ಚಿಕ್ಕಮಗಳೂರು

ಗಾಳಿ ಸುದ್ದಿಗೆ ಕಿವಿಗೊಡದಿರಿ

Published On :

ಚಿಕ್ಕಮಗಳೂರು: ತಮಗೆ ಸಿಕ್ಕ ಒಂದು ವರ್ಷ ಎಂಟು ತಿಂಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಮೀರಿ ಪ್ರಯತ್ನಿಸಿರುವುದಾಗಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಸಖರಾಯಪಟ್ಟಣದಲ್ಲಿ ಇತ್ತೀಚೆಗೆ ಹೋಬಳಿ ಕಾಂಗ್ರೆಸ್ ಆಯೋಜಿಸಿದ್ದ ಭಾರತ್ ನಿರ್ಮಾಣ ಯಾತ್ರಾ ಅಂಗವಾಗಿ ನಡೆದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿ, ಅಡಕೆ ಮತ್ತು ತೆಂಗು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ತೀವ್ರ ಪ್ರಯತ್ನ ನಡೆಸಲಾಗಿದೆ. ಕೇಂದ್ರದ ಯುಪಿಎ ಸರ್ಕಾರ ಅಡಕೆ ನಿಷೇಧಿಸುವ ಕುರಿತು ಯಾವುದೇ ಪ್ರಸ್ತಾಪ ಮಾಡಿಲ್ಲ. ಆದರೆ, ಕೆಲವರು ರಾಜಕೀಯ ಲಾಭಕ್ಕಾಗಿ ಗೊಂದಲ ಸೃಷ್ಟಿಸಿದ್ದಾರೆ. ಯಾವುದೇ ಸಂದರ್ಭದಲ್ಲೂ ಅಡಕೆ ನಿಷೇಧಿಸುವ ಪ್ರಸ್ತಾಪ ಕೇಂದ್ರದ ಮುಂದಿಲ್ಲ. ಬೆಳೆಗಾರರು ಗೊಂದಲಕ್ಕೆ ಅವರಿವರು ಲಾಭಕ್ಕಾಗಿ ಹರಡುವ ಸುದ್ದಿಗೆ ಕಿವಿಗೊಡಬಾರದು ಎಂದರು.
ಜನಪರ ಯೋಜನೆ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರ ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ ಎಂದು ಹೇಳಿದರು.
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಗ್ರಾಮ ಪಂಚಾಯಿತಿ ಸದಸ್ಯರಾದ ಖಾದರ್ ವಲ್ಲಿ, ಸರೋಜಾಬಾಯಿ ಹರಿಯನಾಯ್ಕಅವರಿಗೆ ಪಕ್ಷದ ಶಲ್ಯವನ್ನು ಹೊದಿಸಿ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಯಾತ್ರೆ ನಡೆಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಂಗೇಗೌಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಸ್. ಶಾಂತೇಗೌಡ, ಪ್ರಧಾನ ಕಾರ್ಯದರ್ಶಿ ಆರ್. ಚಂದ್ರಶೇಖರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಮ್ಮ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎನ್.ಎಸ್. ಚಂದ್ರಪ್ಪ, ಮಾಜಿ ಸದಸ್ಯೆ ಹೇಮಾವತಿ, ಮರಿಗೌಡ, ಮುಖಂಡರಾದ ಕಲ್ಮರುಡಪ್ಪ, ಕೊಪ್ಪಲು ಮಂಜುನಾಥ್, ಶ್ರೀನಿವಾಸಗೌಡ, ಮಲ್ಲೇಶಪ್ಪ, ವಗ್ಗಯ್ಯ, ಸಂದೀಪ್, ಎ.ಎನ್. ಮಹೇಶ್, ಸತೀಶ್, ಅಪ್ಪು, ಲೋಕೇಶ್, ಚಾರುಕೀರ್ತಿ ಪಾಲ್ಗೊಂಡಿದ್ದರು. ಮುಖಂಡ ಧನಂಜಯಮೂರ್ತಿ ಸ್ವಾಗತಿಸಿ, ರುದ್ರಮೂರ್ತಿ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.