ಚಿಕ್ಕಮಗಳೂರು

ಮೆಸ್ಕಾಂಗೆ ಬೀಗ ಹಾಕಿ ಪ್ರತಿಭಟನೆ ನಾಳೆ

Published On :

ಕ.ಪ್ರ.ವಾರ್ತೆ, ಮೂಡಿಗೆರೆ, ಮಾ.23 ಪರೀಕ್ಷಾ ಸಮಯದಲ್ಲಿ ಅಸಮರ್ಪಕ ವಿದ್ಯುತ್ ವಿತರಣೆ ನಡೆಸುತ್ತಿರುವ ಮೆಸ್ಕಾಂ ಕ್ರಮ  ವಿರೋಧಿಸಿ ಮಾ. 25ರಂದು ಪಟ್ಟಣದ ಮೆಸ್ಕಾಂ ಉಪವಿಭಾಗದ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸುವುದಾಗಿ ಬಿಳಗುಳ ಗ್ರಾಮದ ಮುಖಂಡ ಎಂ.ಎಚ್. ಅಮರನಾಥ್ ತಿಳಿಸಿದ್ದಾರೆ.
ಅವರು ಈ ಕುರಿತು ರವಿವಾರ ಹೇಳಿಕೆ ನೀಡಿದ್ದು, ಮೆಸ್ಕಾಂ ಅಧಿಕಾರಿಗಳು ಪಟ್ಟಣ ಮತ್ತು ಗ್ರಾಮೀಣ ಭಾಗಗಳ ವಿದ್ಯುತ್ ಗ್ರಾಹಕರ ನಡುವೆ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ಪ್ರತಿವರ್ಷ ಮಾರ್ಚ್ ಅಂತ್ಯ ಮತ್ತು ಏಪ್ರಿಲ್ ಮಾಹೆಯಲ್ಲಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಯುತ್ತದೆ. ಈ ಸಮಯದಲ್ಲಿ ವಿದ್ಯುತ್ ಕಣ್ಣಮುಚ್ಚಾಲೆಯಿಂದ ವಿದ್ಯಾರ್ಥಿಗಳ ಓದಿಗೆ ತೊಂದರೆ ಉಂಟಾಗುತ್ತದೆ. ಇಡೀ ಒಂದು ವರ್ಷದ ವಿದ್ಯಾರ್ಥಿಗಳ ವ್ಯಾಸಾಂಗಕ್ಕೆ ಅಡಚಣೆಯಾಗುವ ಭೀತಿ ವ್ಯಕ್ತಪಡಿಸಿದ್ದಾರೆ.
ಹಲವು ಕುಟುಂಬ: ಅಲ್ಲದೇ ಮಲೆನಾಡು ಭಾಗವಾದ ಮೂಡಿಗೆರೆ ತಾಲೂಕಿನಲ್ಲಿ ಕಿಲೋ ಮೀಟರುಗಟ್ಟಲೆ ದೂರದಲ್ಲಿ ಒಂದೊಂದು ಮನೆಗಳಲ್ಲಿ ಹಲವು ಕುಟುಂಬಗಳು ವಾಸಿಸುತ್ತಿದ್ದಾರೆ. ಹಗಲು, ರಾತ್ರಿ ವಿದ್ಯುತ್ ಇಲ್ಲದಿರುವುದರಿಂದ ಪ್ರತಿ ನಾಗರಿಕರಿಗೆ ಒಂದಿಲ್ಲೊಂದು ರೀತಿಯಲ್ಲಿ ಸಮಸ್ಯೆ ಎದುರಾಗುತ್ತಿದೆ. ಬೇಸಿಗೆ ಕಾಲದಲ್ಲಿ ಈ ರೀತಿ ಕರೆಂಟು ಕೈ ಕೊವುದಾದರೆ ಮುಂಬರುವ ಮಳೆಗಾಲದಲ್ಲಿ ಮರ, ಗಿಡ ಬಿದ್ದ ಕಾರಣ ಹೇಳಿ ವಿದ್ಯುತ್ ಕಡಿತಗೊಳಿಸಲಾಗುತ್ತದೆ. ಆದ್ದರಿಂದ ಮೆಸ್ಕಾಂ ಅಧಿಕಾರಿಗಳ ಜನ ವಿರೋಧಿ ನೀತಿ ಮತ್ತು ಬೇಜವಾಬ್ದಾರಿತನ ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಕಚೇರಿಗೆ ಬೀಗ ಮುದ್ರೆ ಹಾಕಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.