ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ 15,613 ವಿದ್ಯಾರ್ಥಿಗಳು
ಚಿಕ್ಕಮಗಳೂರು: ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ. 28 ರಿಂದ ಏಪ್ರಿಲ್ 9 ರವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ 15,613 ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದಾರೆ.
ಜಿಲ್ಲೆಯ 66 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿ ಪ್ರದೇಶವನ್ನು ಮಾ. 28 ರಿಂದ ಏ. 9 ರವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ ಹಾಗೂ ಪರೀಕ್ಷಾ ಕೇಂದ್ರದ ಸಮೀಪವಿರುವ ಎಲ್ಲಾ ಜೆರಾಕ್ಸ್ ಕೇಂದ್ರಗಳನ್ನು ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಕಡ್ಡಾಯವಾಗಿ ಮುಚ್ಚುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
66 ಪರೀಕ್ಷಾ ಕೇಂದ್ರಗಳ ಪೈಕಿ ಖಾಸಗಿಯಾಗಿ ಪರೀಕ್ಷೆ ತೆಗೆದುಕೊಂಡಿರುವವರು ಪರೀಕ್ಷೆ ಬರೆಯುವ ಚಿಕ್ಕಮಗಳೂರಿನ ಸೆಂಟ್ ಜೋಸೆಪ್ ಬಾಲಕರ ಪ್ರೌಢಶಾಲೆ, ಎಂಇಎಸ್ ಬಾಲಕಿಯರ ಪ್ರೌಢಶಾಲೆ ಹಾಗೂ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಕಡೂರು ತಾಲೂಕಿನ ಹೇಮಗಿರಿಯ ಮಲ್ಲಿಕಾರ್ಜುನ ಸ್ವಾಮಿ ಗ್ರಾಮಾಂತರ ಪ್ರೌಢಶಾಲೆ, ತರೀಕೆರೆ ತಾಲೂಕಿನ ಹುಣಸಘಟ್ಟ ಹಾಗೂ ಕುಡ್ಲೂರಿನ ಪ್ರೌಢಶಾಲೆಗಳ ಕೇಂದ್ರಗಳನ್ನು ಸೂಕ್ಷ್ಮ ಕೇಂದ್ರಗಳೆಂದು ಗುರುತಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಬಿ. ರಾಜಪ್ಪ ಅವರು ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎರಡು ಸಭೆ ನಡೆಸಲಾಗಿದ್ದು, ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು, ಡಿಡಿಪಿಐ, ಶಿಕ್ಷಣಾಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ, ಗಿರಿಜನ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಜಾಗೃತ ದಳ ರಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಇದರ ಜತೆಗೆ ತಾಲೂಕು ಮಟ್ಟದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಪಂನ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ತಹಸೀಲ್ದಾರ್ ನೇತೃತ್ವದಲ್ಲಿ ಮೂರು ಜಾಗೃತ ದಳ ರಚನೆ ಮಾಡಲಾಗಿದೆ. ತರೀಕೆರೆ ಹಾಗೂ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಪ್ರತ್ಯೇಕ ಸಂಚಾರಿ ಜಾಗೃತ ದಳ ರಚಿಸಲಾಗಿದೆ. ಪ್ರತಿ ಕೇಂದ್ರಗಳಲ್ಲಿ ಇಬ್ಬರು ಸಿಬ್ಬಂದಿ ಹೊಂದಿರುವ ಸ್ಥಾನಿಕ ಜಾಗೃತ ದಳದ ಜತೆಗೆ ಚಿಕ್ಕಮಗಳೂರು ಜಿಲ್ಲೆಯ 8 ವಲಯಗಳಿಗೆ ನೆರೆಯ ಹಾಸನ ಜಿಲ್ಲೆಯ 8 ಮಂದಿ ಅಧಿಕಾರಿಗಳ ಅಂತರ ಜಿಲ್ಲಾ ಜಾಗೃತ ದಳ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಪರೀಕ್ಷೆಯಲ್ಲಿ ಯಾವುದೇ ರೀತಿಯಲ್ಲಿ ಗೊಂದಲ ನಿರ್ಮಾಣವಾಗದಂತೆ ನೋಡಿಕೊಳ್ಳುವ ಸಲುವಾಗಿ ಜಿಲ್ಲೆಯ ಎಲ್ಲಾ 66 ಕೇಂದ್ರಗಳ ಮುಖ್ಯಸ್ಥರಿಗೆ ತರಬೇತಿಯನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಪರೀಕ್ಷಾ ಕೇಂದ್ರಗಳು
ಸರ್ಕಾರಿ ಬಾಲಿಕಾ ಪದವಿಪೂರ್ವ ಕಾಲೇಜು, ಬಸವನಹಳ್ಳಿ, ಚಿಕ್ಕಮಗಳೂರು, ಜೆವಿಎಸ್ ಪ್ರೌಢಶಾಲೆ, ವಿಜಯಪುರ, ಚಿಕ್ಕಮಗಳೂರು, ಸರ್ಕಾರಿ ಲಾಲ್ ಬಹದ್ದೂರ್ ಶಾಸ್ತ್ರೀ ಪದವಿಪೂರ್ವ ಕಾಲೇಜು, ಚಿಕ್ಕಮಗಳೂರು, ಮೌಂಟೇನ್ವ್ಯೂ ಪ್ರೌಢಶಾಲೆ, ವಿದ್ಯಾನಗರ, ಚಿಕ್ಕಮಗಳೂರು, ಸರ್ಕಾರಿ ಪದವಿಪೂರ್ವ ಕಾಲೇಜ್, ಪ್ರೌಢಶಾಲಾ ವಿಭಾಗ ಬೇಲೂರು ರಸ್ತೆ, ಚಿಕ್ಕಮಗಳೂರು, ಎಂಇಎಸ್ ಬಾಲಿಕಾ ಪ್ರೌಢಶಾಲೆ, ರತ್ನಗಿರಿ ರಸ್ತೆ, ಚಿಕ್ಕಮಗಳೂರು, ಟೌನ್ ಮಹಿಳಾ ಸಮಾಜ, ಪ್ರೌಢಶಾಲೆ, ಚಿಕ್ಕಮಗಳೂರು, ಸರ್ಕಾರಿ ಪದವಿಪೂರ್ವ ಕಾಲೇಜು, ಕಾಲೇಜು ವಿಭಾಗ, ಬೇಲೂರು ರಸ್ತೆ, ಚಿಕ್ಕಮಗಳೂರು, ಸೆಂಟ್ ಜೋಸೆಫ್ ಬಾಲಿಕಾ ಪ್ರೌಢಶಾಲೆ, ಚಿಕ್ಕಮಗಳೂರು, ಸೆಂಟ್ ಜೋಸೆಫ್ ಬಾಲಕರ ಪ್ರೌಢಶಾಲೆ, ಜ್ಯೋತೀನಗರ, ಚಿಕ್ಕಮಗಳೂರು, ಭುವನೇಶ್ವರಿ ಬಾಲಿಕಾ ಪ್ರೌಢಶಾಲೆ, ಬೇಲೂರು ರಸ್ತೆ, ಚಿಕ್ಕಮಗಳೂರು, ವಿಶ್ವವಿದ್ಯಾಲಯ ಪ್ರೌಢಶಾಲೆ, ಚಿಕ್ಕಮಗಳೂರು, ಸಂಜೀವಿನಿ ಪ್ರೌಢಶಾಲೆ, ಕೆ.ಎಂ. ರಸ್ತೆ ಗೃಹ ಮಂಡಳಿ, ಚಿಕ್ಕಮಗಳೂರು, ಎಸ್ಎಸ್ಆರ್ ಪ್ರಾಯೋಗಿಕ ಪ್ರೌಢಶಾಲೆ ಚಿಕ್ಕಮಗಳೂರು, ಸರ್ಕಾರಿ ಪ್ರೌಢಶಾಲೆ, ಆಲ್ದೂರು ಚಿಕ್ಕಮಗಳೂರು ತಾಲೂಕು, ಸರ್ಕಾರಿ ಪ್ರೌಢಶಾಲೆ, ಕಳಸಾಪುರ ಚಿಕ್ಕಮಗಳೂರು ತಾಲೂಕು, ಪೂರ್ಣಪ್ರಜ್ಞಾ ಪ್ರೌಢಶಾಲೆ, ಸಂಗಮೇಶ್ವರಪೇಟೆ, ಚಿಕ್ಕಮಗಳೂರು ತಾಲೂಕು, ಸರ್ಕಾರಿ ಪ್ರೌಢಶಾಲೆ, ಕೆ.ಬಿ. ಹಾಳ್, ಚಿಕ್ಕಮಗಳೂರು ತಾಲೂಕು, ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ, ಮಾಚಗೊಂಡನಹಳ್ಳಿ ಚಿಕ್ಕಮಗಳೂರು ತಾಲೂಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

