ಚಿಕ್ಕಮಗಳೂರು

ಎರವಲು ಸೇವೆಗೆ ಅಭ್ಯರ್ಥಿ; ಕಾಂಗ್ರೆಸ್ ಹೇಳಿಕೆಗೆ ಬಿಜೆಪಿ ಆಕ್ಷೇಪ

Published On :

ಚಿಕ್ಕಮಗಳೂರು:  ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಎರವಲು ಸೇವೆ ಮೂಲಕ ಅವಕಾಶ ಮಾಡಿಕೊಟ್ಟಿದೆ ಎಂದು ಕಾಂಗ್ರೆಸ್ ನೀಡಿರುವ ಹೇಳಿಕೆ ಹತಾಶೆಯಾಗಿದ್ದಾಗಿದೆ ಎಂದು ಬಿಜೆಪಿ ನಗರಾಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಆರೋಪಿಸಿದ್ದಾರೆ.
ಪಾದಯಾತ್ರೆಯ ವೇಳೆಯಲ್ಲಿ ಮತದಾರರು ಹಾಗೂ ಅವರ ಪಕ್ಷದವರು ಸ್ಪಂದಿಸದಿದ್ದರಿಂದ, ಸೋಲಿನ ಭೀತಿಯಿಂದಾಗಿ ಕಾಂಗ್ರೆಸ್, ಬಿಜೆಪಿಯ ವಿರುದ್ಧ ಆರೋಪ ಮಾಡುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಹೇಳಿದರು.
ಕೇಂದ್ರದ ಯುಪಿಎ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದರಿಂದ ಕಾಂಗ್ರೆಸ್ ಮತ ಕೇಳಲು ಹಿಂಜರಿಯುತ್ತಿದೆ. ಬಿಜೆಪಿ ಅಭ್ಯರ್ಥಿ ಹೊರಗಿನವರು. ಅವರಿಗೆ ಸಮಸ್ಯೆಯ ಅರಿವಿಲ್ಲ ಎಂಬ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಜನತೆ ಬಿಜೆಪಿ ಅಭ್ಯರ್ಥಿಗೆ ಆಶೀರ್ವಾದ ಮಾಡಲಿದ್ದಾರೆ ಎಂದರು.
ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಮಾ. 26ರಂದು ನಾಮಪತ್ರ ಸಲ್ಲಿಸಲಿದ್ದು, ಅಂದು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿರುವ ಬಿಜೆಪಿಯ 11 ಶಕ್ತಿ ಕೇಂದ್ರಗಳು ದೇವಾಲಯಗಳಲ್ಲಿ ಅಭ್ಯರ್ಥಿಯ ಗೆಲವಿಗಾಗಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.