ಚಿಕ್ಕಮಗಳೂರು

ಪ್ರಜಾಪ್ರಭುತ್ವ ಯಶಸ್ವಿಗಾಗಿ ಮತದಾನ ಮಾಡಿ: ಶ್ರೀ

Published On :

ಬಾಳೆಹೊನ್ನೂರು: ಪ್ರಜಾಪ್ರಭುತ್ವದ ಯಶಸ್ವಿಗಾಗಿ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರು ಅತ್ಯಂತ ಜವಾಬ್ದಾರಿಯಿಂದ ಮತ ಚಲಾವಣೆ ಮಾಡುವುದು ಅವಶ್ಯವಾಗಿದೆ ಎಂದು ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.
ಶ್ರೀಪೀಠದಲ್ಲಿ ಸುದ್ದಿಗಾರರೊಂದಿಗೆ ಪ್ರಸ್ತುತ ಲೋಕಸಭಾ ಚುನಾವಣೆ ಕುರಿತು ಮಾತನಾಡಿ, ಮತದಾನದ ಸಂದರ್ಭದಲ್ಲಿ ಕೆಲವು ಬುದ್ಧಿಜೀವಿಗಳು, ವಿದ್ಯಾವಂತರು ತಮ್ಮ ಹಕ್ಕು ಚಲಾವಣೆಯಿಂದ ದೂರ ಉಳಿಯುತ್ತಿರುವುದು ಉತ್ತಮವಲ್ಲ.
ಗ್ರಾಮೀಣ ಭಾಗದ ಜನತೆ ರಾಜಕೀಯ ಧುರೀಣರ ಆಸೆ, ಆಕಾಂಕ್ಷೆಗಳಿಗೆ ಬಲಿಯಾಗಿ ತಮ್ಮ ಮತವನ್ನು ಹಣ, ಹೆಂಡಕ್ಕೆ ಮಾರಿಕೊಳ್ಳುವುದು ವಿಷಾದನೀಯ. ಅಂತಹ ಮತದಾರರಿಗೆ ಅರಿವು ಮೂಡಿಸುವ ಕಾರ್ಯವನ್ನು ಎಲ್ಲಾ ರಾಜಕೀಯ ಪಕ್ಷಗಳು ಮಾಡಬೇಕು ಎಂದರು.
ಇತ್ತೀಚಿನ ದಿನಗಳಲ್ಲಿ ಚುನಾವಣೆಯಿಂದ ಚುನಾವಣೆಗೆ ಯುವ ಮತದಾರರ ಸಂಖ್ಯೆ ಹೆಚ್ಚುತ್ತಿದ್ದು, ಮತದಾನ ಮಾಡುವ ಅವಕಾಶ ಪ್ರಾಪ್ತವಾಗುತ್ತಿದೆ.
ಯುವ ಜನಾಂಗ ದೂರದೃಷ್ಟಿ, ಸಮಗ್ರತೆ, ಸೌಹಾರ್ದತೆ ಹಾಗೂ ರಾಷ್ಟ್ರಪ್ರೇಮ ಬೆಳೆಸುವ ನಿಟ್ಟಿನಲ್ಲಿ ಜವಾಬ್ದಾರಿಯಿಂದ ಚುನಾವಣೆಯಲ್ಲಿ ಯೋಗ್ಯ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು ಹಾಗೂ ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಶ್ರಮಿಸುವಂತಾಗಬೇಕು ಎಂದರು.
 ಚುನಾವಣಾ ಸಮಯದಲ್ಲಿ ಪಕ್ಷಗಳು ಯಾವುದೇ ಗೊಂದಲ ಸೃಷ್ಟಿ ಮಾಡದೇ ಶಾಂತಿಯುತ ಮತದಾನಕ್ಕೆ ಸಹಕರಿಸಬೇಕು ಎಂದರು.

ಮರಳಿ ಕಾಂಗ್ರೆಸ್‌ಗೆ
ಸಾಗರ: ಕಾಂಗ್ರೆಸ್‌ನಿಂದ ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬೇಸರ ಮತ್ತು ಸಿಟ್ಟು ಮಾಡಿಕೊಂಡು ಮಾ. 17ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕಾರ್ಯಕ್ರಮದಲ್ಲಿ ಬಿಜೆಪಿ ಸೇರಿದ್ದೆ. ಆದರೆ ಇದು ದಿಢೀರ್ ತೆಗೆದುಕೊಂಡ ತಪ್ಪು ನಿರ್ಧಾರ ಎಂಬ ಕಾರಣದಿಂದಾಗಿ ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ಸಿಗೆ ಬಂದಿದ್ದೇನೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಮಂಡಗಳಲೆ ಹುಚ್ಚಪ್ಪ ಹೇಳಿದರು.  ಬಿಜೆಪಿ ಯಾವುದೇ ಆಮಿಷ ಒಡ್ಡಿರಲಿಲ್ಲ. ಆದರೆ ಅಲ್ಲಿ ಬಿಜೆಪಿ ಮತ್ತು ಕೆಜೆಪಿಯವರ ನಡುವೆ ಗುಂಪುಗಾರಿಕೆ ಇದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.