ಸಹಿ ಸಂಗ್ರಹ ಅಭಿಯಾನ, ಪ್ರತಿಜ್ಞಾವಿಧಿ ಬೋಧನೆ
ಚಿಕ್ಕಮಗಳೂರು: ಲೋಕಸಭೆ ಚುನಾನಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮಾಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ವತಿಯಿಂದ ನಗರದಲ್ಲಿ ಬುಧವಾರ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.
ಐಡಿಎಸ್ ಜಿ ಸರ್ಕಾರಿ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಬಿ.ಎಸ್. ಶೇಖರಪ್ಪ ಸಹಿ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಇದೇ ವೇಳೆ ತಪ್ಪದೇ ಮತದಾನ ಮಾಡುವ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಈ ವೇಳೆ ಜಿಲ್ಲಾ ಚುನಾವಣಾಧಿಕಾರಿಗಳು ಮತದಾನ ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ಕರ್ತವ್ಯ, ಅದನ್ನು ನಾಗರಿಕರು ಅರಿಯಬೇಕು. ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೇ ಸ್ವಯಂ ಪ್ರೇರಿತರಾಗಿ ಮತಗಟ್ಟೆಗಳಿಗೆ ತೆರಳಿ ತಪ್ಪದೇ ಮತದಾನ ಮಾಡುವುದರ ಜೊತೆಗೆ ಇತರರನ್ನು ಪ್ರೇರೇಪಿಸಿ ಅವರು ಸಹ ಮತದಾನ ಮಾಡುವಂತೆ ನೋಡಿಕೊಳ್ಳಬೇಕು ಎಂದು ಯುವ ಜನತೆಗೆ ಕರೆ ನೀಡಿದರು.
ನಂತರ ವಿದ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿ ಮತ್ತು ಸಾರ್ವಜನಿಕರು ಮತದಾನ ಮಾಡುವ ಕುರಿತ ಹೇಳಿಕೆ ಪತ್ರಕ್ಕೆ ಅಂಕಿತ ಹಾಕಿದರು.
ಇದೇ ವೇಳೆ ಐ.ಡಿ.ಎಸ್.ಜಿ. ಕಾಲೇಜಿನ ಪ್ರಾಂಶುಪಾಲೆ ಜರೀನ ಕೌಸರ್, ಬಿ. ತಿಪ್ಪೇರುದ್ರಪ್ಪ, ಜಿಲ್ಲಾ ಅಧಿಕಾರಿ ಲಕ್ಷ್ಮಣ್ ನಾಯಕ್, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಇದ್ದರು.
ಮತದಾನಕ್ಕೆ ಅವಕಾಶ ನೀಡಲು ಸೂಚನೆ
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಗೆ ಏ.17ರಂದು ಕ್ಷೇತ್ರ ವ್ಯಾಪ್ತಿಯ ಎಲ್ಲ ವಾಣಿಜ್ಯ, ಕೈಗಾರಿಕಾ ಸಂಸ್ಥೆಗಳು, ಅಂಗಡಿ ಮುಂಗಟ್ಟು ಮತ್ತು ವೇತನ, ಸಂಬಳ ಹಾಗೂ ಇತರೆ ರೀತ್ಯಾ ಭತ್ಯೆ ಇತ್ಯಾದಿಗಳ ಆಧಾರವಾಗಿ ನೇಮಕ ಮಾಡಿಕೊಂಡಿರುವ ಎಲ್ಲಾ ವಹಿವಾಟುದಾರರು, ಮುಖ್ಯಸ್ಥರು ತಮ್ಮ ಮತದಾರ ನೌಕರರು, ಸಿಬ್ಬಂದಿ ಮತ್ತು ಕೆಲಸಗಾರರಿಗೆ ವೇತನ ಸಹಿತವಾಗಿ ರಜೆ ನೀಡಲು ಅಥವಾ ಮತದಾನಕ್ಕೆ ಸಮಯಾವಕಾಶ ಕಲ್ಪಿಸಿಕೊಡಬೇಕು ಹಾಗೂ ಮತದಾರರು ಸಂತೆ, ಜಾತ್ರೆಗಳಿಗೆ ಆದ್ಯತೆ ನೀಡಿ ಮತದಾನವನ್ನು ಕೈಬಿಡುವ ಸಂಭವವಿರುವುದರಿಂದ ಮತದಾನದ ದಿನದಂದು ಸಂತೆ ಜಾತ್ರೆ ನಡೆಯುವುದನ್ನು ನಿರ್ಬಂಧಿಸಿ ಜಿಲ್ಲಾ ಚುನಾವಣಾಧಿಕಾರಿ ಬಿ.ಎಸ್. ಶೇಖರಪ್ಪ ಆದೇಶಿಸಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಏ.17ರಂದು ಜಿಲ್ಲೆಯ ಈ ಕೆಳಕಂಡ ಗ್ರಾಮ, ಪಟ್ಟಣಗಳಲ್ಲಿ ನಡೆಯುವ ಸಂತೆ ಹಾಗೂ ಜಾತ್ರೆ ನಿಷೇಧಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಲಕ್ಯಾ ಹೋಬಳಿ ಸಿಂದಿಗೆರೆ ವೃತ್ತದ ಭಕ್ತರಹಳ್ಳಿ ಗ್ರಾಮದಲ್ಲಿ ನಡೆಯುವ ಶ್ರೀ ಚಾಮುಂಡೇಶ್ವರಿ ಅಮ್ಮನವರ ಜಾತ್ರೆ, ತರೀಕೆರೆ ತಾಲೂಕಿನ ಹಾದಿಕೆರೆ ಗ್ರಾಮದಲ್ಲಿ ಚನ್ನಬಸವೇಶ್ವರ ಸ್ವಾಮಿ ಹಾಗೂ ಮಲ್ಲೇಶ್ವರ ದೇವರ ಜಾತ್ರೆ, ಕಡೂರು ತಾಲೂಕಿನ ಪಂಚನಹಳ್ಳಿ ಹೋಬಳಿ ಡಿ.
ಹೊಸಳ್ಳಿ ಗ್ರಾಮದಲ್ಲಿ ನಡೆಯಲಿರುವ ಶ್ರೀ ರಂಗನಾಥ ಸ್ವಾಮಿ ಜಾತ್ರೆ, ಮೂಡಿಗೆರೆ
ತಾಲೂಕಿನ ಗೋಣಿಬೀಡು ಹೋಬಳಿ ಗೋಣಿಬೀಡು ಗ್ರಾಮದಲ್ಲಿ ನಡೆಯಲಿರುವ ಸಂತೆ, ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ನಡೆಯುವ ಸಂತೆ, ಕಡೂರು ತಾಲೂಕಿನ ಸಿಂಗಟಗೆರೆ ಗ್ರಾಮದಲ್ಲಿ ನಡೆಯುವ ಸಂತೆ, ಕಡೂರು ತಾಲೂಕಿನ ಸಖರಾಯಪಟ್ಟಣ ಹೋಬಳಿ ದೇವನೂರು ಗ್ರಾಮದಲ್ಲಿ ನಡೆಯಲಿರುವ ಸಂತೆ ನಡೆಯುವುದು ನಿರ್ಬಂಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

