ಎಲ್‌ಇಡಿ ಬೃಹತ್‌ಪರದೆಯಲ್ಲಿ ಬಿಜೆಪಿ ಪ್ರಚಾರ
ಶಿವಮೊಗ್ಗ: ಬೃಹತ್ ಎಲ್‌ಇಡಿ ಪರದೆಯ ಮೇಲೆ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಶುಕ್ರವಾರ ವಿಧ್ಯುಕ್ತ ಚಾಲನೆ ದೊರೆಯಿತು.
2014ರ ಲೋಕಸಭಾ ಚುನಾವಣೆಯನ್ನು ಬಿಜೆಪಿಯು ತನ್ನ ವಿಶಿಷ್ಟ ರೂಪುರೇಷೆಗಳೊಂದಿಗೆ ಭರದ ಪ್ರಚಾರ ನಡೆಸಿದ್ದು, ಈಗ ಬೃಹತ್ ಎಲ್‌ಇಡಿ ಪರದೆಯ ಮೇಲೆ ಎನ್‌ಡಿಎ ಅಧಿಕಾರ ಅವಧಿಯಲ್ಲಿ ನಡೆದ ಆಡಳಿತ ವ್ಯವಸ್ಥೆ ಮತ್ತು ಅಭಿವೃದ್ಧಿ ಕಾರ್ಯ ಹಾಗೂ ಯುಪಿಎ ಆಡಳಿತ ಅವಧಿಯಲ್ಲಿ ನಡೆದ ದುರಾಡಳಿತ ಮತ್ತು ವೈಫಲ್ಯ ಪ್ರಸ್ತುತಪಡಿಸಲಿದೆ.
ಹಾಗೆಯೇ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ವ್ಯಕ್ತಿತ್ವ, ದೂರದೃಷ್ಟಿತ್ವ, ಅವರು ಗುಜರಾತ್‌ನಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಯೋಚನೆ ಮತ್ತು ಯೋಜನೆ, ರಾಷ್ಟ್ರೀಯ ಸುರಕ್ಷತೆ ಇನ್ನಿತರ ಪ್ರಮುಖ ಅಂಶಗಳನ್ನೊಳಗೊಂಡ ಚಿತ್ರಗಳು ಈ ಪರದೆಯ ಮೇಲೆ ಅನಾವರಣಗೊಳ್ಳಲಿವೆ. ಅಲ್ಲದೆ, ಯಡಿಯೂರಪ್ಪ ಅವರ ಅಭಿವೃದ್ಧಿ ಕಾರ್ಯಗಳು ಮತ್ತು ದೃಷ್ಟಿಕೋನ ಇವುಗಳ ಚಿತ್ರಣವೂ ಈ ಬೃಹತ್ ಪರದೆಯ ಮೇಲೆ ಅನಾವರಣಗೊಳ್ಳಲಿದೆ ಎಂದು ಜಿಲ್ಲಾ ಬಿಜೆಪಿ ತಿಳಿಸಿದೆ.
ಜಿಲ್ಲಾದ್ಯಂತ ಸಂಚರಿಸಿ ಪ್ರಚಾರ ಕಾರ್ಯ ನಡೆಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

