ನೀರಿನ ಸಮಸ್ಯೆ ಬಗೆಹರಿಸಲು ಶಾಸಕ ಆಗ್ರಹ
ಕ.ಪ್ರ. ವಾರ್ತೆ ಚಿಕ್ಕಮಗಳೂರು ಮಾ.27
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿರುವ ಗ್ರಾಮಗಳ ಪಟ್ಟಿಯನ್ನು ಜಿಲ್ಲಾ ಪಂಚಾಯಿತಿಗೆ ಸಲ್ಲಿಸಲಾಗಿದ್ದು, ಕೂಡಲೇ ಕ್ರಮ ವಹಿಸುವಂತೆ ತಿಳಿಸಲಾಗಿದೆ ಎಂದು ಶಾಸಕ ಬಿ.ಬಿ. ನಿಂಗಯ್ಯ ಹೇಳಿದ್ದಾರೆ.
ಕ್ಷೇತ್ರದ ಬಯಲು ಪ್ರದೇಶವಾಗಿರುವ ಅಂಬಳೆ ಹೋಬಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ಅಗತ್ಯವಿರುವ ಕಡೆಗಳಲ್ಲಿ ಬೋರ್‌ವೆಲ್ ಕೊರೆಸಬೇಕು. ಅಲ್ಲಿವರೆಗೆ ಟ್ಯಾಂಕರ್ ಮೂಲಕ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುವಂತೆ ತಿಳಿಸಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ಹೇಳಿದರು.
ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದ್ದರಿಂದ ಪರೀಕ್ಷಾ ಸಮಯವಾಗಿದ್ದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ ಎಂದ ಅವರು, ಚಿಕ್ಕಮಗಳೂರು ವಿಭಾಗದ ಮೆಸ್ಕಾಂನಲ್ಲಿ ಸಹಾಯಕ ಎಂಜಿನಿಯರ್, ಜ್ಯೂನಿಯರ್ ಎಂಜಿನಿಯರ್ ಒಟ್ಟು 32 ಮಂಜೂರು ಹುದ್ದೆಗಳಿದ್ದು, ಈ ಪೈಕಿ 14 ಹುದ್ದೆಗಳು ಖಾಲಿ ಇವೆ. 440 ಲೈನ್‌ಮ್ಯಾನ್ ಮಂಜೂರು ಹುದ್ದೆಗಳಲ್ಲಿ 162 ಹುದ್ದೆಗಳು ಮಾತ್ರ ಭರ್ತಿಯಾಗಿವೆ. ಈ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದೆ ಎಂದು ತಿಳಿಸಿದರು.
ಶೋಭಾ ಕರಂದ್ಲಾಜೆ ಅವರು ಇಂಧನ ಸಚಿವರಾಗಿದ್ದಾಗ, ವಿದ್ಯುತ್ ಸಮಸ್ಯೆ ಇತ್ತು. ಮಲೆನಾಡಿನ ಹಲವೆಡೆ ಹಳೆಯದಾದ ವಿದ್ಯುತ್ ತಂತಿಗಳು ತುಂಡಾಗಿ ಬಿದ್ದು ಕಾಫಿ ತೋಟಗಳಿಗೆ ಹಾನಿ ಸಂಭವಿಸುತ್ತಿದೆ. ವಿದ್ಯುತ್ ಸಮಸ್ಯೆ ಬಗೆಹರಿಸಲು ವ್ಯವಸ್ಥಿತವಾದ ಯೋಜನೆಯನ್ನು ಸರ್ಕಾರ ರೂಪಿಸಬೇಕು. ಈ ಕೆಲಸ ಮಾಡಲು ಸಾಧ್ಯವಾಗದೆ ಹೋದರೆ ಖಾಸಗೀಕರಣಗೊಳಿಸಬೇಕೆಂದು ಹೇಳಿದರು.
ಕುದುರೆಮುಖದಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 172 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಶಾಲೆಯನ್ನು ಏಪ್ರಿಲ್ 1 ರಂದು ಮುಚ್ಚಲು ತೀರ್ಮಾನ ಕೈಗೊಳ್ಳಲಾಗಿದೆ.
ಈ ಶಾಲೆ ಮುಚ್ಚುವುದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಲಿದೆ. ಈ ಶಾಲೆಯನ್ನು ಮುಚ್ಚಬಾರದೆಂದು ಮಾನವ ಸಂಪನ್ಮೂಲ ಸಚಿವರನ್ನು ಲೋಕಸಭಾ ಚುನಾವಣಾ ನಂತರ ಭೇಟಿ ಮಾಡಿ ಆಗ್ರಹಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

