ಚಿಕ್ಕಮಗಳೂರು

ಧನಂಜಯಕುಮಾರ್ ನಾಮಪತ್ರ

Published On :

ಚಿಕ್ಕಮಗಳೂರು: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನಾಮಪತ್ರ ಸಲ್ಲಿಕೆಗೆ ಮೂರನೇ ದಿನವಾದ ಶುಕ್ರವಾರದಂದು ಧನಂಜಯಕುಮಾರ್(ಜೆಡಿಎಸ್) ಅವರು 2 ನಾಮಪತ್ರ ಸಲ್ಲಿಸಿದರು. ಕ್ಷೇತ್ರದಲ್ಲಿ ಇದುವರೆಗೆ ಬಿಜೆಪಿ 1, ಜೆಡಿಎಸ್‌ನ 2 ಸೇರಿದಂತೆ ಒಟ್ಟು 3 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರಗಳ ಸಲ್ಲಿಕೆಗೆ ಮಾ. 26 ಕೊನೆಯ ದಿನಾಂಕವಾಗಿರುತ್ತದೆ ಎಂದು ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಉಡುಪಿ ಜಿಲ್ಲಾಧಿಕಾರಿ ಡಾ. ಮುದ್ದುಮೋಹನ್ ಅವರು ತಿಳಿಸಿದ್ದಾರೆ.

ಪಿಡಿಒ ಅಮಾನತು
ಕಡೂರು: ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರೂ ಕಾಮಗಾರಿಗೆ ಚಾಲನೆ ನೀಡಿದ್ದ ಪ್ರಕರಣಕ್ಕೆ ಸಂಭಂದಿಸಿದಂತೆ ಕಡೂರು ತಾಲೂಕು ಹೋಚೀಹಳ್ಳಿ ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿಯನ್ನು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಅಮಾನತುಗೊಳಿಸಿರುವ ಪ್ರಕರಣ ವರದಿಯಾಗಿದೆ.   ತಾಲೂಕಿನ ಹೋಚೀಹಳ್ಳಿ ಗ್ರಾಮ ಪಂಚಾಯ್ತಿಯ ಅಭಿವೃದ್ದಿ ಅಧಿಕಾರಿ ನಾಗೇಶ್ ಎಂಬುವರು ಮಾರ್ಚ್ 4 ರಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸಹ ಎನ್ ಎಂ ಆರ್ನ್ನು ಪಡೆದುಕೊಂಡು ಮಾರ್ಚ್ 10 ರಂದು 5 ಕಾಮಗಾರಿಗಳನ್ನು ಆರಂಭಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.