ನೀರಿಲ್ಲ, ಬೆಳಕಿಲ್ಲ, ಬೆಳೆಯೂ ಕೈ ಸೇರುತ್ತಿಲ್ಲ
ಸೊರಬ: ವಿದ್ಯುತ್ ಲೋಡ್ಶೆಡ್ಡಿಂಗ್ನಿಂದ ಗ್ರಾಮೀಣ ಜನರು ತಾಳ್ಮೆ ಕಳೆದುಕೊಂಡು ಬೀದಿಗಿಳಿಯುವಂತಾಗಿದೆ. ಗ್ರಾಮಕ್ಕೆ 5 ದಿನಗಳಿಂದ ವಿದ್ಯುತ್ ಸೌಲಭ್ಯವಿಲ್ಲ. ಇದರಿಂದ ಗ್ರಾಮಸ್ಥರು ಐದಾರು ಕಿ.ಮೀ. ದೂರದಿಂದ ನೀರು ತರುವ ಪರಿಸ್ಥಿತಿ ಉಂಟಾಗಿದೆ ಎಂದು ಚಿಟ್ಟೂರು ಗ್ರಾಪಂ ಉಪಾಧ್ಯಕ್ಷ ನಳಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಮೆಸ್ಕಾಂ ಕಚೇರಿ ಎದುರು ಚಿಟ್ಟೂರು ಚಾಮುಂಡೇಶ್ವರಿ ಗ್ರಾಮಾಭಿವೃದ್ಧಿ ಸಮಿತಿ ಮತ್ತು ಗ್ರಾಮಸ್ಥರು ಕಳೆದ ಹಲವಾರು ದಿನಗಳಿಂದ ಗ್ರಾಮಕ್ಕೆ ಅಸಮರ್ಪಕ ವಿದ್ಯುತ್ ಪೂರೈಕೆ ಆಗುತ್ತಿರುವುದನ್ನು ವಿರೋಧಿಸಿ, ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.
3 ಗಂಟೆ ಮಾತ್ರ: ಕುಡಿಯಲು ಹನಿ ನೀರಿಲ್ಲ. ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮೀಪಿಸುತ್ತಿದೆ. ಭವಿಷ್ಯ ಕಮರಿಹೋಗುವ ಸಂಭವ ಹೆಚ್ಚು. ರೈತರ ಬೆಳೆ ನೀರಿಲ್ಲದೆ ಒಣಗುತ್ತಿದೆ. ಸರ್ಕಾರ ಗ್ರಾಮೀಣ ಜನರ ಜೀವನದ ಜೊತೆ ಚೆಲ್ಲಾಟ ಆಡುತ್ತಿದೆ. ದಿನದ 24 ಗಂಟೆಗಳಲ್ಲಿ ಕೇವಲ 3 ಗಂಟೆ ಮಾತ್ರ ವಿದ್ಯುತ್ ನೀಡಲಾಗುತ್ತಿದೆ ಎಂದು ಬೇಸರಿಸಿದರು.
ಸ್ಥಳಕ್ಕೆ ಆಗಮಿಸಿದ್ದ ಜಿಪಂ ಸದಸ್ಯ ಗಂಗಾಧರಪ್ಪ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅನಿಯಮಿತ ವಿದ್ಯುತ್ ನಿಲುಗಡೆ ಕ್ರಮ ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ತಾಲೂಕಿನ ಜನರೊಂದಿಗೆ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ತೀವ್ರ ತೊಂದರೆ: ಪದವಿ ವಿದ್ಯಾರ್ಥಿಗಳು ಕೂಡ ಆಗಮಿಸಿ, ಮೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಳೆದ 3-4 ದಿನಗಳಿಂದ ಹಾಲಗಳಲೆ, ಹೆಗ್ಗೋಡು, ಚಿಮಣೂರು, ಶಿಗ್ಗಾ ವ್ಯಾಪ್ತಿ ಸೇರಿದಂತೆ ಬಹುತೇಕ ಗ್ರಾಮಗಳಿಗೆ ವಿದ್ಯುತ್ ಇಲ್ಲದೆ ಕತ್ತಲಲ್ಲೆ ಕಾಲ ಕಳೆಯುವಂತಾಗಿದೆ. ಇದರಿಂದ ನಮ್ಮ ವಿದ್ಯಾಭ್ಯಾಸಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು. ಪ್ರತಿಭಟನೆಯಲ್ಲಿ ಚಿಟ್ಟೂರು ರೇವಣಪ್ಪ, ಸುಭಾಷ್ಚಂದ್ರ ಕಾಂತೇಶ್ ಕೆ.ಎಂ., ಅಡವೇಶಪ್ಪ, ಹೇಮಂತ್ಕುಮಾರ್, ಲಿಂಗರಾಜ, ವೀರೇಶಗೌಡ, ಹುಚ್ಚರಾಯಪ್ಪ, ಗ್ರಾಮಸ್ಥರು ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

