ಪರೀಕ್ಷಾ ಪೂರ್ವ ತರಬೇತಿ ಶಿಬಿರ
ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಬಿಪಿಎಸ್ ರಾಷ್ಟ್ರೀಕೃತ ವಿವಿಧ ಬ್ಯಾಂಕ್ ಅಧಿಕಾರಿಗಳ ಹಾಗೂ ಗುಮಾಸ್ತರ ಹುದ್ದೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ಹಮ್ಮಿಕೊಳ್ಳಲಾಗಿದೆ.
ಈ ತರಬೇತಿಯು ಎಲ್ಐಸಿ, ನ್ಯಾಷನಲ್ ಇನ್ಸುರೆನ್ಸ್, ಆರ್ಬಿಐ, ಆರ್ಆರ್ಬಿ ಹಾಗೂ ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳಿಗೆ ತರಬೇತಿ ನೀಡಲಾಗುವುದು. ಮಾ. 22ರೊಳಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕುಲಸಚಿವ ಪ್ರೊ. ಪಿ.ಎಸ್. ನಾಯಕ್ (ದೂ. 0821- 2515944) ಅಥವಾ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ ಎ.ಐ.ಟಿ. ಕ್ಯಾಂಪಸ್ ಕೆ.ಎಂ. ರೋಡ್, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

