ಚಿಕ್ಕಮಗಳೂರು

25, 26ರಂದು ಜೆಡಿಎಸ್ ಅಭ್ಯರ್ಥಿ ಧನಂಜಯ ಜಿಲ್ಲಾ ಪ್ರವಾಸ

Published On :

ಕ.ಪ್ರ.ವಾರ್ತೆ   ಚಿಕ್ಕಮಗಳೂರು   ಮಾ. 20
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಧನಂಜಯಕುಮಾರ್ ಮಾ.25 ಮತ್ತು 26 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ ಎಂದು ಮೂಡಿಗೆರೆ ಶಾಸಕ ಬಿ.ಬಿ. ನಿಂಗಯ್ಯ ಹೇಳಿದ್ದಾರೆ.
ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.
ಮಾ.25ರಂದು ಬೆಳಗ್ಗೆ 11 ಗಂಟೆಗೆ ಶೃಂಗೇರಿಯಲ್ಲಿ, ಮಧ್ಯಾಹ್ನ 3 ಗಂಟೆಗೆ ತರೀಕೆರೆ, ಮಾ.26ರಂದು ಬೆಳಗ್ಗೆ 11 ಗಂಟೆಗೆ ಮೂಡಿಗೆರೆ ಹಾಗೂ ಮಧ್ಯಾಹ್ನ 3 ಗಂಟೆಗೆ ಚಿಕ್ಕಮಗಳೂರಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಧನಂಜಯಕುಮಾರ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಅಧಿವೇಶನದಲ್ಲಿ ಗಮನ...:  ಒತ್ತುವರಿ ತೆರವು ವಿರೋಧಿಸಿ ಮೂಡಿಗೆರೆ ತಾಲೂಕಿನ ಬಲಿಗೆ ಗ್ರಾಮಸ್ಥರು ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಹೋರಾಟ ಮಾಡುವುದು ಅವರ ಹಕ್ಕು. ಈ ಹೋರಾಟದಲ್ಲಿ ನ್ಯಾಯ ಇದೆ.
ಅರಣ್ಯ ಭೂಮಿಗೆ ಪರ್ಯಾಯವಾಗಿ ಕುದುರೆಮುಖದಲ್ಲಿರುವ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆಗೆ ಬಿಟ್ಟುಕೊಟ್ಟು, ಹಾಲಿ ಇರುವ ಜನರನ್ನು ಅಲ್ಲೇ ಇರುವಂತೆ ಮಾಡಲು ಸಲಹೆ ನೀಡಿದೆ. ಇಷ್ಟೆಲ್ಲಾ ಕೆಲಸಗಳು ಆಗಿವೆ. ಅದುದರಿಂದ ಚುನಾವಣಾ ಬಹಿಷ್ಕಾರ ನಿರ್ಧಾರದಿಂದ ಹಿಂದೆ ಸರಿಯುವಂತೆ ಗ್ರಾಮಸ್ಥರಿಗೆ ಖುದ್ದಾಗಿ ಭೇಟಿ ಮಾಡಿ ಮನವಿ ಮಾಡಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಈಶ್ವರ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.