ಕೃಷಿ ಉತ್ಸವಕ್ಕೆ 6.50 ಲಕ್ಷ ಖರ್ಚು
ನರಸಿಂಹರಾಜಪುರ: ಪಟ್ಟಣದ ಜೂನಿಯರ್ ಪ್ರೊ. ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೃಂಗೇರಿ ಕ್ಷೇತ್ರ ಮಟ್ಟದ ಕೃಷಿ ಉತ್ಸವ ಕಾರ್ಯಕ್ರಮದಲ್ಲಿ ಒಟ್ಟು ರು. 6,49,832 ಖರ್ಚಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೊಪ್ಪ, ಶೃಂಗೇರಿ, ಎನ್.ಆರ್. ಪುರ ಯೋಜನಾಧಿಕಾರಿ ಕು. ಉಮಾವತಿ ತಿಳಿಸಿದರು.
ಅವರು ಬಸ್ತಿಮಠದ ದೇವಾಲಯದ ಆವರಣದಲ್ಲಿ ಮಂಗಳವಾರ ನಡೆದ ಕೃಷಿ ಉತ್ಸವ ಅಭಿನಂದನಾ ಸಮಾರಂಭ ಮತ್ತು ಲೆಕ್ಕ ಪತ್ರ ನೀಡಿಕೆ ಸಭೆಯಲ್ಲಿ ಮಾಹಿತಿ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಸ್ವಾಗತ ಸಮಿತಿ ಅಧ್ಯಕ್ಷ ಎನ್.ಎಂ. ಕಾಂತರಾಜ್ ಮಾತನಾಡಿದರು. ಸಾಹಿತಿ ಎಂ. ಜಯಮ್ಮ, ಶೆಟ್ಟಿಕೊಪ್ಪ ವಲಯ ಮತ್ತು ಬೆಳ್ಳೂರು ವಲಯದ ಒಕ್ಕೂಟಗಳ ಅಧ್ಯಕ್ಷರಾದ ಕೆಸವೆ ಮಂಜುನಾಥ್, ಹಾತೂರು ಪ್ರಸನ್ನ, ಕೃಷಿ ಅಧಿಕಾರಿ ಪ್ರೇಂಕುಮಾರ್, ಮಹಿಳಾ ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಶೃತಿ, ಧ.ಗ್ರಾ. ಯೋಜನೆ ತಾಲೂಕು ಮೇಲ್ವೀಚಾರಕ ಗಣೇಶ್, ಬಾಳೆಹೊನ್ನೂರು ಭಾಗದ ವಲಯ ಒಕ್ಕೂಟದವರು, ಲೆಕ್ಕ ಪರಿಶೋಧಕರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

