ವಿದ್ಯುನ್ಮಾನ ಮತಯಂತ್ರ ವಿತರಿಸಿದ ಜಿಲ್ಲಾಧಿಕಾರಿ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಮಾ.24
ನಗರಸಭಾ ಸಭಾಂಗಣದಲ್ಲಿ ದಾಸ್ತಾನಿರಿಸಿದ್ದ ವಿದ್ಯುನ್ಮಾನ ಮತಯಂತ್ರಗಳನ್ನು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಪರಿಶೀಲಿಸಿದರು.
ನಗರಸಭೆ ಸಭಾಂಗಣದಲ್ಲಿ ಲೋಕಸಭಾ ಚುನಾವಣೆಗೆ ಸಿದ್ಧಗೊಳಿಸಿದ ಮತಯಂತ್ರಗಳನ್ನು ಸೋಮವಾರ ವೀಕ್ಷಣೆ ಮಾಡಿ ಮಾತನಾಡಿದ ಅವರು, ಬ್ಯಾಲೆಟ್ ಯೂನಿಟ್ ಮತ್ತು ನಿಯಂತ್ರಣಾ ಘಟಕ ಯಂತ್ರಗಳನ್ನು ಈಗಾಗಲೇ ರಾಜಕೀಯ ಪಕ್ಷಗಳ ಏಜೆಂಟರ ಉಪಸ್ಥಿತಿಯಲ್ಲಿ ಮತ ಯಂತ್ರಗಳನ್ನು ರ್ಯಾಂಡಮೈಸೇಷನ್ ಮೂಲಕ ಹಂಚಿಕೆ ಆಗಿದೆ. ಹಂಚಿಕೆಯಾದ ಮತಯಂತ್ರಗಳನ್ನು ಸಂಬಂಧಿಸಿದ ವಿಧಾನಸಭಾ ಕ್ಷೇತ್ರವಾರು ವಿಂಗಡಿಸಿ ಸಂಬಂಧಿಸಿದ ಚುನಾವಣಾಧಿಕಾರಿಗಳಿಗೆ ಸುಪರ್ದಿಗೆ ನೀಡಲಾಗುತ್ತಿದೆ ಎಂದು ಹೇಳಿದರು.
ತಾಲೂಕಿನ ಮತಯಂತ್ರಗಳನ್ನು ವ್ಯವಸ್ಥಿತ ರೀತಿಯಲ್ಲಿ ದಾಸ್ತಾನು ಮಾಡಲು ಸೂಚನೆ ನೀಡಲಾಗಿದೆ. ಜಿಲ್ಲೆಗೆ ಈಗಾಗಲೇ 1710 ಬ್ಯಾಲೆಟ್ ಯೂನಿಟ್ಗಳು ಹಾಗೂ 1340 ಕಂಟ್ರೋಲ್ ಯೂನಿಟ್ಗಳು ಲಭ್ಯವಿದೆ. ಇವುಗಳಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ 284, ಮೂಡಿಗೆರೆ ವಿಧಾನಸಭಾ ಕ್ಷೇತ್ರಕ್ಕೆ 255, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕೆ 272, ತರೀಕೆರೆ ವಿಧಾನಸಭಾ ಕ್ಷೇತ್ರಕ್ಕೆ 252 ಹಾಗೂ ಕಡೂರು ವಿಧಾನಸಭಾ ಕ್ಷೇತ್ರಕ್ಕೆ 269 ಮತಯಂತ್ರಗಳು ಹಂಚಿಕೆಯಾಗಿದೆ. ಶೇ.10ರಷ್ಟು ಮತಯಂತ್ರಗಳನ್ನು ಕಾಯ್ದಿರಿಸಲಾಗಿದೆ ಎಂದರು.
ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಅರ್ಚನಾ, ಉಪವಿಭಾಗಾಧಿಕಾರಿ ಚೆನ್ನಬಸಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಾಲಚಂದ್ರ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
5ನೇ ದಿನ 2 ಪತ್ರ ಸಲ್ಲಿಕೆ
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ನಾಮಪತ್ರ ಸಲ್ಲಿಕೆಗೆ 5ನೇ ದಿನವಾದ ಸೋಮವಾರ 2 ನಾಮಪತ್ರ ಸಲ್ಲಿಕೆಯಾಗಿವೆ. ಸಿಪಿಐ ಪಕ್ಷದ ವಿಜಯಕುಮಾರ್ ಮತ್ತು ಪಕ್ಷೇತರ ಅಭ್ಯರ್ಥಿ ಸುಂದರ್ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಇದುವರೆಗೆ ಬಿಜೆಪಿ ಪಕ್ಷದಿಂದ 1, ಜೆಡಿಎಸ್ನಿಂದ 2, ಸಿಪಿಐ 1 ಮತ್ತು ಪಕ್ಷೇತರ ಅಭ್ಯರ್ಥಿಯ 1 ನಾಮಪತ್ರ ಸೇರಿದಂತೆ ಒಟ್ಟು 5 ನಾಮಪತ್ರ ಸಲ್ಲಿಕೆಯಾಗಿವೆ. ನಾಮಪತ್ರಗಳ ಸಲ್ಲಿಕೆಗೆ ಮಾ.26 ಕೊನೆ ದಿನ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಉಡುಪಿ ಜಿಲ್ಲಾಧಿಕಾರಿ ಡಾ. ಮುದ್ದುಮೋಹನ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

