ಮಸ್ಕತ್‌ನಲ್ಲಿ ಅಪಘಾತ ಬಂಡಿಮಠದ ವ್ಯಕ್ತಿ ಸಾವು
ಬಾಳೆಹೊನ್ನೂರು: ಮಸ್ಕತ್‌ನಲ್ಲಿ ಬುಧವಾರ ನಡೆದ ರಸ್ತೆ ಅಪಘಾತದಲ್ಲಿ ಬಿ.ಕಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಡಿಮಠದ ವ್ಯಕ್ತಿ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ ಪಾಹೀಮಾ, ತಾಯಿ, ತಮ್ಮ ಹಾಗೂ ಇಬ್ಬರು ಮಕ್ಕಳಿದ್ದಾರೆ.
ಬಂಡಿಮಠದ ಲಿಯಾಕತ್ ಆಲಿ ಅಲಿಯಾಸ್ ಅಬು (42) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. 5 ವರ್ಷಗಳ ಹಿಂದೆ ಚಾಲಕ ವೃತ್ತಿಗಾಗಿ ಮಸ್ಕತ್‌ಗೆ ತೆರಳಿ ಹಯಾಸ್ ಇಂಟರ್ ನ್ಯಾಷನಲ್ ಎಲ್‌ಎಲ್‌ಸಿ ಎಂಬ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಬುಧವಾರ ನಡೆದ ರಸ್ತೆ ಅಪಘಾತದಲ್ಲಿ ಅವರು ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಬಂಡಿಮಠದ ಅವರ ಮನೆಯಲ್ಲಿ ದುಃಖ ಮಡುಗಟ್ಟಿತ್ತು.
ಮೃತರ ಶವವನ್ನು ಭಾರತಕ್ಕೆ ತರಲು ಅಗತ್ಯ ದಾಖಲೆಗಳನ್ನು ನೀಡುವಂತೆ ಅಲ್ಲಿನ ರಾಯಭಾರ ಕಚೇರಿ ಸೂಚಿಸಿದೆ. ಸುದ್ದಿ ತಿಳಿಯುತ್ತಿದ್ದಂತೆ ನರಸಿಂಹರಾಜಪುರ ತಾಲೂಕು ಬಿಜೆಪಿ ಅಧ್ಯಕ್ಷ ಭಾಸ್ಕರ್ ವೆನಿಲ್ಲಾ, ಮುಖಂಡರಾದ ಪ್ರಭಾಕರ್ ಪ್ರಣಸ್ವಿ, ಬಿ.ಜಗದೀಶ್ಚಂದ್ರ ಮೃತರ ನಿವಾಸಕ್ಕೆ ತೆರಳಿ ಸಾಂತ್ವನ ಹೇಳಿದರು.
ನಂತರ ಮೃತರು ಬಂಡಿಮಠದಲ್ಲಿ ವಾಸವಿರುವ ಕುರಿತು ಬಿ.ಕಣಬೂರು ಗ್ರಾ.ಪಂ.ನಿಂದ ದಾಖಲೆ ಪಡೆದು ಸಂಬಂಧಪಟ್ಟ ಕಚೇರಿಗೆ ರವಾನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

