ಚಿಕ್ಕಮಗಳೂರು

ನಮೋ ಅಲೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ

Published On :

ಮುಳಬಾಗಲು: ದೇಶದಲ್ಲಿ ಮೋದಿ ಅಲೆ ಇರುವ ಕಾರಣ ಬಿಜೆಪಿಯನ್ನು ಮಣಿಸಲು ಸಾಧ್ಯವಿಲ್ಲವೆಂದು ಕೋಲಾರ ಲೋಕಸಭೆ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಎಂ. ನಾರಾಯಣಸ್ವಾಮಿ ನುಡಿದರು.
ತಾಲೂಕಿನ ಕುರುಡುಮಲೆ ಗ್ರಾಮದ ಪುರಾಣ ಪ್ರಸಿದ್ಧ ವಿನಾಯಕ ದೇವಾಲಯಕ್ಕೆ ಮಂಗಳವಾರ ಭೇಟಿ ನೀಡಿ ಪೂಜೆ ಸಲ್ಲಿಸಿ ನಂತರ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.
 ಸೀಟು ಸಿಗಲಿಲ್ಲವೆಂದು ಅಸಮಾಧಾನಗೊಂಡಿರುವ ಡಿ.ಎಸ್. ವೀರಯ್ಯನವರನ್ನು ಮನವೊಲಿಸುವ ಕಾರ್ಯ ಪಕ್ಷದಿಂದ ಆಗುತ್ತಿದೆ. ತಾವು ವೀರಯ್ಯನವರ ಸಂಪರ್ಕದಲ್ಲಿದ್ದು   ಅವರೊಂದಿಗೆ ಒಟ್ಟಾಗಿ ಚುನಾವಣಾ ಪ್ರಚಾರ ಕೈಗೊಳ್ಳುವುದಾಗಿ ಹೇಳಿದರು.
ಕೋಲಾರ ಬಿಜೆಪಿ ಅಧ್ಯಕ್ಷ ಕೃಷ್ಣಾರೆಡ್ಡಿ, ರಾಜ್ಯ ಬಿಜೆಪಿ ಮುಖಂಡ ವೈ. ಸುರೇಂದ್ರಗೌಡ, ಸಂಘಟನಾ ಪ್ರಭಾರಿಗಳಾದ ಶಿವಕುಮಾರ್, ಮೋಹನರೆಡ್ಡಿ, ಮಹೇಶ್ ಸತ್ಯನಾರಾಯಣ, ರಾಜ್ಯ ಬಿಜೆಪಿ ಪರಿಷತ್ ಸದಸ್ಯ ಪಿ.ಎಸ್. ಸತ್ಯನಾರಾಯಣರಾವ್, ವಕ್ತಾರ ಶಿಳ್ಳಂಗೆರೆ ಮಹೇಶ್, ತಾಲೂಕು ಬಿಜೆಪಿ ಅಧ್ಯಕ್ಷ ಅತ್ತಿಹಳ್ಳಿ ವೆಂಕಟರವಣ, ಮಾಜಿ ಅಧ್ಯಕ್ಷ ಪ್ರಸಾದ್, ರಾಧವಲ್ಲಭಗೌಡ, ಪಟ್ಟಣ ಬಿಜೆಪಿ ಅಧ್ಯಕ್ಷ ಎಚ್.ಎಸ್. ಹರೀಶ್, ಬಾಲಕೃಷ್ಣೇಗೌಡ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.