ಚಿಕ್ಕಮಗಳೂರು

ಅಭಿವೃದ್ಧಿ ಕೆಲಸಗಳೇ ಕಾಂಗ್ರೆಸ್ ಗೆಲವಿಗೆ ಶ್ರೀರಕ್ಷೆ

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಮಾ.24
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಕೆಲಸಗಳು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆ ಆಗಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಅಭಯಚಂದ್ರ ಜೈನ್ ಹೇಳಿದ್ದಾರೆ.
ನಗರದ ಕೆ.ಎಂ.ರಸ್ತೆಯ ಗುತ್ತಿಗೆದಾರರ ಸಂಘದ ಕಟ್ಟಡದಲ್ಲಿ ತೆರೆಯಲಾಗಿರುವ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಕಚೇರಿಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹಲವು ಜನಪರ ಹಾಗೂ ವಿನೂತನ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಅರಣ್ಯ ಹಕ್ಕು ಕಾಯ್ದೆ ಜಾರಿಯಿಂದಾಗಿ ಬಹಳಷ್ಟು ಬಡವರಿಗೆ ಅನುಕೂಲವಾಗಿದೆ. ಬಡ ಮಕ್ಕಳಿಗೆ ಅನುಕೂಲವಾಗಲು ಶಿಕ್ಷಣ ಹಕ್ಕು ಕಾಯ್ದೆ, ಆಡಳಿತದಲ್ಲಿ ಪಾರದರ್ಶಕತೆ ತರಲು ಮಾಹಿತಿ ಹಕ್ಕು ಕಾಯ್ದೆಯಂತಹ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮಾಡಬೇಕು ಎಂದು ಹೇಳಿದರು.
ಮನವಿ:  ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ, 1 ದರಕ್ಕೆ ಕೆ.ಜಿ. ಅಕ್ಕಿ, “PÐÞÁÚºÛVÚÀ’¥ÚM}ÚÔÚ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುವ ಜತೆಗೆ, ಜನಪರ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದಾರೆ. ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಸರಳ, ಸಜ್ಜನರು. ಅವರಿಗೆ ಮತ ನೀಡಿ ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಮಾದರಿ:  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯೆ ಮೋಟಮ್ಮ, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಪಕ್ಷ ದೇಶದಲ್ಲಿ ಇತಿಹಾಸವನ್ನು ನಿರ್ಮಾಣ ಮಾಡಿದೆ. ಹಲವು ವರ್ಷಗಳ ಕಾಲ ಕೇಂದ್ರದಲ್ಲಿ ಆಡಳಿತ ನಡೆಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಒಂದು ದಿಕ್ಕನ್ನು ನೀಡಿದೆ. ಇದು, ಭಾರತ ದೇಶ ಎಲ್ಲಾ ಕ್ಷೇತ್ರಗಳಲ್ಲಿ ಮುಂದುವರಿಯಲು ಪ್ರಮುಖ ಪಾತ್ರ ವಹಿಸಿದ್ದು, ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಹೇಳಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಾರ್ಯಕ್ರಮಗಳನ್ನು ಕಾರ್ಯಕರ್ತರು ಪ್ರತಿ ಮನೆಗೂ ತೆಗೆದುಕೊಂಡು ಹೋಗುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ತ್ಯಾಗದ ಸಂಕೇತ. ಪ್ರಧಾನಿ ಹುದ್ದೆಯನ್ನು ತ್ಯಜಿಸಿ ದೇಶದ ಹಿತ ಕಾಪಾಡಲು ಎಐಸಿಸಿಯಂತಹ ಜವಬ್ದಾರಿಯುತ ಹುದ್ದೆ ನಿಭಾಯಿಸುವ ಜತೆಗೆ ಪಕ್ಷವನ್ನು ಸಂಘಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ತರೀಕೆರೆ ಶಾಸಕ ಶ್ರೀನಿವಾಸ್, ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಪ್ರಧಾನ ಕಾರ್ಯದರ್ಶಿ ಕೆ.ಮಹಮದ್, ಪ್ರಚಾರ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್, ಕೆಪಿಸಿಸಿ ಕಿಸಾನ್ ಘಟಕದ ಉಪಾಧ್ಯಕ್ಷ ಸಚಿನ್ ಮೀಗಾ, ಹಿಂದುಳಿದ ವರ್ಗಗಳ ಘಟಕದ ಜಿಲ್ಲಾಧ್ಯಕ್ಷ ನಾಗರಾಜ್, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಯುವ ಘಟಕದ ಅಧ್ಯಕ್ಷ ಶಿವಕುಮಾರ್, ನಗರಸಭಾ ಮಾಜಿ ಸದಸ್ಯ ಸಂದೀಪ್ ಉಪಸ್ಥಿತರಿದ್ದರು.

ಸಂಹಿತೆ ಉಲ್ಲಂಘನೆ: ಕಾಂಗ್ರೆಸ್ ಚುನಾವಣಾ ಕಚೇರಿಗೆ ಬೀಗ
ಚಿಕ್ಕಮಗಳೂರು:  ನಗರದ ಕೆ.ಎಂ. ರಸ್ತೆಯಲ್ಲಿರುವ ಗುತ್ತಿಗೆದಾರರ ಕಟ್ಟಡದಲ್ಲಿ ಸೋಮವಾರ ಬೆಳಗ್ಗೆ ತೆರೆಯಲಾಗಿದ್ದ ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕಾರಣಕ್ಕಾಗಿ ಚುನಾವಣಾಧಿಕಾರಿಗಳು ಸಂಜೆ ಬೀಗ ಹಾಕಿದ್ದಾರೆ.
ರಾಜ್ಯ ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಬೆಳಗ್ಗೆ 11 ಗಂಟೆಗೆ ಪಕ್ಷದ ಪ್ರಚಾರ ಕಚೇರಿ ಉದ್ಘಾಟಿಸಿದ್ದರು. ಈ ಕಾರ್ಯಕ್ರಮದಲ್ಲಿ ತರೀಕೆರೆ ಶಾಸಕ ಶ್ರೀನಿವಾಸ್, ವಿಧಾನಪರಿಷತ್ ಸದಸ್ಯರಾದ ಮೋಟಮ್ಮ, ಗಾಯಿತ್ರಿ ಶಾಂತೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಚುನಾವಣಾ ಪ್ರಚಾರ ಕಚೇರಿ ತೆರೆಯಬೇಕಾದರೆ ನಿಯಮದ ಪ್ರಕಾರ ಅನುಮತಿ ಪಡೆಯಬೇಕು. ಆದರೆ, ಕಾಂಗ್ರೆಸ್ ಪಕ್ಷ ಅನುಮತಿ ಪಡೆಯದೆ ಕಚೇರಿ ತೆರೆದಿದ್ದು, ಈ ಸಂಬಂಧ ಬಿಜೆಪಿ ನಗರಾಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅವರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.
ಅನುಮತಿ ಪಡೆಯದೆ ಪಕ್ಷದ ಚುನಾವಣಾ ಪ್ರಚಾರ ಕಚೇರಿ ತೆರೆಯಲಾಗಿದೆ. ಅಲ್ಲದೆ, ಸದರಿ ಕಚೇರಿ ಮುಂಭಾಗದಲ್ಲಿ ಸುಮಾರು 20ಕ್ಕೂ ಹೆಚ್ಚುವ ಕಾಂಗ್ರೆಸ್ ಪಕ್ಷದ ಬಾವುಟ ಪ್ರದರ್ಶಿಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದೆ. ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ವರಸಿದ್ಧಿ ವೇಣುಗೋಪಾಲ್ ಮನವಿ ಮಾಡಿದ್ದರು.
ಈ ದೂರಿನನ್ವಯ ಕಾಂಗ್ರೆಸ್ ಕಚೇರಿಗೆ ಚುನಾವಣಾಧಿಕಾರಿಗಳು ಸಂಜೆ ಬೀಗ ಹಾಕಿದರು.
ಈ ಕುರಿತು 'ಕನ್ನಡಪ್ರಭ'ದೊಂದಿಗೆ ಮಾತನಾಡಿದ ಸಹಾಯಕ ಚುನಾವಣಾಧಿಕಾರಿ ರಾಜಗೋಪಾಲ್, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಪ್ರಚಾರ ಕಚೇರಿ ತೆರೆಯುವ ಮುನ್ನ ಅನುಮತಿ ಪಡೆಯಬೇಕು. ಆದರೆ, ಕಾಂಗ್ರೆಸ್ ಪಕ್ಷದವರು ಅನುಮತಿ ಪಡೆದುಕೊಂಡಿಲ್ಲ. ಅದ್ದರಿಂದ ಪ್ರಚಾರ ಕಚೇರಿಗೆ ಬೀಗ ಹಾಕಲಾಗಿದೆ ಎಂದು ಹೇಳಿದರು.
ಇದಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಎಂಸಿಸಿ ತಂಡಕ್ಕೆ ಸೂಚನೆ ನೀಡಲಾಗಿದ್ದು, ವರದಿ ಬಂದ ನಂತರ ಸಂಬಂಧಪಟ್ಟವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.