ತಾಲೂಕು ಕಚೇರಿಯಲ್ಲಿ ಏಕಗವಾಕ್ಷಿ ಕೇಂದ್ರ ಆರಂಭ
ನೀತಿ ಸಂಹಿತೆ ಪಾಲನಾ ತಂಡದ ಅಧಿಕಾರಿಗಳ ಮಾಹಿತಿ ಸಭೆಯಲ್ಲಿ ತಹಸೀಲ್ದಾರ್ ಕೃಷ್ಣಮೂರ್ತಿ
ನರಸಿಂಹರಾಜಪುರ: ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ನಡೆಸುವ ಪ್ರಚಾರ ಸಭೆಗೆ ಅನುಮತಿ ನೀಡಲು ತಾಲೂಕು ಕಚೇರಿಯಲ್ಲಿ ಏಕಗವಾಕ್ಷಿ ಕೇಂದ್ರ ತೆರೆಯಲಾಗಿದೆ ಎಂದು ತಹಸೀಲ್ದಾರ್ ಕೃಷ್ಣಮೂರ್ತಿ ತಿಳಿಸಿದರು.
ಅವರು ಬುಧವಾರ ತಾಲೂಕು ಕಚೇರಿಯ ಸಭಾಭವನದಲ್ಲಿ ಚುನಾವಣಾ ನೀತಿ ಸಂಹಿತೆ ಪಾಲನಾ ತಂಡ ಅಧಿಕಾರಿಗಳಿಗೆ ನೀತಿ ಸಂಹಿತೆ ಬಗ್ಗೆ ಮಾಹಿತಿ ನೀಡಿದರು.
ಶೃಂಗೇರಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ ಕೊಪ್ಪದಲ್ಲಿ ಪಿ.ಆರ್.ಒ ಸಭೆ ಕರೆದು ಚುನಾವಾಣಾ ನೀತಿ ಸಂಹಿತೆ ಬಗ್ಗೆ ಮಾಹಿತಿ ನೀಡಿದ್ದಾರೆ. ತಾಲೂಕಿನ ಎಲ್ಲಾ ಸೆಕ್ಟರ್ ಅಧಿಕಾರಿಗಳು ಚುನಾವಣಾ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಮೂಲ ಸೌಕರ್ಯದ ಬಗ್ಗೆ ಪರಿಶೀಲಿಸಬೇಕು. ಕೊರತೆ ಇದ್ದರೆ ತಕ್ಷಣ ನನ್ನ ಗಮನಕ್ಕೆ ತರಬೇಕು ಎಂದು ಸಲಹೆ ನೀಡಿದರು.
ನಾಲ್ಕು ಅಧಿಕಾರಿಗಳು: ಎನ್.ಆರ್. ಪುರ ತಾಲೂಕು ಕಚೇರಿಯಲ್ಲಿ ತೆರೆಯಲಾದ ಏಕಗವಾಕ್ಷಿ ಕೇಂದ್ರದಲ್ಲಿ ಪೊಲೀಸ್ ಇಲಾಖೆ. ಪಪಂ, ತಾಪಂ ಕಚೇರಿ ಅಧಿಕಾರಿ ಸೇರಿದಂತೆ 4 ಅಧಿಕಾರಿಗಳು ಉಪಸ್ಥಿತರಿದ್ದು, ರಾಜಕೀಯ ಪಕ್ಷಗಳಿಗೆ ಪ್ರಚಾರ ಸಭೆ ನಡೆಸಲು ಅನುಮತಿ ನೀಡುತ್ತಾರೆ.
ರಾಜಕೀಯ ಪಕ್ಷಗಳು ಅನುಮತಿ ಪಡೆದ ಜಾಗದಲ್ಲೇ ಸಭೆ ನಡೆಸಬೇಕು. ದಾರಿಯಲ್ಲಿ ಮೈಕ್ ಪ್ರಚಾರ ಮಾಡಬಾರದು. ಸರ್ಕಾರಿ ಶಾಲಾ ಆವರಣದಲ್ಲಿ ಚುನಾವಣಾ ಪ್ರಚಾರ ಮಾಡಬಾರದು.ಸಭೆ,ಸಮಾರಂಭಗಳನ್ನು ಪೂರ್ಣವಾಗಿ ವೀಡಿಯೋ ಮಾಡಬೇಕು ಎಂದು ಅವರು ಸಲಹೆ ನೀಡಿದರು.
ಕಡ್ಡಾಯ ಪಾಲ್ಗೊಳ್ಳುವಿಕೆ: ಚುನಾವಣೆಗೆ ನಿಯೋಜನೆಗೊಂಡವರು ಕಡ್ಡಾಯವಾಗಿ ಚುನಾವಣೆ ಮುಗಿಯವರೆಗೂ ಕರ್ತವ್ಯದಲ್ಲಿ ಪಾಲ್ಗೊಳ್ಳಬೇಕು. ಪೊಲೀಸ್, ಅಬಕಾರಿ, ಕಂದಾಯ ಇಲಾಖೆ ಸೇರಿ ಕಣ್ಗಾವಲು ತಂಡ ರಚಿಸಲಾಗಿದೆ.
ತಾಲೂಕು ಮಟ್ಟದ ಸಭೆಗಳಿಗೆ ತಾಲೂಕು ಕಚೇರಿಯ ಏಕಗವಾಕ್ಷಿ ಕೇಂದ್ರದಲ್ಲಿ ಅನುಮತಿ ಪಡೆಯಬೇಕು. ಕ್ಷೇತ್ರ ಮಟ್ಟದ ಸಭೆಗೆ ಕೊಪ್ಪದಲ್ಲಿ, ಜಿಲ್ಲಾ ಮಟ್ಟದ ಸಭೆಗೆ ಚಿಕ್ಕಮಗಳೂನಲ್ಲಿ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಭೆಗಳಿಗೆ ಉಡುಪಿಯಲ್ಲಿ ಅನುಮತಿ ಪಡೆಯಬೇಕು ಎಂದು ಅವರು ತಿಳಿಸಿದರು.
ಕಂಟ್ರೋಲ್ ರೂಂ: ನರಸಿಂಹರಾಜಪುರ ತಾಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಚುನಾವಣೆ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 18004252208 ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಗ್ರೇಟ್ 2 ತಹಸೀಲ್ದಾರ್ ಲೋಕೇಶಪ್ಪ, ಹಿರಿಯ ಚುನಾವಣಾ ಸೆಕ್ಟರ್ ಅಧಿಕಾರಿ ಶ್ರೀನಿವಾಸ ರೆಡ್ಡಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

