರು ನಗರದಲ್ಲಿ ಸೋಮವಾರ ಭಾರತ ನಿರ್ಮಾಣ ಜಾಥಾ ನಡೆಸಿದರು.
ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಬೆಳಗ್ಗೆ ಹಿರೇಮಗಳೂರಿನ ಶ್ರೀ ಕೋದಂಡರಾಮಚಂದ್ರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಬಸವ ಕೇಂದ್ರ ಹಾಗೂ ಶಂಕರದೇವರ ಮಠಗಳಿಗೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಇದೇ ವೇಳೆಗೆ ಚಿಕ್ಕಕುರುಬರಹಳ್ಳಿಯಲ್ಲಿ ಮತಯಾಚನೆ ಮಾಡಿದರು. ಬಳಿಕ ಅವರು ಬಾಳೆಹೊನ್ನೂರಿಗೆ ತೆರಳಿ ರಂಭಾಪುರೀ ಪೀಠದ ಶ್ರೀ ಪ್ರಸನ್ನ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಶೃಂಗೇರಿಗೆ ತೆರಳಿದರು. ಇತ್ತ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಕೆಜೆಪಿ ಪಕ್ಷದಲ್ಲಿದ್ದ ಕೆಲವು ಮುಖಂಡರು ಬಿಜೆಪಿಗೆ ಸೇರ್ಪಡೆಗೊಂಡರು.
ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಹಳೇ ತಾಲೂಕು ಕಚೇರಿಯಿಂದ ಎಂ.ಜಿ. ರಸ್ತೆ, ನಾಯ್ಡು ರಸ್ತೆ, ಐ.ಜಿ. ರಸ್ತೆಗಳಲ್ಲಿ ಭಾರತ್ ನಿರ್ಮಾಣ ಯಾತ್ರೆಯ ಅಂಗವಾಗಿ ಮೆರವಣಿಗೆ ನಡೆಸಿದರು.
ಬಳಿಕ ಇಲ್ಲಿನ ಗಾಯತ್ರಿ ದೇವಿ ಕಲ್ಯಾಣ ಮಂಟಪದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಯಿತು.
ಈ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಬಡವರಿಗಾಗಿ ಅನ್ನಭಾಗ್ಯ ಯೋಜನೆ, ಶಾಲಾ ಮಕ್ಕಳಿಗಾಗಿ ಕ್ಷೀರ ಭಾಗ್ಯದಂತಹ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದರು ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯೆ ಮೋಟಮ್ಮ ಮಾತನಾಡಿ, ಈ ಹಿಂದೆ ಕರ್ನಾಟಕ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಲವು ಅವಘಡಗಳಲ್ಲಿ ಸಿಲುಕಿಕೊಂಡಿತ್ತು. ಇದರಿಂದ ಬೇಸತ್ತಿರುವ ಮತದಾರರು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಮುಖ್ಯಮಂತ್ರಿಯವರು ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸ ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದರು.
ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಅತ್ಯಂತ ಕಡಿಮೆ ಅವಧಿಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಎಲ್ಲಾ ಜನರನ್ನು ಸ್ಪಂದಿಸುವ ಅವರನ್ನು ಈ ಬಾರಿಯ ಚುನಾವಣೆಯಲ್ಲಿ ಗೆಲ್ಲಿಸಬೇಕು. ಆ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್, ಮಾಜಿ ಜಿಲ್ಲಾಧ್ಯಕ್ಷ ಎಂ.ಎಲ್. ಮೂರ್ತಿ, ಪ್ರಧಾನ ಕಾರ್ಯದರ್ಶಿ ಕೆ. ಮಹಮದ್, ಪ್ರಚಾರ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಯುವ ಘಟಕದ ಅಧ್ಯಕ್ಷ ಶಿವಕುಮಾರ್, ನಗರಸಭಾ ಮಾಜಿ ಸದಸ್ಯ ಸಂದೀಪ್, ಹಿಂದುಳಿದ ವರ್ಗಗಳ ಘಟಕದ ಜಿಲ್ಲಾಧ್ಯಕ್ಷ ನಾಗರಾಜ್, ಕೆ.ಎಸ್. ಶಾಂತೇಗೌಡ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

