ಗುರಿ ಮುಟ್ಟಲು ಶಿಸ್ತು, ಸಂಯಮ ಅಗತ್ಯ: ಚೇತನ್
ಚಿಕ್ಕಮಗಳೂರು: ವಿದ್ಯಾರ್ಥಿಗಳು ಸಂಯಮ ಮತ್ತು ಶಿಸ್ತಿನಿಂದ ವಿದ್ಯಾಭ್ಯಾಸ ಮಾಡಿದಾಗ ಮಾತ್ರ ತಮ್ಮ ಗುರಿ ಮುಟ್ಟಲು ಸಾಧ್ಯ ಎಂದು ಅನನ್ಯ ಚೇತನ್ ಹೇಳಿದ್ದಾರೆ.
ನಗರದ ಹೊರವಲಯದಲ್ಲಿರುವ ಅಂಬರ್ವ್ಯಾಲಿ ರೆಸಿಡೆನ್ಸಿ ಶಾಲೆಯಲ್ಲಿ ಶನಿವಾರ ನಡೆದ ಜ್ಯೂನಿಯರ್ ವಿಭಾಗದ ವಾರ್ಷಿಕೋತ್ಸವವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿ, ಆಧುನಿಕ ಯುಗದಲ್ಲಿ ವಿದ್ಯಾಭ್ಯಾಸದಲ್ಲಿ ತೀವ್ರ ಪೈಪೋಟಿ ಎದುರಾಗಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಕಾರ್ಯಕ್ರಮಗಳಲ್ಲಿ ಹೆಚ್ಚು ಭಾಗವಹಿಸಿ ಅತ್ಯಂತ ಕ್ರಿಯಾಶೀಲರಾಗಿರಬೇಕು ಎಂದರು. ಶಾಲಾ ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಪ್ರತಿಯೊಬ್ಬರೂ ಪರಿಸರವನ್ನು ಪ್ರೀತಿಸಿ ಬೆಳೆಸಬೇಕು ಎಂದರು.
ಅಂಬರ್ವ್ಯಾಲಿ ವಸತಿ ಶಾಲೆಯ ಟ್ರಸ್ಟಿಗಳಾದ ಪೂರ್ಣಿಮಾ ಜಯರಾಜ್, ವಾಸಂತಿ ಗಂಗಯ್ಯ ಹೆಗ್ಡೆ, ಶಾಲಾ ಪ್ರಾಂಶುಪಾಲರಾದ ರವಿಕುಮಾರ್ ಉಪಸ್ಥಿತರಿದ್ದರು. ಶಿಕ್ಷಕಿ ನಯನ ಸ್ವಾಗತಿಸಿ, ವಿದ್ಯಾರ್ಥಿ ಅನರ್ಘ್ಯ ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಕಾರ್ಯಕ್ರಮಗಳು ನಡೆದವು.
ಚಿಕ್ಕಮಗಳೂರಿನ ಹೊರ ವಲಯದಲ್ಲಿರುವ ಅಂಬರ್ವ್ಯಾಲಿ ವಸತಿ ಶಾಲೆಯಲ್ಲಿ ಶನಿವಾರ ನಡೆದ ವಾರ್ಷಿಕೋತ್ಸವ ಸಮಾರಂಭವನ್ನು ಅನನ್ಯ ಚೇತನ್ ಅವರು ಸಸಿ ನೆಡುವ ಮೂಲಕ ಉದ್ಘಾಟಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

