ಮಲೆನಾಡಿನ ಸಮಸ್ಯೆ ಮುಂದಿಟ್ಟು ಜೆಡಿಎಸ್ ಮತಯಾಚನೆ
ನರಸಿಂಹರಾಜಪುರ: ಮಲೆನಾಡಿನ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಜೆಡಿಎಸ್ ಈ ಬಾರಿ ಶೃಂಗೇರಿ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆ ಎದುರಿಸಲಿದ್ದು, ಈ ಬಗ್ಗೆ ಚರ್ಚೆಯಾಗಲಿ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಟಿ. ರಾಜೇಂದ್ರ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಮಲೆನಾಡಿನ ಸಮಸ್ಯೆಗಳಾದ ಒತ್ತುವರಿ, ಕಸ್ತೂರಿ ರಂಗನ್ ವರದಿ ಹಾಗೂ ಅಡಕೆ ಹಳದಿ ಎಲೆ ರೋಗದ ಸಮಸ್ಯೆ ಪರಿಹರಿಸಲು ಬಿಜೆಪಿ ಹಾಗೂ ಕಾಂಗ್ರೆಸ್ ವಿಫಲವಾಗಿದೆ. ಒತ್ತುವರಿ ಸಮಸ್ಯೆಯ ಸಂದರ್ಭದಲ್ಲಿ ಬಿಜೆಪಿಯ ಎಂಪಿ ಹಾಗೂ ಇಲ್ಲಿನ ಶಾಸಕರು ಸಂಪೂರ್ಣ ಎಡವಿದ್ದಾರೆ. ಕಸ್ತೂರಿ ರಂಗನ್ ವರದಿ ಜಾರಿಯ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಂದೆ ವರದಿ ಬಂದಾಗ ಬಿಜೆಪಿಯ ಮುಖ್ಯಮಂತ್ರಿಗಳೇ ಒಪ್ಪಿಗೆ ನೀಡಿದ್ದಾರೆ ಎಂದು ಆರೋಪಿಸಿದರು.
ಸರ್ಕಾರ ವಿಫಲ: ಅಡಕೆ ಬೆಳೆಗಾರರ ಸಮಸ್ಯೆ ಬಗೆಹರಿಸಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಈ ಎರಡೂ ಪಕ್ಷಗಳ ಯಾವ ನೈತಿಕತೆ ಆಧಾರದ ಮೇಲೆ ಮತ ಕೇಳಲಿದೆ ಎಂದು ಪ್ರಶ್ನಿಸಿದರು.
ತೃತೀಯ ರಂಗ ಅಧಿಕಾರಕ್ಕೆ ಬಂದರೆ ಒಂದು ವರ್ಷದೊಳಗೆ ಅರಣ್ಯ ಹಕ್ಕು ಕಾಯ್ದೆ ಜಾರಿಗೆ ತರಲಿದೆ. ಡಾ. ಗೋರಕ್ಸಿಂಗ್ ವರದಿ ಜಾರಿಗೆ ತರಲಿದೆ ಎಂದು ಭರವಸೆ ನೀಡಿದರು.
ಧನಂಜಯಕುಮಾರ್ ಅವರು ಮಾ. 25ರ ಮಂಗಳವಾರ ಶೃಂಗೇರಿ ಕ್ಷೇತ್ರಕ್ಕೆ ಆಗಮಿಸಲಿದ್ದು, ಕೊಪ್ಪದ ಪುರಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಜೆಡಿಎಸ್ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಹೊಸೂರು ಸುರೇಶ್, ನಗರ ಘಟಕದ ಅಧ್ಯಕ್ಷ ಸತ್ಯನಾರಾಯಣ ಶೆಟ್ಟಿ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಸುಬಾನ್, ಸದಸ್ಯ ಸುನೀಲ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

