ಮತಪಟ್ಟಿಗೆ ಹೆಸರು ಸೇರಿಸಲು 13 ಸಾವಿರ ಅರ್ಜಿ
ಚಿಕ್ಕಮಗಳೂರು: ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ದಿನಾಂಕದೊಳಗೆ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ 13,408 ಅರ್ಜಿಗಳು ಬಂದಿವೆ.
ಈ ಪೈಕಿ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ 2528, ಮೂಡಿಗೆರೆ- 2600, ಚಿಕ್ಕಮಗಳೂರು- 2012, ತರೀಕೆರೆ- 2528, ಕಡೂರು ವಿಧಾನಸಭಾ ಕ್ಷೇತ್ರದಲ್ಲಿ 3740 ಅರ್ಜಿಗಳು ಹೊಸದಾಗಿ ಹೆಸರು ನೋಂದಣಿ ಮಾಡಿಕೊಳ್ಳಲು ಬಂದಿದೆ. ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ಕಡೂರು ತಾಲೂಕಿನಲ್ಲಿ ಅತಿ ಹೆಚ್ಚು ಅರ್ಜಿಗಳು ಬಂದಿವೆ.
ಅರ್ಜಿ ಸಲ್ಲಿಸಿರುವ ಅರ್ಜಿದಾರರ ಹೆಸರು ಯಥಾವತ್ತಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗುವುದಿಲ್ಲ. ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ ಪೂರಕವಾದ ಮಾಹಿತಿ ನೀಡಿದ್ದರೆ ಮಾತ್ರ ಅವರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಿಕೊಳ್ಳಲಾಗುವುದು. ಇಲ್ಲದೆ ಹೋದರೆ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಬಂದಿರುವ ಅರ್ಜಿಗಳ ಪರಿಶೀಲನಾ ಕಾರ್ಯ ಜಿಲ್ಲೆಯಲ್ಲಿ ಆರಂಭಗೊಂಡಿದ್ದು, ಇನ್ನು ಐದು ದಿನಗಳೊಳಗೆ ಜಿಲ್ಲೆಯ ಮತದಾರರ ಹೊಸ ಪಟ್ಟಿ ಸಿದ್ಧ್ದಗೊಳ್ಳಲಿದೆ ಎಂದರು.
13,51,245 ಮತದಾರರು: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 13,51,245 ಮತದಾರರು ಇದ್ದಾರೆ.
ಈ ಪೈಕಿ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ 6,55,276 ಮತದಾರರು ಇದ್ದು, ಶೃಂಗೇರಿ ಕ್ಷೇತ್ರದಲ್ಲಿ 1,50,199, ಮೂಡಿಗೆರೆ- 1,51,977, ಚಿಕ್ಕಮಗಳೂರು- 1,91,369, ತರೀಕೆರೆ ಕ್ಷೇತ್ರದಲ್ಲಿ 1,61,731 ಮತದಾರರು ಇದ್ದಾರೆ. ಒಟ್ಟು 6,55,276 ಮತದಾರರ ಪೈಕಿ, 3,31,009 ಪುರುಷರು, 3,24,241 ಮಹಿಳಾ ಮತದಾರರು ಇದ್ದಾರೆ.
ಹಾಸನ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿರುವ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ 1,83,618 ಮತದಾರರು ಇದ್ದು, ಈ ಪೈಕಿ 93,849 ಪುರುಷರು, 89,763 ಮಹಿಳಾ ಮತದಾರರು ಇದ್ದಾರೆ.
ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ 932 ಮತಗಟ್ಟೆಗಳಿದ್ದು, ಕಡೂರು ಕ್ಷೇತ್ರದಲ್ಲಿ 236 ಮತಗಟ್ಟೆಗಳಿವೆ. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ 429 ಸಿಬ್ಬಂದಿ ಮತದಾರರು ಇದ್ದಾರೆ.
ಗುರುತಿನ ಚೀಟಿ: ಜಿಲ್ಲೆಯಲ್ಲಿ ಒಟ್ಟು 8,38,894 ಮತದಾರರ ಪೈಕಿ 8,34,197 ಮತದಾರರಿಗೆ ಭಾವಚಿತ್ರವಿರುವ ಗುರುತಿನ ಚೀಟಿಯನ್ನು ಜಿಲ್ಲೆಯಲ್ಲಿ ನೀಡಲಾಗಿದೆ. 4,697 ಮಂದಿ ಭಾವಚಿತ್ರ ಇರುವ ಗುರುತಿನ ಚೀಟಿ ನೀಡಬೇಕಾಗಿದೆ.
ಶೃಂಗೇರಿ ಕ್ಷೇತ್ರದಲ್ಲಿ ಶೇ. 99.91, ಮೂಡಿಗೆರೆ- ಶೇ. 99.66, ಚಿಕ್ಕಮಗಳೂರು- 99.05, ತರೀಕೆರೆ- ಶೇ. 100, ಕಡೂರು- ಶೇ. 99.62 ರಷ್ಟು ಭಾವಚಿತ್ರ ನೀಡುವಲ್ಲಿ ಪ್ರಗತಿ ಸಾಧಿಸಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ನೀಡುವ ದೂರುಗಳ ಬಗ್ಗೆ ನಿಗಾ ವಹಿಸಲು ಎಲ್ಲಾ ತಾಲೂಕು ಕಚೇರಿಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ತೆರೆಯಲಾಗಿದೆ. ಜಿಲ್ಲೆಯಲ್ಲಿ ಅಭ್ಯರ್ಥಿಗಳಿಂದ ಹಾಗೂ ವಿವಿಧ ರಾಜಕೀಯ ಪಕ್ಷಗಳಿಂದ ಪ್ರಚಾರ ನಡೆಸುವ ಸಂಬಂಧ ಅನುಮೋದನೆ ಪಡೆಯಲು ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಏಕಗವಾಕ್ಷಿ ವ್ಯವಸ್ಥೆ ಮಾಡಲಾಗಿದ್ದು, ಅಪರ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರನ್ನು ಜಿಲ್ಲಾ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿಗಾ ವಹಿಸಲು ಸ್ಥಳೀಯ ಲೆಕ್ಕಪತ್ರ ವೃತ್ತದ ಸಹಾಯಕ ನಿಯಂತ್ರಣಾಧಿಕಾರಿ ರಾಮ್ ನಾಯಕ್ ಅವರನ್ನು ಜಿಲ್ಲಾ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ಇವರ ಜತೆಗೆ ವಿವಿಧ ಬ್ಯಾಂಕ್ ಗಳ ವ್ಯವಸ್ಥಾಪಕರನ್ನು ಸಹಾಯಕ ವೀಕ್ಷಕರಾಗಿ ಜಿಲ್ಲಾಡಳಿತ ನೇಮಕ ಮಾಡಿದೆ.
ಶೃಂಗೇರಿ ತಾಲೂಕಿನಲ್ಲಿ 4, ಕೊಪ್ಪ- 6, ಎನ್.ಆರ್. ಪುರ- 7, ಮೂಡಿಗೆರೆ- 5, ಚಿಕ್ಕಮಗಳೂರು- 5, ತರೀಕೆರೆ- 6, ಕಡೂರು- 7 ಸಂಚಾರ ದಳ ತಂಡ ರಚನೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

