ಕಾಂಗ್ರೆಸ್ ಗೆಲ್ಲಿಸಲು ಸಚಿನ್ ಮೀಗಾ ಮನವಿ
ತರೀಕೆರೆ: ಬಿಜೆಪಿ ರಾಷ್ಟ್ರೀಯ ಮುಖಂಡರು ಈ ಚುನಾವಣೆಯನ್ನು ಮೋದಿಯವರ ಚುನಾವಣೆ ಎಂದು ಬಿಂಬಿಸುತ್ತಿದ್ದಾರೆ, ಮೋದಿಯವನ್ನು ಈಗಾಗಲೇ ಭ್ರಷ್ಟ ರಹಿತ ಪ್ರಧಾನಮಂತ್ರಿ ಎಂದು ಬಿಂಬಿಸುವುದರ ಮೂಲಕ ದೇಶದ ಜನತೆಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಕಿಸಾನ್ ಘಟಕ ರಾಜ್ಯ ಉಪಾಧ್ಯಕ್ಷ ಸಚಿನ್ ಮಿಗಾ ತಿಳಿಸಿದ್ದಾರೆ. ಅವರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ಸಮೀಪದ ಕಲ್ಲತ್ತಿಪುರದಲ್ಲಿ ನಡೆದ ಭಾರತ ನಿರ್ಮಾಣ ಯಾತ್ರಾ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿಯವರನ್ನು ಎಲ್ಲೂ ಪ್ರಧಾನಮಂತ್ರಿ ಅಭ್ಯರ್ಥಿ ಎಂದೂ ಬಿಂಬಿಸಿಲ್ಲ. ಆದರೆ ಬಿಜೆಪಿಯವರು ಕಾಂಗ್ರೆಸ್ನವರು ಭ್ರಷ್ಟಾಚಾರ ಆಡಳಿತ ನೀಡಿದ್ದಾರೆ ಎಂದು ತಪ್ಪು ಹೇಳಿಕೆಗಳನ್ನು ನೀಡಿ ಜನರನ್ನು ಗೊಂದಲಕ್ಕೀಡು ಮಾಡುವ ಹುನ್ನಾರ ನಡೆಸುತ್ತಿದ್ದಾರೆ. ಇದು ನಡೆಯುವುದಿಲ್ಲ ಎಂದು ಅವರು ತಿಳಿಸಿದರು. ಸಾಮಾಜಿಕ ನ್ಯಾಯ ಕೊಡುವಂತಹ ಕಾಂಗ್ರೆಸ್ ಪಕ್ಷವನ್ನು ಲೋಕಸಭೆಯಲ್ಲಿ ಜನರು ಆಶೀರ್ವದಿಸಿ ಗೆಲ್ಲಿಸಬೇಕೆಂದು ಅವರು ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

