ಚಿಕ್ಕಮಗಳೂರು

24ರಂದು ಸಿಪಿಐ ಅಭ್ಯರ್ಥಿ ನಾಮಪತ್ರ

Published On :

ಕ.ಪ್ರ.ವಾರ್ತೆ   ಚಿಕ್ಕಮಗಳೂರು   ಮಾ. 20
ಕೂಲಿ ಕಾರ್ಮಿಕರ, ಬಡವರ, ದುಡಿಯುವ ವರ್ಗದ ಪರ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿರುವ ಸಿಪಿಐ ಪಕ್ಷ ಈ ಬಾರಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ತೀರ್ಮಾನ ತೆಗೆದುಕೊಂಡಿದೆ. ಪಕ್ಷದ ಅಭ್ಯರ್ಥಿ ವಿಜಯಕುಮಾರ್ ಮಾ.24ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್.ಎಂ. ರೇಣುಕಾರಾಧ್ಯ ಹೇಳಿದ್ದಾರೆ.
ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳನ್ನು ಸಮಾನಂತರ ದೂರದಲ್ಲಿಡುವ ಉದ್ದೇಶದಿಂದಾಗಿ ತೃತೀಯ ರಂಗ ಅಸ್ತಿತ್ವಕ್ಕಾಗಿ ರಾಷ್ಟ್ರಮಟ್ಟದಲ್ಲಿ ಚರ್ಚೆ ನಡೆದಿತ್ತು. ಜೆಡಿಎಸ್‌ನೊಂದಿಗೆ ಸಿಪಿಐ ಸೇರಿದಂತೆ ಇತರೆ ಪಕ್ಷಗಳು ಹೊಂದಾಣಿಕೆ ಮಾಡಿಕೊಳ್ಳುವ ಅಭಿಲಾಶೆ ಹೊಂದಿದ್ದವು. ಆದರೆ, ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಜೆಡಿಎಸ್ ನಡೆದುಕೊಳ್ಳುತ್ತಿಲ್ಲ. ಅದುದರಿಂದ ಸಿಪಿಐ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.
ಸಾವಿರಾರು ಕೋಟಿ ರು. ವೆಚ್ಚ:  ಬಿಜೆಪಿ, ಮೋದಿ ಪಾರ್ಟಿಯಾಗಿದೆ. ಮೋದಿ ಅವರು ದೇಶದ ವಿವಿಧೆಡೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದು, ಇದಕ್ಕಾಗಿ ಸಾವಿರಾರು ಕೋಟಿ ರುಪಾಯಿ ವೆಚ್ಚವಾಗುತ್ತಿದೆ. ಈ ಹಣವನ್ನು ಕಾರ್ಪೋರೇಟ್ ವಲಯಗಳಿಂದ ಹರಿದುಬರುತ್ತಿದೆ. ಇದರಿಂದಾಗಿ ದುಡಿಯುವ ವರ್ಗಕ್ಕೆ ಭಯವಾಗುತ್ತಿದೆ. ಚುನಾವಣೆಗೆ ಹಣ ಕೊಟ್ಟವರು. ಅವರಿಂದ ಸಹಾಯ ಅಪೇಕ್ಷಿಸುವುದು ಸಹಜ. ತಮಗೆ ಬೇಕಾದವರು ಪ್ರಧಾನಿಯಾದರೆ ಅನುಕೂಲ ಆಗಲಿದೆ ಎಂಬ ಉದ್ದೇಶದಿಂದಾಗಿ ಕಾರ್ಪೋರೇಟ್ ವಲಯ ಹಣ ಖರ್ಚು ಮಾಡುತ್ತಿದೆ ಎಂದು ಆರೋಪಿಸಿದರು.
ಜನಪರ ಹೋರಾಟ:  ಸಿಪಿಐ ಪಕ್ಷ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಲವು ಸಮಸ್ಯೆಗಳ ವಿರುದ್ಧ ಹೋರಾಟ ಮಾಡುತ್ತಾ ಬಂದಿದೆ.
ಹುಲಿ ಯೋಜನೆ, ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ, ಸೂರಿಲ್ಲದವರಿಗೆ ಸೂರು ಹೀಗೆ ಹಲವು ಜನಪರ ಹೋರಾಟ ನಡೆಸಿಕೊಂಡು ಬಂದಿದ್ದು, ಈ ಚುನಾವಣೆಯಲ್ಲಿ ಈ ಹೋರಾಟಗಳಿಂದ ಅನುಕೂಲವಾಗಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಿಪಿಐ ಅಭ್ಯರ್ಥಿ ವಿಜಯಕುಮಾರ್, ಮುಖಂಡರಾದ ರಾಧಾ ಸುಂದರೇಶ್, ವೇಲಾಯುಧನ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.