ಚಿಕ್ಕಮಗಳೂರು

ವಿವಿಧೆಡೆ ರಾಜಕೀಯ ಪಕ್ಷಗಳ ಪ್ರಚಾರ ಭರಾಟೆ

Published On :

ಚಿಕ್ಕಮಗಳೂರು: ನಾಮಪತ್ರ ಸಲ್ಲಿಕೆಗೆ ಉಡುಪಿಯಲ್ಲಿ ಬುಧವಾರ ಜನಜಾತ್ರೆ ಸೇರಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಕೆಲವು ರಾಜಕೀಯ ಪಕ್ಷಗಳು ಕಾರ್ಯಕರ್ತರ ಸಭೆಗಳು ನಡೆಸಿದವು.
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಉಡುಪಿಯಲ್ಲಿ ಬುಧವಾರ ನಾಮಪತ್ರ ಸಲ್ಲಿಸಿದರು. ಅವರಿಗೆ ಒಳ್ಳೆಯದಾಗಲೀ ಎಂದು ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರು ಚಿಕ್ಕಮಗಳೂರಿನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದರ ಜತೆಗೆ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರು ದರ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಜೆಡಿಎಸ್ ಪ್ರಚಾರ: ಕ್ಷೇತ್ರವಾರು ಚುನಾವಣಾ ಪ್ರಚಾರ ನಡೆಸುತ್ತಿರುವ ಜೆಡಿಎಸ್ ಅಭ್ಯರ್ಥಿ ವಿ. ಧನಂಜಯಕುಮಾರ್ ಅವರು ಮಂಗಳವಾರದಂದು ಮಲೆನಾಡಿನ ತಾಲೂಕುಗಳಲ್ಲಿ ಪ್ರಚಾರ ನಡೆಸಿ, ಬುಧವಾರದಂದು ತರೀಕೆರೆ ಹಾಗೂ ಚಿಕ್ಕಮಗಳೂರಿನಲ್ಲಿ ಕಾರ್ಯಕರ್ತರ ಸಭೆಯನ್ನು ನಡೆಸಿದರು. ನಗರದ ಸಿಪಿಐ ಕಚೇರಿಯಲ್ಲಿ ಚಿಕ್ಕಮಗಳೂರು ನಗರದ 35 ವಾರ್ಡ್‌ಗಳ ಭೂತ್ ಮಟ್ಟದ ಕಾರ್ಯದರ್ಶಿಗಳ ಸಭೆ ನಡೆಯಿತು.
ಭ್ರಷ್ಟರನ್ನು ಸೋಲಿಸಿ: ಈ ಸಭೆಯಲ್ಲಿ ಮಾತನಾಡಿದ ಸಿಪಿಐ ಪಕ್ಷದ ಅಭ್ಯರ್ಥಿ ಎಸ್. ವಿಜಯಕುಮಾರ್, ಭ್ರಷ್ಟರನ್ನು ಚುನಾವಣೆಯಲ್ಲಿ ಸೋಲಿಸಲು ಜನಸಾಮಾನ್ಯರ ಪಕ್ಷವಾದ ಭಾರತ ಕಮ್ಯೂನಿಸ್ಟ್ ಪಕ್ಷಕ್ಕೆ ಮತ ನೀಡುವಂತೆ ಮತದಾರರನ್ನು ಪ್ರೇರೇಪಿಸಬೇಕೆಂದರು.
ಪಕ್ಷ ಜಿಲ್ಲಾ ಕಾರ್ಯದರ್ಶಿ ಜಿ. ರಘುರವರು ಮಾತನಾಡಿ, ಬಿಜೆಪಿ, ಕಾಂಗ್ರೆಸ್ ಪಕ್ಷಗಳ ಕೆಲವು ಸಚಿವರುಗಳು ಜೈಲಿ ಹೋಗಿ ಬಂದಿದ್ದಾರೆ. ಇಂತಹ ಪಕ್ಷ ಮತ್ತು ವ್ಯಕ್ತಿಗಳನ್ನು ಸೋಲಿಸಬೇಕು ಎಂದು ಹೇಳಿದರು.
ಕಾಂಗ್ರೆಸ್ ಮುಖವಾಡ: ನಗರಸಭಾ ಮಾಜಿ ಸದಸ್ಯ ಜೆರ್ಮಿ ಲೋಬೊ ಮಾತನಾಡಿ, ಎನ್.ಡಿ.ಎ. ಸರ್ಕಾರದಲ್ಲಿ ಹಗರಣಗಳು ನಡೆದಿದ್ದು ವಾಜಪೇಯಿಗಿಂತ ಮೋದಿಯವರನ್ನು ಯೋಗ್ಯರು ಎಂಬಂತೆ ಬಿಜೆಪಿ ಬಿಂಬಿಸುತ್ತಿದೆ. ಕಾಂಗ್ರೆಸ್ ಜಾತ್ಯತೀತದ ಮುಖವಾಡ ಧರಿಸಿ ಭ್ರಷ್ಟಚಾರದ ಕೂಪದಲ್ಲಿ ಮುಳುಗಿದೆ ಎಂದು ಆರೋಪಿಸಿದರು.  ಸುಂದರ್, ನಾಗರಾಜ್, ಸಂಗಮೇಶ್, ರಂಗನಾಥ್ ಹಾಗೂ ರಮೇಶ್ ಉಪಸ್ಥಿತರಿದ್ದರು.  ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಬುಧವಾರ ಉಡುಪಿಯಲ್ಲಿ ನಾಮಪತ್ರ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ಮುಖಂಡರು ಉಡುಪಿಗೆ ತೆರಳಿದ್ದರು. ಆದುದರಿಂದ ಜಿಲ್ಲೆಯಲ್ಲಿ ಪ್ರಚಾರ ಕಾರ್ಯ ನಡೆದಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.